Blog Archive

ರಾಮ ಮಂದಿರ ಕಟ್ಟಿದರೆ ಮುಂದೆ ಹೋರಾಟ ಖಚಿತ: ಆನಂದ ಮಿತ್ತಬೈಲು

Wednesday, December 5th, 2018
protest

ಮಂಗಳೂರು: ಸಂವಿಧಾನಕ್ಕೆ ವಿರುದ್ಧವಾಗಿ ಇತಿಹಾಸ, ದಾಖಲೆಗಳೇ ಇಲ್ಲದೆ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದರೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಕೊರೆಗಾಂವ್ನಂತಹ ಹೋರಾಟ ಖಂಡಿತವಾಗಿ ನಡೆಯಲಿದೆ ಎಂದು ಆರ್ಎಸ್ಎಸ್ನವರು ತಿಳಿಯಬೇಕಾಗಿದೆ ಎಂದು ದಲಿತ ಸಂಘಟನೆಯ ಮುಖಂಡ ಆನಂದ ಮಿತ್ತಬೈಲು ಹೇಳಿದರು. ಎಸ್ಡಿಪಿಐ ವತಿಯಿಂದ ನಡೆದ ಬಾಬರಿ ಮಸೀದ್ ಮರಳಿ ಪಡೆಯೋಣ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪನೆ ಮಾಡಿಯೇ ಸಿದ್ಧ ಎಂದು ಈ ದೇಶದ ಗೌರವಾನ್ವಿತ ಮಾಜಿ ಮಂತ್ರಿಯಾಗಿದ್ದಂತಹ ಜನಾರ್ದನ ಪೂಜಾರಿಯವರು ಹೇಳಿದ ಮಾತನ್ನು ಮೊನ್ನೆ […]

ಮನುಷ್ಯ ಮನುಷ್ಯನನ್ನು ದ್ವೇಷಿಸುವ ಧರ್ಮ ಯಾವುದು ಇರಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

Tuesday, December 4th, 2018
siddaramaih

ಮಂಗಳೂರು: ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರ ಎಲ್ಲ ಕಾರ್ಯಗಳಲ್ಲಿ ವಿಫಲವಾಗಿದ್ದು, ಅವರ ಮಾತುಗಳೆಲ್ಲವೂ ಸುಳ್ಳಾಗಿವೆ. ಅಧಿಕಾರ ಅನುಭವಿಸುವಾಗ ರಾಮನ ಮರೆತ ಅವರು, ಈಗ ಅವರಿಗೆ ರಾಮನ ನೆನಪಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಸಾಮುದಾಯಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮನುಷ್ಯ ಮನುಷ್ಯನನ್ನು ದ್ವೇಷಿಸುವ ಧರ್ಮ ಯಾವುದು ಇರಲು ಸಾಧ್ಯ ಇಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸುವಂತಹ ಧರ್ಮವೇ ಎಲ್ಲ ಧರ್ಮಗಳ ಜೀವಾಳ. ಪ್ರೀತಿ-ವಿಶ್ವಾಸ ಇಲ್ಲದಿದ್ದರೆ ಅದು ಧರ್ಮವೇ ಅಲ್ಲ. ಕೆಲವರು […]

ಮಂಗಳೂರು ಮಹಾನಗರ ಪಾಲಿಕೆಯ ಮಹಿಳಾ ಥ್ರೋಬಾಲ್ ತಂಡಕ್ಕೆ ಜಯ

Tuesday, December 4th, 2018
trowball

ಮಂಗಳೂರು: ಇತ್ತೀಚೆಗೆ ಬೆಂಗಳೂರು ಬಿ.ಬಿ.ಎಂ.ಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಮಲ್ಲೇಶ್ವರಂ ಮೈದಾನದಲ್ಲಿ ಏರ್ಪಡಿಸಿದ್ದ ಅಂತರ್ ಮಹಾನಗರ ಪಾಲಿಕೆಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಮಹಿಳಾ ನೌಕರರ ತಂಡವು ಜಯಗಳಿಸಿದ್ದು ಟ್ರೋಫಿ ಹಾಗೂ ರೂ. ೫೦ ಸಾವಿರ ನಗದು ಪಡೆದುಕೊಂಡಿದೆ. ಬಿ.ಬಿ.ಎಂ.ಪಿ ತಂಡ ದ್ವಿತೀಯ ಸ್ಥಾನಿಯಾಗಿದೆ. ಶ್ರೀಮತಿ ಭಾರತಿಎಸ್. ನಾಯಕತ್ವದಲ್ಲಿ ಸೆಣಸಿದ ಮ.ನ.ಪಾ ತಂಡದಲ್ಲಿ ಶ್ರೀಮತಿ ಮೀರಾ (ಉಪನಾಯಕಿ) ಶ್ರೀಮತಿ ಮೀರಾ (ಉಪ ನಾಯಕಿ) ಶ್ರೀಮತಿ ರೇಶ್ಮಾ, ಶ್ರೀಮತಿ ದೀಪಿಕಾ ಶಾಮಿನಿ ಡಿ’ಸೋಜ,ಕುಮಾರಿಯರಾದ, […]

ದಿಢೀರ್ ನಾಪತ್ತೆಯಾಗಿದ್ದ ಮಂಗಳೂರು ಯುವಕ ಕೇರಳದಲ್ಲಿ ಪತ್ತೆ: ಮದನ್ ಮೇಲಿದ್ದ ಅನುಮಾನಕ್ಕೆ ತೆರೆ!

Monday, December 3rd, 2018
Madan

ಮಂಗಳೂರು: ದಿಢೀರ್ ನಾಪತ್ತೆಯಾಗಿದ್ದ ಶಕ್ತಿನಗರದ ವಿನಾಯಕ್‌ ಎಂಬ ಯುವಕನನ್ನು ಕೇರಳದ ಕೊಚ್ಚಿನ್‌ ಪೊಲೀಸರು ಪತ್ತೆ ಮಾಡಿ ಉರ್ವ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಾಜಿ ಪಿಎಸ್ಐ ಮದನ್ ಮೇಲಿದ್ದ ಅನುಮಾನಕ್ಕೆ ತೆರೆ ಬಿದ್ದಿದೆ. ಶಕ್ತಿನಗರದ ನಿವಾಸಿ ಆಟೋ ಚಾಲಕ ಶಿವಕುಮಾರ್-ಸಾಕಮ್ಮ ದಂಪತಿ ಪುತ್ರ ವಿನಾಯಕ ನ.8ರಂದು ಖಾಸಗಿ ಅಪಾರ್ಟ್‌ಮೆಂಟ್‌ನಿಂದ ನಾಪತ್ತೆಯಾಗಿದ್ದ. ವಿನಾಯಕ್ ನಾಪತ್ತೆ ಆಗಿರುವುದನ್ನು ನ.15ರಂದು ಮದನ್ ಕರೆ ಮಾಡಿ ಆತನ ಪೋಷಕರಿಗೆ ತಿಳಿಸಿದ್ದರು. ಬಳಿಕ ಹೆತ್ತವರು ಉರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪುತ್ರ […]

ರಾಮ ಮಂದಿರ ನಿರ್ಮಾಣ ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಜನಾರ್ದನ ಪೂಜಾರಿ

Monday, December 3rd, 2018
janardhan-poojary

ಮಂಗಳೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲವೆಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡಬಾರದು ಎಂದರು. ರಾಮಮಂದಿರ ನಿರ್ಮಾಣವಾಗುವುದನ್ನು ಮುಸ್ಲಿಮರು, ಕ್ರಿಶ್ಚಿಯನ್ನರು ಬಯಸುತ್ತಾರೆ. ಸುಮ್ಮನೆ ಯಾವುದೇ ವಿವಾದವನ್ನು ಸ್ಪಷ್ಟಿಸುವುದು ಬೇಡ ಎಂದು ಹಿರಿಯ ನಾಯಕ ತಿಳಿಸಿದ್ರು.

ಕದ್ರಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ: ವೇದವ್ಯಾಸ ಕಾಮತ್

Saturday, December 1st, 2018
vedvyas-kamath

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಮಾರು ಒಂದು ಕೋಟಿ ಹದಿನಾರು ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದರು. ಕದ್ರಿ ಪಾರ್ಕಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಶಾಸಕರು, ವಾಕಿಂಗ್ ಟ್ಯಾಕ್ ಗೆ ಈಗಾಗಲೇ ಇಂಟರ್ ಲಾಕ್ ಅಳವಡಿಸಲಾಗಿದ್ದು, ಇದು ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಅದರೊಂದಿಗೆ ಮಡ್ ವಾಯಿಂಗ್ ಟ್ರಾಕ್ ಕಾಮಗಾರಿಗೆ 15 […]

