ಮಂಗಳೂರು: ನೂತನ ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆ

Friday, September 9th, 2022
mayor

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹಿರಿಯ ಕಾರ್ಪೊರೇಟರ್, ದೇರೇಬೈಲ್ ವಾರ್ಡ್ ಸದಸ್ಯ ಶಶಿಧರ ಹೆಗ್ಡೆ 14 ಮತಗಳನ್ನಷ್ಟೇ ಗಳಿಸಿದರು. ಉಪ ಮೇಯರ್ […]

ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳನ್ನು ಅನಧಿಕೃತವಾಗಿ ತೆಗೆದರೆ ವಾಟ್ಸಪ್ ಮಾಡಿ

Sunday, August 14th, 2022
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಹಾಗೂ ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824- 2220306 ಇಲ್ಲಿಗೆ ಫೋಟೋ ಸಹಿತ ದೂರು ಸಲ್ಲಿಸಬಹುದು ಎಂದು ಮನಪಾ ಹೇಳಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿ ಮಳೆಗಾಲದಲ್ಲಿ ಜೂನ್ ಮತ್ತು ಜುಲೈ ಮಾಹೆಯಲ್ಲಿ ಸಾಮಾನ್ಯ ಮಳೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುತ್ತದೆ. ಭಾರೀ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಉಂಟಾಗುವ ಹೊಂಡ-ಗುಂಡಿಗಳನ್ನು […]

ಬಾಬು ಜಗಜೀವನರಾಂ ಅವರ ಬದುಕು ಶ್ರೇಷ್ಠವಾದದ್ದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

Tuesday, April 5th, 2022
Babu-Jagajeevana-Rao

ಮಂಗಳೂರು : ಬಾಬು ಜಗಜೀವನರಾಂ ಅವರ ಬದುಕು ಸಾರ್ವಕಾಲಿಕ ಶ್ರೇಷ್ಠತೆ ಹೊಂದಿರುವಂತದ್ದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ಏ.5ರ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಡಾ. ಬಾಬು ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನರಾಂ ಅವರ ಬಾಲ್ಯವೇ ಒಂದು ಹೋರಾಟವಾಗಿತ್ತು ಅಸ್ಪøಶ್ಯತೆ ಹೆಚ್ಚಾಗಿದ್ದ ಬಿಹಾರದಂತಹ ರಾಜ್ಯದಲ್ಲಿ ಎದುರಾದ ಅವಮಾನಗಳನ್ನೆಲ್ಲ ಎದುರಿಸಿ ಹದಿಹರೆಯದಲ್ಲೇ […]

ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ – ಸುನೀಲ್‌ ಕುಮಾರ್ ಬಜಾಲ್

Tuesday, October 12th, 2021
Dasara Protest

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಪ್ರತಿಭಟನೆಯನ್ನು […]

ಫಿಟ್ ಇಂಡಿಯಾ ಪ್ರೀಡಂ ಓಟ 2.೦ಕ್ಕೆ ಉತ್ತಮ ಬೆಂಬಲ

Saturday, October 2nd, 2021
Freedom Run

ಮಂಗಳೂರು : ಕೇಂದ್ರ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಮಂಗಳೂರಿನ ನೆಹರು ಯುವ ಕೇಂದ್ರ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ರಾಷ್ಟ್ರೀಯ ಕೆಡೆಟ್ ಕಾಪ್ ಹಾಗೂ ಜಿಲ್ಲಾ ಯುವ ಒಕ್ಕೂಟದ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ಓಟ 2.0 ಕಾರ್ಯಕ್ರಮವನ್ನು ನಗರದ ಮಂಗಳ ಕ್ರೀಡಾಂಗಣದಲ್ಲಿ ಅ.2ರ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮಕ್ಕೆ […]

ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳ ವಧೆ, ದಾಳಿ ನಡೆಸಿ ಜಾನುವಾರು ವಶ

Wednesday, July 21st, 2021
Kudroli Shelter

ಮಂಗಳೂರು: ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ, ಎನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಗೆ ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿದ್ದಾರೆ. ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು […]

ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಾಲ್ಕು ಜೋಡಿಗಳ ಮದುವೆ, ಜಂಟಿ ದಾಳಿ

Sunday, June 20th, 2021
Mangaladevi

ಮಂಗಳೂರು : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಮದುವೆ ಅದ್ದೂರಿಯಾಗಿ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು ಕಾರು […]

ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ

Tuesday, February 2nd, 2021
Jayaraj

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕರೊಬ್ಬರ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಮನಪಾ ನಗರ ಯೋಜನೆಗಳ ವಿಭಾಗದ ಕೆ.ವಿ. ಜಯರಾಜ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ. ಇದರ ಜೊತೆಗೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಜ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಜ್ […]

ಮಂಗಳೂರು ಮಹಾನಗರ ಪಾಲಿಕೆ 2021-22ನೆ ಅವಧಿಗೆ ಬಜೆಟ್ ಮಂಡನೆ, 70 ಕೋಟಿ ರೂ. ಆದಾಯದ ನಿರೀಕ್ಷೆ

Thursday, January 28th, 2021
Budget

ಮಂಗಳೂರು : ಮೇಯರ್ ದಿವಾಕರ ಪಾಂಡೇಶ್ವರ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಕುರಿತಾದ ವಿಶೇಷ ಸಭೆಯಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಕುಮಾರ್ ಪ್ರಸಕ್ತ ಬಿಜೆಪಿ ಆಡಳಿತಾವಧಿಯ ಪ್ರಥಮ ಅಂದಾಜು ಬಜೆಟ್ ಮಂಡಿಸಿದರು. ಪಾಲಿಕೆ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರಕಾರಿ ಕಟ್ಟಡಗಳ ಮೇಲಿನ ಸೇವಾ ಶುಲ್ಕ ಹಾಗೂ ಆಸ್ತಿ ತೆರಿಗೆ ವಿನಾಯಿತಿ ಹೊಂದಿರುವ ಶಿಕ್ಷಣ ಸಂಸ್ಥೆಗಳಿಂದ ಸೇವಾ ಶುಲ್ಕ ಸಂಗ್ರಹಣೆ ಮಾಡಲಾಗುವುದು, ಉಪ ಆಯುಕ್ತರ ಮೇಲುಸ್ತುವಾರಿಯಲ್ಲಿ ಕಂದಾಯ ಜಾಗೃತ ದಳ ಸ್ಥಾಪಿಸಿ […]

ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಕೆ. ಕೃಷ್ಣಪ್ಪ ಮೆಂಡನ್ ನಿಧನ

Friday, December 4th, 2020
Krishnappa mendon

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಕೆ. ಕೃಷ್ಣಪ್ಪ ಮೆಂಡನ್ (88) ಅವರು ಶುಕ್ರವಾರ  ನಿಧನರಾಗಿದ್ದಾರೆ. ಅವರು ತನ್ನ ಸಾಮಾಜಿಕ ಹಾಗೂ ರಾಜಕೀಯ ಸೇವೆಯನ್ನು ಕಂಕನಾಡಿ ವಾರ್ಡಿನ ಪಂಚಾಯತ್ ಸದಸ್ಯರಾಗಿ ಆರಂಭಿಸಿದ್ದರು. 1983 ರಿಂದ ಮಂಗಳೂರು ಮಹಾನಗರಪಾಲಿಕೆ ಅಳಪೆ ವಾರ್ಡಿನಿಂದ ಕಾರ್ಪೊರೇಟರ್ ಆಗಿ ಚುನಾಯಿತರಾಗಿದ್ದರು. ನಾಲ್ಕು ಬಾರಿ ಅವರು ಅಳಪೆ ವಾರ್ಡಿನಿಂದ ಕಾರ್ಪೊರೇಟರ್ ಆಗಿ ಚುನಾಯಿಸಲ್ಪಟ್ಟಿದ್ದಾರೆ. 1993 ರಲ್ಲಿ ಅವರು ಮಂಗಳೂರಿನ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು. ಅದಲ್ಲದೆ, ದ. ಕ. […]