ಮಂಗಳೂರು ನಗರದಲ್ಲಿ ಡಿಸೆಂಬರ್ 20 ಶಾಲಾ ಕಾಲೇಜುಗಳಿಗೆ ರಜೆ, ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ

Thursday, December 19th, 2019
lati Charge

ಮಂಗಳೂರು : ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಡಿಸೆಂಬರ್ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರೇಟ್ ತಿಳಿಸಿದೆ. ಡಿಸೆಂಬರ್ 19 ಗುರುವಾರದಂದು ಮಂಗಳೂರಲ್ಲಿ ಗುಂಪೊಂದು ಪೊಲೀಸರ ಮೇಲೆ ಹಿಂಸಾಚಾರ ನಡೆಸಿದ  ಹಿನ್ನಲೆಯಲ್ಲಿ ನಗರದಲ್ಲಿ ಇನ್ನಷ್ಟು ಗಲಭೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.  ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ  ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ದಕ್ಷಿಣ ಕನ್ನಡ […]