ಎರಡು ಲಾರಿಗಳ ನಡುವೆ ಡಿಕ್ಕಿ: ಚಾಲಕರ ಸ್ಥಿತಿ ಗಂಭೀರ
Friday, November 30th, 2018ಮೈಸೂರು: ಓವರ್ ಟೇಕ್ ಭರದಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು-ಗುಂಡ್ಲುಪೇಟೆ ರಸ್ತೆಯ ಹಿರಿಕಟ್ಟಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 212 ರಲ್ಲಿ ನಡೆದ ಅಪಘಾತದಿಂದ ಓರ್ವ ಚಾಲಕನ ಕಾಲು ತುಂಡಾಗಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಗಂಟೆಗಂಟಲೇ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.