Blog Archive

ಇಡ್ಯಾ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ : ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು ಹಿಂದಿರುಗಿದರೆ ನಮ್ಮ ಜೀವನದಲ್ಲಿ ನಿತ್ಯೋತ್ಸವ; ಪೇಜಾವರ ಶ್ರೀ

Saturday, February 8th, 2020
Edya

ಸುರತ್ಕಲ್ ‌: ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವವು 07.02.2020 ರಂದು ಶುಕ್ರವಾರದಂದು ನಡೆದಿದೆ. ದೇವರನ್ನು ಹೃದಯದಲ್ಲಿ ಪ್ರತಿಷ್ಠಾಪಿಸಿಕೊಂಡು ನಾವು ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು ಹಿಂದಿರುಗಿದರೆ ನಮ್ಮ ಜೀವನದಲ್ಲಿ ನಿತ್ಯೋತ್ಸವವೇ ತುಂಬಿರುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತ್ತು ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವದಿಂದ ಒಂದು ದೇವಸ್ಥಾನ ಮಾತ್ರವಲ್ಲದೆ ಗ್ರಾಮವಿಡೀ ಕಳೆಗಟ್ಟುತ್ತದೆ; ಅಭಿವೃದ್ಧಿಯಾಗುತ್ತದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಶಾಸಕ […]

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

Thursday, January 30th, 2020
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ನೇರಪ್ರಸಾರ

ಶ್ರೀಕ್ಷೇತ್ರ ಕಟೀಲಿನಲ್ಲಿ ನಡೆಯುವ ಬ್ರಹ್ಮಕಲಶೋತ್ಸವಕ್ಕೆ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ

Monday, January 20th, 2020
Kateelu

ಕಟೀಲು : ಶ್ರೀಕ್ಷೇತ್ರ ಕಟೀಲು ಬ್ರಹ್ಮಕಲಶೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ. ಧಾರ್ಮಿಕ, ಸಾಂಸ್ಕೃತಿಕ, ಭಜನಾ ಮತ್ತು ಸಭಾಕಾರ್ಯಕ್ರಮಗಳ ಸಿದ್ಧತೆಯಾಗಿದೆ ಸುಮಾರು 25 ಲಕ್ಷ  ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದು  ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್  ಹೇಳಿದ್ದಾರೆ. ಬ್ರಹ್ಮಕಲಶೋತ್ಸವದ ಸಿದ್ಧತೆ ಕುರಿತು ಇಂದು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಟೀಲು ದೇವರಿಗೆ ದೇಶ ವಿದೇಶದಲ್ಲಿ ಭಕ್ತರಿದ್ದಾರೆ ಆಗಾಗಿ ಅತ್ಯಧಿಕ ಭಾಕ್ತಾದಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈಗಾಗಲೇ ಭಕ್ತರು ಕರಸೇವೆಯ ಮೂಲಕ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಸುಮಾರು 2ಕೋಟಿಗೂ ಮೀರಿದ ಕೆಲಸಗಳನ್ನು […]

ಮೂಡುಬಿದಿರೆಯ ಕರಿಂಜೆ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಪೂರ್ವ ಸಿದ್ಧತಾ ಸಭೆ

Monday, November 18th, 2019
Karinje

ಮಂಗಳೂರು : ಮೂಡುಬಿದಿರೆಯ ಕರಿಂಜೆ ಕ್ಷೇತ್ರದಲ್ಲಿ 2020ರ ಫೆಬ್ರವರಿ 8ರಿಂದ 18ರವರೆಗೆ ಜರುಗಲಿರುವ ನಾಗಮಂಡಲ ಮತ್ತು ಬ್ರಹ್ಮಕಲಶೋತ್ಸವದ ಕುರಿತ ಪೂರ್ವ ಸಿದ್ಧತಾ ಸಭೆಯು ಮಂಗಳೂರಿನ ಬಂಗ್ರಕೂಳೂರಿನಲ್ಲಿರುವ ಮಡಿವಾಳ ಸಭಾಭವನದಲ್ಲಿ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಜರುಗಿತು. ಈ ಸಭೆಯಲ್ಲಿ ಮಾತನಾಡಿದ ಕರಿಂಜೆ ಸ್ವಾಮೀಜಿ, ಎಲ್ಲಾ ಸಮಾಜದವರ ಬೆಂಬಲ ಮತ್ತು ಸಹಭಾಗಿತ್ವದೊಂದಿಗೆ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ, ಸಂಭ್ರಮದೊಂದಿಗೆ ನಡೆಸಲು ಸಿದ್ಧತೆ ನಡೆದಿದೆ. ಮಡಿವಾಳ ಸಮಾಜವು ಈ ಪುಣ್ಯ ಕಾರ್ಯಕ್ಕೆ ಭಾಗಿಯಾಗಿ ಯಶಸ್ವಿಯಾಗಿ ಕಾರ್ಯಕ್ರಮ ನೆರವೇರುವಂತೆ […]

ಶ್ರೀ ಕ್ಷೇತ್ರಕದ್ರಿಯಲ್ಲಿ ಬ್ರಹ್ಮಕಲಶೋತ್ಸವಕ್ಕೆ ಗೊನೆಮೂಹೂರ್ತ

Wednesday, April 24th, 2019
Kadri-Gone-muhurtha

ಮಂಗಳೂರು  : ಶ್ರೀ ಕ್ಷೇತ್ರ ಕದ್ರಿಯಲ್ಲಿ ಜರಗಲಿರುವ ಬ್ರಹ್ಮಕಲಶ, ಮಹಾರುದ್ರಯಾಗ ಹಾಗೂ ಮಹಾದಂಡ ರುದ್ರಾಭಿಷೇಕದಿಂದ ಸರ್ವರಿಗೂ ಒಳಿತಾಗುವ ಮೂಲಕ ಲೋಕ ಕಲ್ಯಾಣವಾಗಲಿ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ವೇದವ್ಯಾಸಕಾಮತ್ ನುಡಿದರು. ಶ್ರೀ ಕ್ಷೇತ್ರಕದ್ರಿಯಲ್ಲಿ ಬ್ರಹ್ಮಕಲಶೋತ್ಸವ ಗೊನೆಮೂಹೂರ್ತ, ಚಪ್ಪರ ಮುಹೂರ್ತ ಹಾಗೂ ಮಹಾದಂಡ ಮುಹೂರ್ತ ಸಮಾರಂಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದರು. ಕ್ಷೇತ್ರದ ತಂತ್ರಿಗಳಾದ ವಿಠಲದಾಸ ತಂತ್ರಿಗಳು ದೀಪ ಪ್ರಜ್ವಲನಗೊಳಿಸಿ ಮಾತನಾಡಿ ವೈಜ್ಞಾನಿಕ ಪ್ರಕ್ರಿಯೆಗಳಿಗೆ ಅನುಗುಣವಾಗಿ ಬ್ರಹ್ಮಕಲಶೋತ್ಸವದಎಲ್ಲಾ ವಿಧಿ ವಿಧಾನಗಳು ನೆರವೇರಲಿವೆ ಎಂದರು. ಗಣ್ಯರಾದ ಅಜಿತ್‌ಕುಮಾರ್ ರೈ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Wednesday, March 13th, 2019
Rajajeshwari

ಮಂಗಳೂರು : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಮಂಗಳೂರು  ಬ್ರಹ್ಮಕಲಶಾಭಿಷೇಕ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಇಂದು ಬುಧವಾರ ಬೆಳಗ್ಗೆ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಿತು. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ನಡೆದವು. ವೈಧಿಕ ವಿಧಿ ವಿಧಾನಗಳು ನಡೆಯುತ್ತಿರುವುದರಿಂದ ಬೆಳಗ್ಗೆ 10 ಗಂಟೆಯವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ನೀಡಲಾಗಿರಲಿಲ್ಲ. ಕ್ಷೇತ್ರದ ತಂತ್ರಿಗಳಾದ ವೇ ಮೂ ಸುಬ್ರಹ್ಮಣ್ಯ […]

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ

Wednesday, March 6th, 2019
polali Brahmakalasha

ಪೊಳಲಿ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ ಮನೆಮಾಡಿದೆ. ಮಾ.4ರಿಂದ 13ರವರೆಗೆ ವೈವಿಧ್ಯಮಯ ವೈದಿಕ-ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ಹಸಿರುವಾಣಿ ಹೊರೆಕಾಣಿಕೆ ಹರಿದುಬರುತ್ತಿದೆ. ಅಂತೆಯೇ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ ಹಾಗೂ ಮೂಡಬಿದಿರೆಯ ಚೌಟರಸರ ಅರಮನೆಯಿಂದ ಹೊರೆಕಾಣಿಗೆ ಆಗಮಿಸಿದ್ದು, ದೇವಸ್ಥಾನದ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪುತ್ತಿಗೆ ಹಾಗು ಚೌಟರಸರರಿಗೂ ಪೊಳಲಿಗೆ ಒಂದು ರೀತಿಯ ವಿಶೇಷ ಸಂಬಂಧವಿದೆ. ಯಾಕೆಂದರೆ ಪೊಳಲಿಯ ಜಾತ್ರೆಯ ದಿನ ನಿಗದಿಪಡಿಸುವ ಮುನ್ನ ಪೊಳಲಿಯ […]

