‘ಭಜನಾ ತರಬೇತಿ ಕಮ್ಮಟ’ ‘ದಲ್ಲಿ ಭಜನೆ ಮತ್ತು ಬದುಕು’ ಕುರಿತು ಉಪನ್ಯಾಸ

Thursday, September 26th, 2024
Bhajana-Kammata

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ26ನೇ ವರ್ಷದ ಭಜನಾ ಕಮ್ಮಟದ 5ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವಿದುಷಿ ಅನುಸೂಯ ಪಾಠಕ್, ಉಜಿರೆ ಹಾಗೂ ಶ್ರೀ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಭಜನೆಯು ಭಕ್ತಿಯನ್ನು ಉದ್ದೀಪನಗೊಳಿಸಿ, ಬದುಕನ್ನು ಕಟ್ಟಿಕೊಡುತ್ತದೆ. […]

ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಿ. ವೀರೇಂದ್ರ ಹೆಗ್ಗಡೆ

Monday, October 1st, 2018
veerendra-hegade

ಉಜಿರೆ: ಮನಸ್ಸಿನ ನಿಯಂತ್ರಣದೊಂದಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಜನೆಯಲ್ಲಿ ಸಾಹಿತ್ಯವಿದೆ. ಸಾಹಿತ್ಯದಲ್ಲಿ ಸಾರ್ಥಕ ಬದುಕಿಗೆ ಬೇಕಾದ ಸಂದೇಶವಿದೆ. ಹಾಡುಗಳ ಅರ್ಥವನ್ನು ತಿಳಿದು ಹಾಡಬೇಕು. ನಿಜ ಜೀವನದಲ್ಲಿಯೂ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯಾವುದೇ ಸಮಸ್ಯೆ ಬಂದಾಗ ಅದನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿ-ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು. […]