ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ

Friday, April 9th, 2021
Dharmanema

ಸುಳ್ಯ: ಕುಂಜಾಡಿ ತರವಾಡು ಮನೆಯಲ್ಲಿ ‍60 ವರ್ಷಗಳ ಬಳಿಕ ಮೊದಲ ಬಾರಿ ನಡೆಯುತ್ತಿರುವ ಧರ್ಮ ನೇಮೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕೊರೋನಾ ನಿಯಮ ಗಳಿಗನುಗುಣವಾಗಿ  ಆರಂಭಗೊಂಡಿತು. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕುಂಜಾಡಿ ತರವಾಡು ಕುಟುಂಬದ ಹಿರಿಯರು, ಯಜಮಾನರು, ಬಂಬಿಲ ಗುತ್ತು, ಮೇಗಿನ ಕುಂಜಾಡಿ, ಕೆಳಗಿನ ಕುಂಜಾಡಿ ಮಧ್ಯಸ್ಥರ ನೇತೃತ್ವದಲ್ಲಿ  ಸಚಿವರು, ಸ್ವಾಮೀಜಿಗಳು, ಜನಪ್ರತಿನಿಧಿಗಳು, ರಾಜ್ಯ ರಾಜಕೀಯ- ಸಾಮಾಜಿಕ ಮುಖಂಡರು ಭೇಟಿ ನೀಡಿದ್ದಾರೆ. ಗ್ರಾಮ ದೈವ ಅಬ್ಬೆಜಲಾಯ, ಉಲ್ಲಾಕುಳು ಮತ್ತು ರಕ್ತೇಶ್ವರಿ […]

ಶಿವನ ವಾಸಸ್ಥಾನ ರುದ್ರಭೂಮಿಯಲ್ಲಿ ಶಿವರಾತ್ರಿ ಆಚರಿಸಿದ ಭಕ್ತರು

Thursday, March 11th, 2021
Rudra Bhoomi

ಮಂಗಳೂರು  : ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ಧಿ ಸಮಿತಿ ಮಹಾಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ಭಜನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂತು. ಸಾಮಾನ್ಯವಾಗಿ ರುದ್ರಭೂಮಿಯೆಂದರೆ ಭಯಪಟ್ಟುಕೊಳ್ಳುತ್ತಾರೆ. ಮಹಿಳೆಯರಂತೂ ಇತ್ತ ಕಾಲಿಡುವುದೇ ಅಪರೂಪ. ಆದರೆ, ಇಲ್ಲಿ ಯಾವುದೇ ಭಯವಿಲ್ಲದೇ ಮಧ್ಯರಾತ್ರಿಯವರೆಗೂ ಗುಂಪುಗುಂಪಾಗಿ ಜನಜಮಾಯಿಸಿ, ದೇವ ಸಂಕೀರ್ತನೆಯಲ್ಲಿ ಪಾಲ್ಗೊಂಡುಬೃಹತ್ ಶಿವನ ಪ್ರತಿಮೆಯ ಬಳಿ ಕರ್ಪೂರ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು. ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ […]