ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ, ಮಂಗಳೂರು ವಿವಿ ಅಧಿಕಾರಿಗಳ ಇ.ಡಿ ವಿಚಾರಣೆ

Saturday, January 20th, 2024
mangalore-university

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ […]

ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

Tuesday, December 5th, 2023
ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

ಮಂಗಳೂರು: ಹೊಗಳಿಕೆಗೆ ಹಿಗ್ಗದೆ ಟೀಕೆಗೆ ಜಗ್ಗದೆ ಮೌಲ್ಯಾಧಾರಿತ ಶಿಸ್ತಿನ ಜೀವನ ನಡೆಸಿದ ಸಹೋದರನಂತಿದ್ದ ಡಾ. ಬಿ ಯಶೋವರ್ಮ ಅವರು ನಮಗೆ ಶ್ರೇಷ್ಠ ಜೀವನ ಮಾದರಿಯನ್ನು ಬಿಟ್ಟು ಹೋಗಿದ್ದಾರೆ, ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರ ಜಂಟಿ […]

ಮಂಗಳೂರು ವಿವಿ ಗಣೇಶೋತ್ಸದಲ್ಲಿ ವಿವಾದ, ಕಾಂಗ್ರೆಸ್ ನಾಯಕರು ಉತ್ತರಿಸಬೇಕು : ವೇದವ್ಯಾಸ ಕಾಮತ್

Sunday, September 10th, 2023
ವೇದವ್ಯಾಸ ಕಾಮತ್

ಮಂಗಳೂರು : ಮಂಗಳೂರು ವಿವಿ ಯಲ್ಲಿ ಸುಮಾರು 40 ವರ್ಷಗಳಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಗಣೇಶೋತ್ಸವ ನಡೆಯುತ್ತಾ ಬಂದಿದೆ. ಇಷ್ಟು ಸುದೀರ್ಘ ವರ್ಷಗಳ ಕಾಲ ನಿರ್ವಿಘ್ನವಾಗಿ ನಡೆದುಕೊಂಡು ಬರುತ್ತಿದ್ದ ಗಣೇಶೋತ್ಸವಕ್ಕೆ ಇಲ್ಲದಿದ್ದ ವಿರೋಧ ಇದ್ದಕ್ಕಿದ್ದ ಹಾಗೆ ಉಂಟಾಗಿದ್ದು ಹೇಗೆ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಶ್ನಿಸಿದ್ದಾರೆ. ಈ ಬಾರಿ ಗಣೇಶೋತ್ಸವ ನಿಲ್ಲಲಿದೆ ಎಂಬ ಮಾಹಿತಿ ಸಿಕ್ಕ ಕೂಡಲೇ ಶಾಸಕ ವೇದವ್ಯಾಸ ಕಾಮತ್ ಅವರು ವಿಶ್ವವಿದ್ಯಾನಿಲಯದ ಕುಲಪತಿಯವರ ಬಳಿ ಗಣೇಶೋತ್ಸವದ ಆಚರಣೆಗೆ ಯಾವುದೇ ಅಡ್ಡಿ ಆತಂಕ ಆಗದಂತೆ ಮನವಿ […]

ಮಂಗಳೂರು ವಿವಿ ಯುವ ರೆಡ್ ಕ್ರಾಸ್ ಘಟಕಕ್ಕೆ ರಾಜ್ಯ ಪ್ರಶಸ್ತಿ

Tuesday, November 30th, 2021
Red Cross

ಮಂಗಳೂರು: ಯುವ ರೆಡ್ಕ್ರಾಸ್ನ ಚಟುವಟಿಕೆಗಳು ಮತ್ತು ಎಲ್ಲಾ ಹಂತಗಳಲ್ಲಿ ಯುವ ರೆಡ್ ಕ್ರಾಸ್ ನ್ನು ಬಲಪಡಿಸುವಲ್ಲಿ ನೀಡುವ ಬೆಂಬಲವನ್ನು ಗುರುತಿಸಿ ನೀಡಲಾಗುವ ʼಬೆಸ್ಟ್ ಪರ್ಫಾರ್ಮಿಂಗ್ ಯುನಿವರ್ಸಿಟಿʼ ಎಂಬ 2019-20 ನೇ ಸಾಲಿನ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ವಿಭಾಗವು ಭಾಜನವಾಗಿದೆ. ಮಂಗಳವಾರ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ರೆಡ್ ಕ್ರಾಸ್ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ವಿತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ […]

ಮೂರು ದಿನಗಳ 16 ನೇ ಕನ್ನಡ ವಿಜ್ಞಾನ ಸಮ್ಮೇಳನಕ್ಕೆ ಮಂಗಳೂರು ವಿವಿಯಲ್ಲಿ ಚಾಲನೆ

Thursday, September 16th, 2021
Kannada Vijnana Sammelana

ಮಂಗಳೂರು: ವಿಜ್ಞಾನಕ್ಕೆ ಆಂಗ್ಲ ಬಾಷೆ ಅನಿವಾರ್ಯವಲ್ಲ, ಅದೊಂದು ಮನಸ್ಥಿತಿಯಷ್ಟೇ. ವಿಜ್ಞಾನದ ಹೆಚ್ಚಿನ ಆವಿಷ್ಕಾರಗಳು ಆಂಗ್ಲಬಾಷೆಯಲ್ಲಿವೆ. ಅವೆಲ್ಲವೂ ಮಾತೃಬಾಷೆಯ ಮೂಲಕ ಜನಸಾಮಾನ್ಯರನ್ನು ತಲುಪುವ ಅಗತ್ಯವಿದೆ, ಎಂದು ಡಿಆರ್ಡಿಓ ಡೆಬೆಲ್ ನಿರ್ದೇಶಕ ಡಾ. ಟಿ. ಎಂ. ಕೊಟ್ರೇಶ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಸ್ವದೇಶಿ ವಿಜ್ಞಾನ ಆಂದೋಳನ […]

ಮಂಗಳೂರು ವಿವಿ ಯುವ ರೆಡ್ ಕ್ರಾಸ್‍ನಿಂದ ಹೀಗೊಂದು ಕೊರೋನಾ ಅಭಿಯಾನ

Saturday, May 2nd, 2020
Mangalore-VV

ಮಂಗಳೂರು :  ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‍ಕ್ರಾಸ್ ಘಟಕವು ಮಾರಕ ಕೊವಿಡ್-19 ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಕೊರೋನಾ ವೈರಾಣು ಸೋಂಕು ತಂದೊಡ್ಡುವ ಅಪಾಯಗಳ ಕುರಿತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ವಿವಿಧ ರೀತಿಯಲ್ಲಿ ತಿಳುವಳಿಕೆ ನೀಡಲಾಗುತ್ತಿದೆ. ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ತಿಳಿಸುವ ಪೋಸ್ಟರ್ ಗಳನ್ನು ಬಳಸಿಕೊಂಡು ವಾಸ್ತವವನ್ನು ಜನತೆಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದು ಕೊಳ್ಳುವಿಕೆ ಹಾಗೂ ವೈಯಕ್ತಿಕ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವಿಕೆ, ಲಾಕ್ಡೌನ್ […]

ಖೇಲೋ ಇಂಡಿಯಾ ಕ್ರೀಡಾಕೂಟ : ಮಂಗಳೂರು ವಿವಿಯ ಪುರುಷ ಹಾಗೂ ಮಹಿಳಾ ತಂಡಕ್ಕೆ ಸಮಗ್ರ ಚಾಂಪಿಯನ್ ಪಟ್ಟ

Monday, March 2nd, 2020
khelo-india

ಮೂಡುಬಿದಿರೆ : ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ಅಖಿಲ ಭಾರತಅಂತರ್ ವಿ.ವಿ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪುರುಷ ತಂಡ 64 ಅಂಕಗಳೊಂದಿಗೆ ಹಾಗೂ ಮಹಿಳಾ ತಂಡ 51 ಅಂಕಗಳೊಂದಿಗೆ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಂಗಳೂರು ವಿವಿ ಒಟ್ಟು 115 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ನಾಗಿ ಹೊರಹೊಮ್ಮಿತು. ಮಂಗಳೂರು ವಿವಿಯ ಒಟ್ಟು 7 ಚಿನ್ನ, 6ಬೆಳ್ಳಿ ಹಾಗೂ5 ಕಂಚಿನ ಪದಕದೊಂದಿಗೆ ಚಾಂಪಿಯನ್ನ ಪಟ್ಟವನ್ನು ತನ್ನಾದಾಗಿಸಿಕೊಂಡಿತು. ಮಂಗಳೂರು ವಿವಿಯನ್ನು ಪ್ರತಿನಿಧಿಸಿದ 32 ವಿದ್ಯಾರ್ಥಿಗಳ ತಂಡದಲ್ಲಿ 30 ವಿದ್ಯಾರ್ಥಿಗಳು […]

