ಕೊರೊನಾ ಬಂದಿದ್ದ ವ್ಯಕ್ತಿಗೆ ಬ್ಲಾಕ್ ಫಂಗಸ್, ಬೆಳ್ತಂಗಡಿಯಲ್ಲಿ ಮೊದಲ ಬಲಿ

Friday, May 28th, 2021
black fungus

ಬೆಳ್ತಂಗಡಿ: ಕೊರೊನಾದ ಬಳಿಕ ಕಣ್ಣು ಮತ್ತು ಕಿಡ್ನಿ ಸಮಸ್ಯೆ ಉಂಟಾಗಿ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದ ವ್ಯಕ್ತಿ. ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು ಕೊರೋನಾ ಚಿಕಿತ್ಸತೆಯ ಬಳಿಕ  ಬ್ಲ್ಯಾಕ್ ಫಂಗಸ್ ಗೋಚರಿಸಿದ್ದು ಕಣ್ಣಿನ ಆಪರೇಷನ್ ನಡೆಸಿದ್ದರು, ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ […]

ಬ್ಲಾಕ್ ಫಂಗಸ್ ಕಾಯಿಲೆಗೆ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ

Saturday, May 22nd, 2021
sooda

ಉಡುಪಿ : ಮ್ಯೂಕರ್ ಮೈಕೋಸಿಸ್- ಬ್ಲಾಕ್ ಫಂಗಸ್  ಕಾಯಿಲೆಗೆ ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ಬಲಿಯಾಗಿದ್ದಾರೆ. ಇದು ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್  ಕಾಯಿಲೆಗೆ  ಮೊದಲ ಬಲಿ ಎಂದು ದಾಖಲಾಗಿದೆ. ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ನಗರದ ಆದರ್ಶ ಆಸ್ಪತ್ರೆಯಲ್ಲಿ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆಯಲ್ಲಿದ್ದರು . ಅವರು ಚಿಕಿತ್ಸೆ ಫಲಿಸದೆ  ಇಂದು ಮೃತಪಟ್ಟಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಸಮೀಪದ ನಂದಿಕೂರಿನ 45 ವರ್ಷದ ಪುರುಷರೊಬ್ಬರು ಚೇತರಿಸಿಕೊಳ್ಳುತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ […]

ಸ್ಟಿರಾಯ್ಡ್ ಬಳಕೆಗೆ ಕೆಲ ನಿರ್ಬಂಧನೆಗಳು ಅಗತ್ಯ: ಆರ್ ಅಶೋಕ

Friday, May 21st, 2021
R Ashok

ಬೆಂಗಳೂರು : ಕೋವಿಡ್ ಸೋಂಕಿತರು ಅತೀಯಾದ ಸ್ಟಿರಾಯ್ಡ್ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಬ್ಲಾಕ್ ಫಂಗಸ್ ಗೆ ತುತ್ತಾಗುವುದಕ್ಕೆ ಇದು ಒಂದು ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಇದರ ಬಳಕೆಗೆ ಸೂಕ್ತ ಕಡಿವಾಣ ಹಾಕಬೇಕಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಇಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡ್ರಗ್ಸ್ ಲಾಜಿಸ್ಟಿಕ್ಸ್ ಸೊಸೈಟಿಯಧಿಕಾರಿಗಳ ಜೊತೆಗೆ ಸಚಿವ ಆರ್ ಅಶೋಕ ಅವರು ಕೋವಿಡ್ ಔಷಧಿ ಲಭ್ಯತೆ ಕುರಿತಂತೆ ಪರಾಮರ್ಶೆ ಸಭೆ […]