ಅಂತರ ಜಿಲ್ಲಾ ದೇವಸ್ಥಾನ ಕಳವು ಜಾಲ ಬೇಧಿಸಿದ ಮಂಗಳೂರು ಪೊಲೀಸರು

Friday, March 9th, 2018
anthara-district

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನ ಕಳವು, ಸುಲಿಗೆ, ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಮಂಗಳೂರಿನ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರು ಜಿಲ್ಲೆಯ ನವೀನ್ ಕುಮಾರ್ ಮತ್ತು ಬೆಂಗಳೂರಿನ ವೆಂಕಟೇಶ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎರಡು ಬೈಕ್, ಮಾಂಗಲ್ಯ ಸರ ಸೇರಿದಂತೆ ಒಟ್ಟು 2 .45 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು 2017 ಜುಲೈಯಲ್ಲಿ ಮುಲ್ಕಿಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಗುತ್ತಕಾಡು ಮೂಕಾಂಬಿಕಾ ದೇವಸ್ಥಾನದಲ್ಲಿ ನಗ ನಗದು ಕಳವುಗೈದಿದ್ದರು. […]