ಭಜನಾ ಸಂಸ್ಕೃತಿಯಿಂದ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯವಾಗುತ್ತದೆ : ಕಲ್ಯಾಣಪುರ ಮಠದ ಬಸವಣ್ಣಜ್ಜನವರು

Monday, September 30th, 2024
Basavannajja

ಉಜಿರೆ: ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಇತ್ಯಾದಿ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ ಎಂದು ಕುಂದಗೋಳ ಕಲ್ಯಾಣಪುರ ಮಠದ ಪೂಜ್ಯ ಬಸವಣ್ಣಜ್ಜನವರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಭಜನಾ ಸಂಸ್ಕೃತಿಯಿಂದ ನಮ್ಮ ಸನಾತನ […]

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Sunday, October 4th, 2020
online Bajane

ಉಜಿರೆ: ಧರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟ ದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ […]