ಹಂಗಾಮಿ ಸ್ಪೀಕರ್ ಬೋಪಯ್ಯ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ

Friday, May 18th, 2018
KG Bopaiah

ಬೆಂಗಳೂರು: ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೆಜಿ ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಬೋಪಯ್ಯ ಅವರ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ. ವಿಶ್ವಾಸ ಮತಯಾಚನೆಯನ್ನು ರಹಸ್ಯ ಮತದಾನದ ಮೂಲಕ ಮಾಡಬೇಕೆಂದು ಬಿಜೆಪಿ ಬಯಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ತನ್ನ ಲಿಖಿತ ಆದೇಶದಲ್ಲಿ, ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ […]

ಕಾಂಗ್ರೆಸ್ ಗೆ ನಾಳೆ ಸದನವನ್ನು ಎದುರಿಸುವ ಧೈರ್ಯವಿಲ್ಲ: ಶೋಭಾ ಕರಂದ್ಲಾಜೆ

Friday, May 18th, 2018
shobha-karandlaje

ಬೆಂಗಳೂರು: ಕಾಂಗ್ರೆಸ್ ಗೆ ಸದನ ಎದುರಿಸುವ ಧೈರ್ಯವಿಲ್ಲ. ಕಾಂಗ್ರೆಸ್ ನ ಶಾಸಕರು ಹತಾಶರಾಗಿದ್ದಾರೆ. ಭಯಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರ ನೇಮಕವನ್ನು ವಿರೋಧಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ನೇಮಕಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೋಪಯ್ಯ ಅವರು 4ನೇ ಬಾರಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಗಿ ಕೆಲಸ ಮಾಡಿದ ಅನುಭವವಿದೆ. ಹಿಂದೆ ವಿಧಾನಸಭೆಯ […]

ಹಂಗಾಮಿ ಸ್ಪೀಕರ್‌ ಆಗಿ ಬೋಪಯ್ಯ ನೇಮಕ..!

Friday, May 18th, 2018
K-G-Bopaih

ಬೆಂಗಳೂರು: ನಾಳೆ ಹೊಸ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ನಿಯಮದ ಪ್ರಕಾರ ಮೊದಲಿಗೆ ಹಂಗಾಮಿ ಸ್ಪೀಕರ್‌ ಆಯ್ಕೆ ನಡೆಯಬೇಕಿದೆ. ಈ ಪ್ರಕಾರ ಹಂಗಾಮಿ ಸ್ಪೀಕರ್‌ ಆಗಿ ಕೆ.ಜಿ. ಬೋಪಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಜಿ. ಬೋಪಯ್ಯ ಸ್ಪೀಕರ್‌ ಆಗಿ ಕೆಲಸ ಮಾಡಿದ್ದರು. ಇದೀಗ ರಾಜ್ಯಪಾಲರು ಬೋಪಯ್ಯ ಅವರನ್ನೇ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆಗೊಂಡಿದ್ದಾರೆ. ಇದಕ್ಕೂ ಕಾಂಗ್ರೆಸ್‌‌ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಹಂಗಾಮಿ ಸ್ಪೀಕರ್‌ ಆಯ್ಕೆ ಹೇಗೆ …? 1. […]