ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳಾಂತರ, ಜಿಲ್ಲೆಗೆ ಮಾಡಿದ ಮೋಸ

Tuesday, January 19th, 2021
muneerKatialla

ಮಂಗಳೂರು : ನಗರ ಹೊರವಲಯದ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಿಸಿ  ಶಿಲಾನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯ ಎಂದು ಮುನೀರ್‌ ಕಾಟಿಪಳ್ಳ ಆರೋಪಿಸಿದ್ದಾರೆ. ಈ ವೈಫಲ್ಯದ ಜವಾಬ್ದಾರಿಯನ್ನು […]

ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ : ಶಿಕ್ಷಕ ಸಾವು

Wednesday, December 25th, 2019
Harikrishna

ಶಿವಮೊಗ್ಗ : ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು ವಾಪಸ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‍ನಲ್ಲಿದ್ದ ದೈಹಿಕ ಶಿಕ್ಷಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ. ಹರಿಕೃಷ್ಣ(45) ಮೃತ ಶಿಕ್ಷಕ. ಭದ್ರಾವತಿ ತಾಲೂಕಿ ಮಾರಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ ಪ್ರೌಢಶಾಲೆಯ 30 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಪ್ರವಾಸ ಮುಗಿಸಿ ವಾಪಸ್ ಬಂದಿದ್ದರು. ಮಾರಶೆಟ್ಟಿಹಳ್ಳಿಯಲ್ಲಿ ಕೆಲ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಇಬ್ಬರು ವಿದ್ಯಾರ್ಥಿಗಳನ್ನು […]

ಶಿವಮೊಗ್ಗ : ಮಳೆಗೆ ಮನೆ ಗೋಡೆ ಕುಸಿತದಿಂದ ವೃದ್ಧ ಸಾವು

Saturday, October 26th, 2019
bhadravati

ಶಿವಮೊಗ್ಗ : ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣಪ್ಪ (67) ಮೃತಪಟ್ಟ ವೃದ್ಧ. ರಾತ್ರಿ ಇಡೀ ಧಾರಾಕಾರ ಮಳೆ ಸುರಿದಿದ್ದು, ಲಕ್ಷ್ಮಣಪ್ಪ, ಮನೆಯಲ್ಲಿ ಮಲಗಿದ್ದ ವೇಳೆ ಬೆಳಗಿನ ಜಾವ ಗೋಡೆ ಕುಸಿದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಹಾಗೂ ಭದ್ರಾವತಿ […]

ಅಭಿಮಾನಿಗಾಗಿ ಭದ್ರಾವತಿಗೆ ಬಂದಿದ್ದರು ವಾಜಪೇಯಿ..!

Friday, August 17th, 2018
badravathi

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಅವರಿಗೂ ಕರ್ನಾಟಕಕ್ಕೂ ಅಳಿಯದ ನಂಟಿದೆ. ಅವರು ತಮ್ಮ ಕಷ್ಟದ ದಿನಗಳಲ್ಲಿ ಕರ್ನಾಟಕಕ್ಕೆ ಬಂದಿದ್ದರು. ಇಲ್ಲಿಂದಲೇ ಸ್ಫೂರ್ಥಿ ಪಡೆದು ಮುನ್ನುಗ್ಗಿದ್ದರು. ಅದು 1984ರ ಸಮಯ ಕಾಂಗ್ರೆಸ್ ಪಕ್ಷ ಹಿಂದೆಂದೂ ಕಾಣದಂತ ವಿಜಯವನ್ನು ಲೋಕಸಭೆ ಚುನಾವಣೆಯಲ್ಲಿ ಕಂಡಿತ್ತು. ಅದಕ್ಕೆ ಕಾರಣವೂ ಇತ್ತು. ಅದಾಗ ತಾನೇ ಇಂದಿರಾ ಗಾಂಧಿ ಹತ್ಯೆಯಾಗಿತ್ತು. ದೇಶದೆಲ್ಲೆಡೆ ಕಾಂಗ್ರೆಸ್ ಹವಾ ಎದ್ದಿತ್ತು, ಆ ಹವಾಕ್ಕೆ ಬಿಜೆಪಿಯ ಮುಖ್ಯ ಮುಖ ಎನಿಸಿಕೊಂಡಿದ್ದ ವಾಜಪೇಯಿ ಅವರೂ ಸಹ ಸೋತುಬಿಟ್ಟಿದ್ದರು. ಬಿಜೆಪಿಗೆ ಅದು ಭಾರಿ ಹಿನ್ನಡೆ. […]