ಚಾಲಾಕಿ ಅಂತರರಾಜ್ಯ ಕಳ್ಳ ಬೆಳ್ತಂಗಡಿ ಪೊಲೀಸರ ಬಲೆಗೆ
Friday, September 29th, 2023ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ […]