ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ : ಜಿಲ್ಲಾಧಿಕಾರಿ
Friday, November 15th, 2019ಮಡಿಕೇರಿ : ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ಶುಕ್ರವಾರ ನಡೆದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನಕದಾಸರು ’ನಾನು ಹೋದರೆ, ಹೋದೇನೂ’ ಎಂಬ ಸಂದೇಶ ಸಾರಿದ್ದಾರೆ. ’ನಾನು’ ಎಂಬುದನ್ನು ಬಿಡಬೇಕು, […]