ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Saturday, September 23rd, 2023
MIA

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿರುವ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುತ್ತಿವೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳ ಆಗಮನದ ದತ್ತಾಂಶವನ್ನು ಪರಿಶೀಲಿಸಿದಾಗ, ವಿಮಾನಯಾನ ಸಂಸ್ಥೆಗಳು – ಇಂಡಿಗೊ ಮತ್ತು ಏರ್ ಇಂಡಿಯಾ ಅವರು ನೇರವಾಗಿ ಸಂಪರ್ಕಿಸುವ ದೇಶೀಯ ತಾಣಗಳಲ್ಲಿ 87.5% ಪ್ರಯಾಣಿಕರ ಹೊರೆಯನ್ನು ದಾಖಲಿಸಿವೆ ಎಂದು ಸೂಚಿಸುತ್ತದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇಂಡಿಗೊ ಅಂತರರಾಷ್ಟ್ರೀಯ ಮಾರ್ಗಗಳಲ್ಲಿ 81.7% ಲೋಡ್ ಅನ್ನು ಹೊಂದಿವೆ. ಬೆಂಗಳೂರು, ಚೆನ್ನೈ, […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13,88,823 ರೂ. ಮೌಲ್ಯದ ಅಕ್ರಮ ಚಿನ್ನ ವಶ

Tuesday, September 21st, 2021
Gold

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕಸ್ಟಮ್ಸ್ ಅಧಿಕಾರಿಗಳು 293 ಗ್ರಾಂ ತೂಕದ 24 ಕ್ಯಾರೆಟ್‌ನ ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆಹಚ್ಚಿದ್ದಾರೆ. ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಆಗಮಿಸಿದ ಕಾಸರಗೋಡಿನ ಪ್ರಯಾಣಿಕನೋರ್ವವನ್ನು ವಶಕ್ಕೆ ಪಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 13,88,823 ರೂ. ಮೌಲ್ಯದ ಚಿನ್ನ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಯಾಣಿಕ ಕಪ್ಪು ಬಣ್ಣದ ಬಟ್ಟೆಯೊಳಗೆ ಕಂದು ಕೆಂಪು ಮತ್ತು ಗುಲಾಬಿ ಬಣ್ಣದ ಬ್ಲಾಂಕೆಟ್‌ನೊಳಗಿಟ್ಟು ಅಕ್ರಮವಾಗಿ ಇದನ್ನು […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 16.13ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶ

Friday, September 17th, 2021
gold

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  ಎರಡು ಪ್ರತ್ಯೇಕ ಪ್ರಕರಣದಲ್ಲಿ  16.13ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ ಮಾಡಿ ಕಾಸರಗೋಡಿನ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಹುಸೈನ್‌ ರಾಝಿ ಮೊಯ್ದೀನ್‌ ಅಬೂಬಕ್ಕರ್‌ (26) ಮತ್ತು ಸಲೀಂ ಅಬ್ದುಲ್ಲ ಬಂಧಿತ ಆರೋಪಿಗಳು. ಕಾಸರಗೋಡಿನ ಹುಸೈನ್‌ ರಾಝಿ ಮೊಯ್ದೀನ್‌ ಅಬೂಬಕ್ಕರ್‌ (26) ಎಂಬಾತ ಅಕ್ರಮ ಚಿನ್ನವನ್ನು ಟೋಯ್‌ ಸೆಟ್‌ನ ಒಳಗಿಟ್ಟು ಪ್ಯಾಕ್‌ ಮಾಡಿ ಸಾಗಾಟ ಮಾಡಲು ಯತ್ನಿಸಿದ್ದ. ದುಬೈಯಿಂದ ಆಗಮಿಸಿದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದ ಈತನನ್ನು ಕಸ್ಟಮ್ಸ್‌ ಅಧಿಕಾರಿಗಳು […]

ದುಬಾಯಿಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಅವಕಾಶವಿಲ್ಲ

Monday, May 11th, 2020
Airport

ಮಂಗಳೂರು  : ಮೇ 12 ರಂದು (ಮಂಗಳವಾರ) ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ದುಬಾಯಿಯಿಂದ ಭಾರತೀಯರನ್ನು ಕರೆದುಕೊಂಡು ವಿಮಾನ ಬರಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ವಿಮಾನ ನಿಲ್ದಾಣಕ್ಕೆ ಬರಲು ಅವಕಾಶ ಇಲ್ಲ. ಅಲ್ಲದೇ, ಕ್ವಾರೆಂಟೈನ್ ಕೇಂದ್ರಗಳಿಗೂ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ದಾಖಲೆಗಳಿಲ್ಲದ ಸುಮಾರು 5,48,000 ರೂಪಾಯಿಯ ವಿದೇಶಿ ಕರೆನ್ಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ

Saturday, January 11th, 2020
foreign-currency

ಮಂಗಳೂರು : ದಾಖಲೆ ಇಲ್ಲದ ಸುಮಾರು 5,48,000 ರೂಪಾಯಿಯ ವಿದೇಶಿ ಕರೆನ್ಸಿಗಳನ್ನು ಹೊಂದಿದ್ದ ದುಬೈಗೆ ಸಂಚರಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಫ್‌ಎಸ್‌ಎಫ್ ಅಧಿಕಾರಿಗಳು ಶನಿವಾರ ಮುಂಜಾನೆ 6.30 ಗಂಟೆಗೆ ಪ್ರಯಾಣಿಕರ ಬ್ಯಾಗೇಜುಗಳ ತಪಾಸಣೆ ಮಾಡುತ್ತಿದ್ದ ವೇಳೆ ದುಬೈಗೆ ಸ್ಪಯ್ಸ್ ಜೆಟ್ ವಿಮಾನದ ಮೂಲಕ ತೆರಳಲಿದ್ದ ಪ್ರಯಾಣಿಕ ಶಾಹುಲ್ ಹಮೀದ್‌ನ ಕೈ ಚೀಲದಲ್ಲಿ ಅನುಮಾನಾಸ್ಪದ ಚಿತ್ರವನ್ನು ಗಮನಿಸಿದ್ದು ಪರಿಶೀಲನೆ ನಡೆಸಿ ವಿದೇಶಿ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನಿಂದ ಯುಎಸ್ ಡಾಲರ್ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶಿಷ್ಟ ಕಲಾ ಯೋಜನೆ

Friday, January 3rd, 2020
press

ಮಂಗಳೂರು : ಎಸ್ ಕ್ಯೂಬ್ ಆರ್ಟ್ ಗ್ಯಾಲರಿ ಮಂಗಳೂರು ವಿಮಾನ ನಿಲ್ದಾಣವನ್ನು ಕಲಾತ್ಮಕ ಕೃತಿಗಳಿಂದ ಸುಂದರಗೊಳಿಸಲು ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಪ್ರತಿಷ್ಠಿತ ಯೋಜನೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದೆ. ಎಎಐ ವಿಮಾನ ನಿಲ್ದಾಣದ ಆವರಣದಲ್ಲಿ ವಿವಿಧ ಕಲಾಕೃತಿಗಳನ್ನು ವಿನ್ಯಾಸಗೊಳಿಸಲು ಟೆಂಡರ್‌ಗಳನ್ನು ಆಹ್ವಾನಿಸಿತ್ತು. ಎಸ್ ಕ್ಯೂಬ್ ಆರ್ಟ್ ಗ್ಯಾಲರಿ ಸ್ಪರ್ಧಾತ್ಮಕ ಬಿಡ್ ಮಾಡಿತ್ತು. ತರುವಾಯ ಆಯ್ಕೆ ಮಂಡಳಿಯ ಮುಂದೆ ಪ್ರಸ್ತುತಿಯನ್ನು ನೀಡಿತು. ಆಯ್ಕೆ ಮಂಡಳಿಯ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಕಾರ್ಯವನ್ನು ಎಸ್ ಕ್ಯೂಬ್ ಆರ್ಟ್ ಗ್ಯಾಲರಿಗೆ ನೀಡಲಾಯಿತು. ಟೆಂಡರ್ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ`ಕೋಟಿ ಚೆನ್ನಯ’ ಹೆಸರು

Saturday, August 3rd, 2019
Koti-chennaya airport

ಮಂಗಳೂರು :  ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಆ. 3 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಿಇಓ ಡಾ.ಸೆಲ್ವಮಣಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ […]

ರನ್‌ವೇಯಲ್ಲಿ ಸಿಗ್ನಲ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್‌ಇಂಡಿಯಾ ವಿಮಾನ, 186 ಮಂದಿ ಪಾರು

Monday, July 17th, 2017
Air-India

ಮಂಗಳೂರು : ರನ್‌ವೇಯಲ್ಲಿ ಅಳವಡಿಸಿದ್ದ ಸಿಗ್ನಲ್ ಕಂಬಕ್ಕೆ ಏರ್‌ಇಂಡಿಯಾ ವಿಮಾನವು ಢಿಕ್ಕಿ ಹೊಡೆದ ಘಟನೆ ರವಿವಾರ ಬೆಳಗ್ಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ 186 ಮಂದಿ ಅಪಾಯದಿಂದ ಪಾರಾಗಿದ್ದಾರೆ. ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್‌ಇಂಡಿಯಾ ವಿಮಾನವು ಇಳಿಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತು. ರವಿವಾರ ಏರ್‌ಇಂಡಿಯಾ 814 ವಿಮಾನವು ದುಬೈನಿಂದ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿತ್ತು. 186 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನವು ರನ್‌ವೇನಲ್ಲಿ ಇಳಿಯುತ್ತಿದ್ದಂತೆ ಅಲ್ಲಿ ಅಳವಡಿಸಲಾಗಿದ್ದ ಸಿಗ್ನಲ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪ್ರಯಾಣಿಕರು […]

ಐಸಿಸ್ ಸೇರಲು ತೆರಳಿದ್ದ ವ್ಯಕ್ತಿಯೊಬ್ಬನ ಬಂಧನ

Monday, December 26th, 2016
ISIS-terrorist

ಮಂಗಳೂರು: ಐಸಿಸ್ ಸೇರಲು ತೆರಳಿದ್ದ ವ್ಯಕ್ತಿಯೊಬ್ಬನನ್ನು ಇಮಿಗ್ರೇಶನ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎನ್ನಲಾಗುತ್ತಿದೆ. ಬಂಧಿತನನ್ನು ಕೇರಳ ಮೂಲದ ತಲಶೇರಿಯ ಮುನಾಫ್ ರೆಹಮಾನ್ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಜೊತೆ ಮಂಗಳೂರಿನ ಪಾಂಡೇಶ್ವರದಲ್ಲಿ ನೆಲೆಸಿದ್ದ‌. ಈತನ ವಿರುದ್ಧ ಎನ್‌‌ಐಎ ಅಧಿಕಾರಿಗಳು ಲುಕೌಟ್ ನೋಟೀಸ್ ಜಾರಿ ಮಾಡಿದ್ದರು. ಇದೀಗ ಅಜ್ಞಾತ ಸ್ಥಳದಲ್ಲಿ ಈತನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೊಳಪಡಿಸುತ್ತಿದ್ದಾರೆ ಎನ್ನಲಾಗಿದೆ.

ಮಾರ್ಚ್ 18 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನೆ

Thursday, March 14th, 2013
Mangalore International Airport

ಮಂಗಳೂರು : ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು  ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನಾ ಸಮಾರಂಭವು ಮಾರ್ಚ್ 18 ರಂದು ನಡೆಯಲಿರಿರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಉದ್ಘಾಟನೆಯನ್ನು ಕೇಂದ್ರ ವಿಮಾನ ಯಾನ ಸಚಿವ ಅಜಿತ್‌ ಸಿಂಗ್‌ ನೆರವೇರಿಸಲಿರುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಲಿ ಮೊದಲಾದವರು ಆಗಮಿಸಲಿದ್ದಾರೆ.