ಅಕ್ರಮ ಮರಳುಗಾರಿಕೆ: 25 ಲೋಡು ಮರಳು, 17 ದೋಣಿ ವಶಕ್ಕೆ

Saturday, December 1st, 2018
manglore

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದ ಮೇಲೆ ಶುಕ್ರವಾರ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 25 ಲೋಡು ಮರಳು ಮತ್ತು ಮರಳುಗಾರಿಕೆಗೆ ಬಳಸಿದ 17 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅಡ್ಯಾರ್ ಗ್ರಾಮದ ಸಹ್ಯಾದ್ರಿ ಕಾಲೇಜಿನ ಹಿಂದುಗಡೆ ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಮರಳುಗಾರಿಕೆ ನಡೆಸುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದು, ಸರಿಸುಮಾರು 18 ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ಶಪಡಿಸಿಕೊಂಡಿದ್ದಾರೆ. ದಾಸ್ತಾನು ಮಾಡಿದ […]

ಬೆಂಗ್ರೆಯಲ್ಲಿ‌ ಯುವತಿಯ ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರಿಗೆ ಒಂದು ಲಕ್ಷ ರೂ. ಚೆಕ್ ನೀಡಿ‌ ಅಭಿನಂದನೆ

Saturday, December 1st, 2018
u-t-khader

ಮಂಗಳೂರು: ನಗರದ ತೋಟ ಬೆಂಗ್ರೆಯಲ್ಲಿ‌ ಯುವತಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿ‌ ಆರೋಪಿಗಳನ್ನು ಶೀಘ್ರ ಬಂಧಿಸಿದ ಮಂಗಳೂರು ನಗರ ಪೊಲೀಸರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಒಂದು ಲಕ್ಷ ರೂ. ಚೆಕ್ ನೀಡಿ‌ ಅಭಿನಂದಿಸಿದರು. ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಅವರಿಗೆ ಸಚಿವರು ಚೆಕ್ ಹಸ್ತಾಂತರಿಸಿದರು. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದಾಗ, ತಮಗೆ ದೂರು ಬಾರದೆ ಇದ್ದರೂ ಮಾಹಿತಿ ಸಂಗ್ರಹಿಸಿ ಸುಮೊಟೋ ಪ್ರಕರಣ ದಾಖಲಿಸಿ […]

ಡ್ರೆಜ್ಜಿಂಗ್ ಮಷಿನ್ ಬಳಸಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಪೊಲೀಸ್​ ದಾಳಿ ಅರಿತು ಇಬ್ಬರು ಪರಾರಿ

Friday, November 30th, 2018
escaped

ಮಂಗಳೂರು: ಡ್ರೆಜ್ಜಿಂಗ್ ಮಷಿನ್ ಬಳಸಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ‌. ಮಂಗಳೂರಿನ ತೆಂಕುಳಿಪಾಡಿ ಗ್ರಾಮದ ಮಳಲಿ ಸಾದೂರಿನಲ್ಲಿ ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಮಷಿನ್ ಬಳಸಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರನ್ನು ಕಂಡು ಮರಳುಗಾರಿಕೆ ಮಾಡುತ್ತಿದ್ದ ಇಬ್ಬರು ಪರಾರಿಯಾಗಿದ್ದಾರೆ‌. ಮರಳನ್ನು ತೆಗೆಯುತ್ತಿದ್ದ ಡ್ರೆಜ್ಜಿಂಗ್ ಮಷಿನ್ ಮತ್ತು ದೋಣಿಯನ್ನು ವಶಕ್ಕೆ […]

ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರಿಗೆ 1 ಲಕ್ಷ ರೂ: ಸಚಿವ ಯು.ಟಿ. ಖಾದರ್

Thursday, November 29th, 2018
u-t-kadher

ಮಂಗಳೂರು: ತೋಟ ಬೆಂಗರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರೀಕರ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಯಾವುದೇ ದೂರು ಬಾರದಿದ್ದರೂ, ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ಸ್ವಯಂಪ್ರೇರಿತ ವಾಗಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಸರ್ವತ್ರ ಪ್ರಶಂಸನೆಗೆ ಪಾತ್ರವಾಗಿದೆ. ಇದಕ್ಕಾಗಿ ಪೊಲೀಸರನ್ನು […]