ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ ಅಧಿಕಾರ ಸ್ವೀಕಾರ

Friday, March 1st, 2024
sadashiva-ullal

ಮಂಗಳೂರು: ನಾಲ್ಕೂವರೆ ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಸದಾಶಿವ ಉಳ್ಳಾಲ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಸದಾಶಿವ ಉಳ್ಳಾಲ್ ಮಾತನಾಡಿ ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವೆ. ಪಕ್ಷಕ್ಕೆ ಯಾವ ಬಗೆಯಲ್ಲೂ ಮುಜುಗರ ಆಗದಂತೆ ಬಡವರಿಗೆ ಸೂರು ನಿರ್ಮಿಸಿಕೊಳ್ಳಲು ಜಾಗ ಸಿಗುವಂತೆ ಮಾಡಲು ಪ್ರಯತ್ನಿಸುವೆ’ ಎಂದು ಹೇಳಿದ್ದಾರೆ. ವಕೀಲರಾಗಿರುವ ಸದಾಶಿವ ಉಳ್ಳಾಲ್ ಅವರು ಉಳ್ಳಾಲ ತಾಲ್ಲೂಕಿನ ಕೊಲ್ಯ ನಿವಾಸಿ. ಗ್ರಾಮ ಪಂಚಾಯಿತಿ ಮತ್ತು ಬೂತ್ ಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಕೇಸ್

Sunday, January 7th, 2024
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ‌ ದೌರ್ಜನ್ಯ ಕೇಸ್

ಮಂಗಳೂರು : (ಮುಡಾ) ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರು ಅಲಿ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪದ ದೂರು ದಾಖಲಿಸಿದ್ದಾರೆ. ಮುಡಾ ದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ ಎಂದು […]

ಪತ್ನಿಯಿಂದ ಕಿರುಕುಳ ಕೊಲೆಯತ್ನ ದೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ನಾಪತ್ತೆ

Sunday, January 24th, 2021
GT Dinesh Kumar

ಮಂಗಳೂರು :  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ (38) ಅವರ ವಿರುದ್ಧ ಪತ್ನಿ ಕಿರುಕುಳ ನೀಡಿದ ಹಾಗೂ ಕೊಲೆಯತ್ನ ದೂರು ನೀಡಿದ್ದಾರೆ. ದಿನೇಶ್ ಕುಮಾರ್ ಮೂಡ ಆಯುಕ್ತರಾಗಿ ತಿಂಗಳ ಹಿಂದೆಯಷ್ಟೇ ನೇಮಕಗೊಂಡಿದ್ದರು. ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯ ಅಗ್ರಜ ವಿವಾಂಟ ಫ್ಲಾಟ್‌ನಲ್ಲಿ ಇವರು ವಾಸವಿದ್ದರು. ಪತ್ನಿ ಬೆಂಗಳೂರಿನಲ್ಲಿ ಇದ್ದುದರಿಂದ ಇವರು ಒಬ್ಬರೇ ಇಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪತ್ನಿ ದೀಪ್ತಿ ಅವರು ಕೊಲೆಯತ್ನ ಹಾಗೂ ವರದಕ್ಷಿಣೆ ಕಿರುಕುಳ ದೂರು […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ರವಿಶಂಕರ್‌ ಮಿಜಾರು ಅಧಿಕಾರ ಸ್ವೀಕಾರ

Tuesday, June 9th, 2020
Ravishankara Mijar

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡಿರುವ ರವಿಶಂಕರ್‌ ಮಿಜಾರು ಅವರು ಸೋಮವಾರ ನಗರದ ಉರ್ವಾ ಸ್ಟೋರ್‌ನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ಮೇಯರ್‌ ದಿವಾಕರ ಪಾಂಡೇಶ್ವರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ದ.ಕ. ಜಿಲ್ಲಾ ಬಿಜೆಪಿ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ ಮಿಜಾರ್

Wednesday, June 3rd, 2020
Ravishankara-Mijar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಜಿಲ್ಲಾ ವಕ್ತಾರ ರವಿಶಂಕರ ಮೀಜಾರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಸಚಿವಾಲಯ ಜೂನ್ 3, ಬುಧವಾರ ಸಂಜೆ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಸಕ್ರೀಯ ಕಾರ್ಯಕರ್ತರಾಗಿ ದುಡಿಯುತ್ತಿರುವ ರವಿಶಂಕರ ಮಿಜಾರ್. ಪ್ರಸ್ತುತ ಜಿಲ್ಲಾ ಸ್ಪೋಕ್ಸ್ ಪರ್ಸನ್ ಆಗಿದ್ದಾರೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿಯಾಗಿದ್ದಾರೆ, ವಿದ್ಯಾರ್ಥಿಯಾಗಿದ್ದಾಗಲೇ ಅಲೋಶಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕನಾಗಿದ್ದರು. ಮಂಗಳೂರಿನ ಕುಂಠಿತಗೊಂಡಿರುವ ಕೆಲಸಗಳಿಗೆ ವೇಗ ಕೊಡುವುದರ ಜೊತೆಗೆ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಆಯ್ಕೆ

Saturday, December 3rd, 2016
Suresh-ballal

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ನೇಮಕಗೊಂಡಿದ್ದಾರೆ. ಸುರೇಶ್ ಬಲ್ಲಾಳ್ ಪ್ರಸಕ್ತ ಕೆಪಿಸಿಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಈ ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್, ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸುರೇಶ್ ಬಲ್ಲಾಳ್ ಈ ಹಿಂದೆಯೂ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮಂಗಳೂರು ನಗರದಲ್ಲಿ ತೀವ್ರವಾದ ಪಾರ್ಕಿಂಗ್ ಸಮಸ್ಯೆ : ಡಿಸಿ ವಿಶೇಷ ಸಭೆ

Saturday, July 19th, 2014
MUDA

ಮಂಗಳೂರು : ವಾಹನಗಳ ಪಾರ್ಕಿಂಗ್ ಸಮಸ್ಯೆ ಮಂಗಳೂರು ನಗರದಲ್ಲಿ ತೀವ್ರವಾಗಿ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ಮುಂದಿನ ತಿಂಗಳು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ. ಅವರು ಶನಿವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ನಗರದ ಬೆಳವಣಿಗೆಗೆ ಪೂರಕವಾಗಿ ಪಾರ್ಕಿಂಗ್ ವ್ಯವಸ್ಥೆ ಸಿದ್ಧಗೊಂಡಿಲ್ಲ. ವಾಹನಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದರೂ, ರಸ್ತೆ ಅಭಿವೃದ್ಧಿ ಅದಕ್ಕೆ ಅನುಗುಣವಾಗಿಲ್ಲ. ಬಹುಮಹಡಿ ವಾಣಿಜ್ಯ ಕಟ್ಟಡಗಳು ಮತ್ತು ಅಪಾರ್ಟ್ ಮೆಂಟ್ ಗಳ ನಿರ್ಮಾಣದಲ್ಲೂ […]