ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ, ಆರೋಗ್ಯಾಧಿಕಾರಿಯಿಂದ ಎಚ್ಚರಿಕೆ

Tuesday, January 8th, 2019
Health officer

ಮಂಗಳೂರು :  ದಕ್ಷಿಣ ಕನ್ನಡದ ಮಲೆನಾಡಿನ ತಪ್ಪಲಿನಲ್ಲಿರುವ ಹಳ್ಳಿಗಳಲ್ಲಿ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲು ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ. ರಾಮಕೃಷ್ಣ ರಾವ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತಂಡಗಳನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ಉಣ್ಣಿಗಳಿಂದ ಕಾಯಿಲೆ ಹರಡುವುದರಿಂದ ಕಾಡಂಚಿನ ಮಂದಿ ಕಾಡಿಗೆ ಹೋಗುವುದನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸುವಂತೆ ಕರೆ ನೀಡಿದರು. ಎಮ್ಮೆ, ಆಕಳು ಮೊದಲಾದ ಸಾಕುಪ್ರಾಣಿಗಳನ್ನು ಕಾಡಿಗೆ ಬಿಡುತ್ತಾರೆ. ಸೌದೆ ಸಂಗ್ರಹಕ್ಕೆ ಕಾಡಿಗೆ […]

ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಸಚಿವ ಯು.ಟಿ.ಖಾದರ್

Tuesday, March 18th, 2014
ut khader

ಶಿವಮೊಗ್ಗ : ಇತ್ತೀಚೆಗೆ ರಾಜ್ಯದ ನಾಲ್ಕಾರು ಜಿಲ್ಲೆಗಳಲ್ಲಿ ಕಂಡುಬಂದಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಸೋಮವಾರ ತೀರ್ಥಹಳ್ಳಿಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಕಾಯಿಲೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು. ವಿಶೇಷವಾಗಿ ಈ ಕಾಯಿಲೆಯು ಅರಣ್ಯಗಳಲ್ಲಿ ವಾಸಿಸುವ ವನವಾಸಿಗಳಲ್ಲೇ ಕಂಡುಬರುತ್ತಿರುವುದರಿಂದ ಮಲೆನಾಡಿನ ಅರಣ್ಯ ಪ್ರದೇಶಗಳಲ್ಲಿವಾಸಿಸುವ ಹಾಗೂ ಕಾಯಿಲೆ ಪೀಡಿತರಿಗೆ […]