ಪೊಳಲಿ: ಇಂದಿನಿಂದ ಬ್ರಹ್ಮಕಲಶೋತ್ಸವ ಆರಂಭ- ನಾನಾ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

Monday, March 4th, 2019
polali brahmakalasa

ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ(ಮಾ.4) ಬ್ರಹ್ಮಕಲಶೋತ್ಸವ ಆರಂಭಗೊಳ್ಳಲಿದೆ. ಬೆಳಿಗ್ಗೆ 8.30ರಿಂದ ಆಚಾರ್ಯಾದಿ ಋತ್ವಿಜರ ಸ್ವಾಗತ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಹವಾಚನ, ನಾಂದಿ, ಋತಿಗ್ವರಣ, ಕಂಕಣಬಂಧ, ಆದ್ಯಗಣಯಾಗ, ವೇದ ಪಾರಾಯಣ ಆರಂಭಗೊಳ್ಳಲಿದೆ. ಸಾಯಂಕಾಲ 5 ರಿಂದ ಪ್ರಾದಾದಪರಿಗ್ರಹ, ಪುಣ್ಯಾಹವಾಚನ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ಸಪ್ತಶುದ್ಧಿ, ಪ್ರಾಸಾದಶುದ್ಧಿ, ರಾಕ್ಷೊಘ್ನಹೋಮ, ವಾಸ್ತುಪೂಜೆ, ವಾಸ್ತುಹೋಮ, ಕಲಶಾಭಿಷೇಕ ಹಾಗು ಮಹಾಪೂಜೆ ನಡೆಯಲಿದೆ. ಸಂಜೆ 6ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಪುಟ ಶ್ರೀ ನರಸಿಂಹ ಮಠ ಸುಬ್ರಹ್ಮಣ್ಯ ಇಲ್ಲಿನ ಶ್ರೀವಿದ್ಯಾಪ್ರಸನ್ನ ತೀರ್ಥಸ್ವಾಮೀಜಿ ಆಶೀರ್ವಚನ-ಉಗ್ರಾಣ […]

ಮಾ.4 ರಿಂದ 13 ರತನಕ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Thursday, December 6th, 2018
Polali Rajarajeshwari

ಪೊಳಲಿ: ಬಂಟ್ವಾಳ ತಾಲ್ಲೂಕಿನ ಕರಿಯಂಗಳ ಗ್ರಾಮದಲ್ಲಿ 16 ಗ್ರಾಮಗಳಿಗೆ ಸಂಬಂಧಪಟ್ಟಂತೆ ಸಾವಿರ ಸೀಮೆ ವ್ಯಾಪ್ತಿಯ ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ರೂ 19 ಕೋಟಿ ವೆಚ್ಚದಲ್ಲಿ ಸಂಪೂರ್ಣ ಪುನರ್ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದರಿಂದಾಗಿ ಮಾ. 4 ರಿಂದ 13 ರತನಕ ಇಲ್ಲಿನ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಹಾಗೂ ಮಾ.14ರಿಂದ ಒಂದು ತಿಂಗಳು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ […]

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Thursday, March 22nd, 2018
bantwal

ಬಂಟ್ವಾಳ: ಬಂಟ್ವಾಳ ತಾ. ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ಮಾ. 21ರಿಂದ ಮಾ.26ರ ವರೆಗೆ ನಡೆಯಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಗ್ಗೆ ಪ್ರ.ಅರ್ಚಕ ವೇ| ಮೂ| ನಟರಾಜ ಉಪಾಧ್ಯಾಯ ಸಹಕಾರದಲ್ಲಿ ತೋರಣ ಮುಹೂರ್ತ, ವಿವಿಧ ವೈದಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಬಾಳ್ತಬೈಲು ಜನಾರ್ದನ ಆಚಾರ್ಯ ಮತ್ತು ಮುಚ್ಲೋಡಿ ಸೂರ್ಯಹಾಸ ಆಚಾರ್ಯ ಅವರ ವತಿಯಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಕಾರಿಂಜಬೈಲು, ಬಾಳ್ತಬೈಲು, ಮುಚ್ಲೋಡಿಯಿಂದ ಸಂಗ್ರಹಿತ ಹಸಿರು ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ […]