Blog Archive

ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಚಾಲನೆ

Saturday, November 14th, 2020
Covid Jatha

ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, “ಕೋವಿಡ್ ಹರಡದಂತೆ ಮುಂಜಾಗೃತೆ ಕುರಿತ ಸರಕಾರದ ಸೂಚನೆಗಳನ್ನ ನಾವು ಅನುಸರಿಸಬೇಕಿದೆ. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ” ಎಂದರು. ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ […]

ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ವರ್ಗಾವಣೆ

Tuesday, October 20th, 2020
Mohammed Nazir

ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಝೀರ್ ಅವರನ್ನು ಒಂದು ವರ್ಷದಿಂದ ಸ್ಮಾರ್ಟ್ ಸಿಟಿ ಲಿ.ಇದರ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿತ್ತು. ಮುಹಮ್ಮದ್ ನಝೀರ್ ಅವರಿಗೆ ಹೊಸ ಹುದ್ದೆ ಇನ್ನೂ ನಿಗದಿಯಾಗಿಲ್ಲ. ಅವರ ಸ್ಥಾನಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.

ಶುದ್ಧೀಕರಿಸದೇ ನಗರಕ್ಕೆ ನೀರನ್ನು ಪೂರೈಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಆಯುಕ್ತರು

Tuesday, September 22nd, 2020
Palike sabhe

ಮಂಗಳೂರು:  ಚರ್ಚೆ ಗದ್ದಲಗಳ ನಡುವೆ ಮಂಗಳೂರು ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ  ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿವ ನೀರು ಸಂಸ್ಕರಣಾ ಘಟಕದ ನೀರಿನ ಗುಣಮಟ್ಟ 36.4 ಇದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ  ನೀರಿಗೆ ಅಗತ್ಯ ರಾಸಾಯನಿಕ ಬಳಸಿ ಶುದ್ಧೀಕರಿಸದೇ ನೀರನ್ನು ಪೂರೈಸಿರುವ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ಆರೋಗ್ಯಾಧಿಕಾರಿಗಳು ಈ ನೀರು ಸೇವನೆಯಿಂದ […]

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಕಟೌಟ್ ತೆರವುಗೊಳಿಸಲು ಸೂಚನೆ

Thursday, September 17th, 2020
banner

ಮಂಗಳೂರು: ಸಾರ್ವಜನಿಕರಿಂದ ಅನೇಕ ದೂರುಗಳು ಬಂದ  ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಫ್ಲೆಕ್ಸ್, ಬ್ಯಾನರನ್ನು ತೆರವುಗೊಳಿಸುವಂತೆ  ಮೇಯರ್ ದಿವಾಕರ್ ಪಾಂಡೇಶ್ವರ್ ಅವರು ವಿನಂತಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಅನಧಿಕೃತ ಕಟೌಟ್, ಫ್ಲೆಕ್ಸ್ ಗಳನ್ನು ಮುಂದಿನ ಮೂರು ದಿನಗಳೊಳಗಾಗಿ ತೆರವುಗೊಳಿಸುವಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಅಳವಡಿಕೆಗೆ ಮಂಗಳೂರು ಮಹಾನಗರ ಪಾಲಿಕೆಯ ಅನುಮತಿ ಕಡ್ಡಾಯವಾಗಿದೆ. ಈ ಸೂಚನೆ ತಪ್ಪಿದಲ್ಲಿ ಮಹಾನಗರ ಪಾಲಿಕೆಯಿಂದಲೇ ಫ್ಲೆಕ್ಸ್ ತೆರವು […]

ಕೊರೊನಾ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ಒಂದು ವಾರ ಬಂದ್

Sunday, June 28th, 2020
mcc

ಮಂಗಳೂರು: ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮಂಗಳೂರು ನಗರ ಪಾಲಿಕೆಗೆ ಸೋಮವಾರದಿಂದ ಪ್ರವೇಶ ನಿರ್ಬಂಧಿಸ ಲಾಗಿದೆ ಎಂದು ಮೇಯರ್ ರವರ ಪ್ರಕಟಣೆ ತಿಳಿಸಿದೆ ಪಾಲಿಕೆಗೆ ಪ್ರತಿದಿನ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇರುವುದರಿಂದ ಸೋಮವಾರದಿಂದ ಜೂನ್  29 ರಿಂದ ಒಂದು ವಾರಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ ಎಂದು  ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಕಿತ್ಸೆ ನೀಡಲಾಗದೇ ವೃದ್ದ ರೋಗಿಗಳನ್ನು ಕಂಕನಾಡಿ ಮಾರ್ಕೆಟ್ ಬಳಿ ಬಿಟ್ಟ ಆಸ್ಪತ್ರೆ ಸಿಬ್ಬಂದಿ, ಕೊನೆಗೂ ಇಎಸ್‍ಐ ಆಸ್ಪತ್ರೆಗೆ ದಾಖಲು

Friday, June 19th, 2020
Kanachur-Hospital

ಮಂಗಳೂರು: ಕಳೆದ ಮಾರ್ಚ್ ತಿಂಗಳಲ್ಲಿ ಕೋವಿಡ್ ಕಾರಣದಿಂದ  ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆ ಯನ್ನು  ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದ ಬಳಿಕ ಅಲ್ಲಿದ್ದ ಹೊರ ರೋಗಿಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿತ್ತು. ಜಿಲ್ಲಾಡಳಿತ ಇಲ್ಲಿಂದ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ  ವರ್ಗಾವಣೆ ಮಾಡಿದ್ದ ನಾಲ್ವರು ಬಡ ರೋಗಿಗಳನ್ನು ಆಸ್ಪತ್ರೆ ಆಂಬುಲೆನ್ಸ್ ನಲ್ಲಿ ತಂದು ಕಂಕನಾಡಿ ಮಾರ್ಕೆಟ್ ಬಳಿ ಬಿಟ್ಟುಹೋಗುವ ಮೂಲಕ ಅಮಾನವೀಯತೆ ಪ್ರದರ್ಶಿಸಿದೆ. ಆ ಪೈಕಿ ಉಪ್ಪಿನಂಗಡಿಯ ರಘುರಾಮ, ಫರಂಗಿಪೇಟೆ ಪೊಳಲಿ ರಸ್ತೆಯ ಬೆಂಜನಪದವಿನ ಶ್ರೀನಿವಾಸ, ತಲಪಾಡಿಯ ರಮೇಶ ಮತ್ತು ಪುತ್ತೂರಿನ ಸುಂದರ […]

ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ದಿವಾಕರ್ ಪಾಂಡೇಶ್ವರ ರವರಿಗೆ ಗೌರವ ಅಭಿನಂಧನೆ

Friday, March 6th, 2020
divakar

ಮಂಗಳೂರು : ಶ್ರೀ ಸತ್ಯ ಸಾರಮಾಣಿ ಅಲೇರ ಪಂಜುರ್ಲಿ ದೈವಸ್ಥಾನ ಶ್ರೀ ಗುಳಿಗ, ಶ್ರೀ ಚಾಮುಂಡೇಶ್ವರಿ, ಶ್ರೀ ಗುಳಿಗ ಕಲ್ಲುರ್ಟಿ ಸಾನಿಧ್ಯ ಪಾಂಡೇಶ್ವರ, ನ್ಯೂರೋಡ್, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ದಿವಾಕರ ಪಾಂಡೇಶ್ವರರವರಿಗೆ ಮಂಗಳೂರು ಮಹಾನಗರ ಪಾಲಿಕೆಯ ಕಛೇರಿಯಲ್ಲಿ ದಿನಾಂಕ 05.03.2020 ರಂದು ಸಾಯಂಕಾಲ 4.00 ಗಂಟೆಗೆ ಶ್ರೀ ಕ್ಷೇತ್ರದ ವತಿಯಿಂದ ಗೌರವ ಅಭಿನಂಧನೆ ಸಲ್ಲಿಸಲಾಯಿತು. ಕ್ಷೇತ್ರದ ಆಡಳಿತ ಮೋಕ್ತೇಸರರಾದ ಶ್ರೀ ಪಿ. ಜಯೇಂದ್ರ ಕೋಟ್ಯಾನ್, ಗೌರವ ಅಧ್ಯಕ್ಷರಾದ ಶ್ರೀ ಸದಾಶಿವ ಕುಲಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ […]

ಮಂಗಳೂರು : ನೂತನ ಮೇಯರ್‌ ಆಗಿ ದಿವಾಕರ ಪಾಂಡೇಶ್ವರ

Saturday, February 29th, 2020
Diwakar

ಮಂಗಳೂರು  : ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ಹಿರಿಯ ಸದಸ್ಯ ದಿವಾಕರ ಪಾಂಡೇಶ್ವರ ಅವರು ಆಯ್ಕೆಯಾಗಿದ್ದಾರೆ. ದಿವಾಕರ ಅವರು 46ನೇ ಕಂಟೋನ್ಮೆಂಟ್‌ ವಾರ್ಡ್‌ನಿಂದ ನಿರಂತರವಾಗಿ ಮೂರು ಬಾರಿ ಆಯ್ಕೆಯಾಗಿರುವ  ಕ್ರಿಯಾಶೀಲ ಹಾಗೂ ಜನಸ್ನೇಹಿ ಕಾರ್ಪೊರೇಟರ್‌ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವರ್ಷದಿಂದ ಮಹಾನಗರ ಪಾಲಿಕೆಯ ಮೇಯರ್‌ ಹುದ್ದೆ ತೆರವಾಗಿದ್ದು, ಇದೀಗ ನೂತನ ಮೇಯರ್‌ ಆಗಿ ದಿವಾಕರ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖೀಸಿದಂತೆ  ಶೀಘ್ರದಲ್ಲಿ ಸಂಸದರು, ಶಾಸಕರ ಹಾಗೂ ಪಕ್ಷದ […]

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ

Friday, February 28th, 2020
meyar

ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಂಟೋನ್ಮೆಂಟ್‌ ವಾರ್ಡ್‌ನ ದಿವಾಕರ ಪಾಂಡೇಶ್ವರ ಹಾಗೂ ನೂತನ ಉಪಮೇಯರ್ ಆಗಿ ಕುಳಾಯಿ ವಾರ್ಡ್‌ನ ವೇದಾವತಿಯವರು ಆಯ್ಕೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಹಾಗೂ ಸ್ಥಾಯೀ ಸಮಿತಿ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. 60 ಕಾರ್ಪೋರೇಟರ್‌ಗಳು ಹಾಗೂ ಶಾಸಕ ವೇದವ್ಯಾಸ ಕಾಮತ್, ಶಾಸಕ ಭರತ್ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜರನ್ನು ಸೇರಿಸಿ ಒಟ್ಟು 63 ಮತಗಳಿದ್ದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು […]

ಪದವು ಪೂರ್ವ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ : ಶಾಸಕ ವೇದವ್ಯಾಸ್

Friday, December 6th, 2019
vedhavyas

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಿವಿಧ ಅನುದಾನಗಳನ್ನು ಜೋಡಿಸಿ 13 ಕಾಮಗಾರಿಗಳಿಗೆ 84.52 ಲಕ್ಷ ಅನುದಾನ ಬಿಡುಗಡೆಗೊಳಿಸಿರುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ 5 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು, ಅದರಲ್ಲಿ ಕುಲಶೇಖರ ಚೌಕಿ ಬೈತುರ್ಲಿ ಬಳಿ ಕಾಲು ಸಂಕ ನಿರ್ಮಾಣವಾಗಲಿದೆ. ಮಳೆಹಾನಿ ಅನುದಾನದಡಿ 15 ಲಕ್ಷ ಬಿಡುಗಡೆಯಾಗಿದ್ದು, ಬೈತುರ್ಲಿ ಚೌಕಿ ಬಳಿ ಚರಂಡಿ ದುರಸ್ತಿ ಕಾಮಗಾರಿಗೆ […]