ಎಂ.ಎಲ್ ಗೀತಾ ಅವರ ಮಹಾಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ

Saturday, September 22nd, 2018
Geetha

ಮಂಗಳೂರು : ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿಯ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿರುವ ಡಾ. ಎಂ.ಎಲ್ ಗೀತಾ, ಇವರ ಕ್ವಾಲಿಟಿ ಆಫ್ ವರ್ಕ್ ಲೈಫ್ ಅಮಂಗ್ ಟೀಚಿಂಗ್ ಪ್ರೊಫೆಷನಲ್ಸ್ ವರ್ಕಿಂಗ್ ಇನ್ ಫಸ್ಟ್ ಗ್ರೇಡ್ ಕಾಲೇಜಸ್: ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಈ ಮಹಾ ಪ್ರಬಂಧವನ್ನು ಪ್ರೊ. […]

‘ನುಡಿ ನೂಪುರ’ದಲ್ಲಿ ಮಗುವಿನ ತಂದೆ ಎಂಬ ಲೈಂಗಿಕ ಪಾಠ ವನ್ನು ಹಿಂಪಡೆದ ಮಂಗಳೂರು ವಿವಿ

Wednesday, July 11th, 2018
Nudi Nupura

ಮಂಗಳೂರು  : ಮಂಗಳೂರು ವಿಶ್ವವಿದ್ಯಾನಿಲಯ ದ್ವಿತೀಯ ಬಿ.ಕಾಂ ವಿದ್ಯಾರ್ಥಿಗಳಿಗೆ ಸಿದ್ಧಗೊಳಿಸಿರುವ ಕನ್ನಡ ಪಠ್ಯಪುಸ್ತಕ ನುಡಿ ನೂಪುರದಲ್ಲಿ ದಿವಂಗತ ಮಟ್ಟಾರು ವಿಠಲ ಹೆಗ್ಡೆ ಬರೆದಿರುವ ಮಗುವಿನ ತಂದೆ ಎಂಬ ಲೈಂಗಿಕ  ಪಾಠದ ಬಗ್ಗೆ ಮೆಗಾ ಮೀಡಿಯಾ ನ್ಯೂಸ್ ಜುಲೈ 10 ರಂದು ಸುದ್ದಿ ಪ್ರಕಟಿಸಿದ ಬೆನ್ನಲ್ಲೇ  ಆ ಪಾಠವನ್ನು ಹಿಂಪಡೆದಿದೆ ಎನ್ನುವ ಪ್ರಕಟಣೆಯನ್ನು ನೀಡಿದೆ. ಪರೀಕ್ಷಾ ಗೊಂದಲ, ದೋಷಪೂರಿತ ಫಲಿತಾಂಶ ಪ್ರಕಟ, ಅಂಕಪಟ್ಟಿ ಸಮಸ್ಯೆಗಳಿಂದ ಪ್ರಾರಂಭವಾಗಿ ಅಂಕಪಟ್ಟಿ ಹಗರಣ, ಸಿ.ಸಿ ಕ್ಯಾಮರಾ ಹಗರಣ, ನೇಮಕಾತಿ ಹಗರಣ, ಗುತ್ತಿಗೆ ಹಗರಣ ಹೀಗೆ ಸಾಲು ಸಾಲು ಹಗರಣಗಳಲ್ಲಿ […]

ಮಂಗಳೂರು ವಿವಿ ಬಿ.ಕಾಂ ವಿದ್ಯಾರ್ಥಿಗಳಿಗೆ ‘ನುಡಿ ನೂಪುರ’ದಲ್ಲಿ ಲೈಂಗಿಕತೆ ಪಾಠ

Tuesday, July 10th, 2018
Mangalore Uv

ಮಂಗಳೂರು  : ವಿವಿಯ ಪಠ್ಯ ಪುಸ್ತಕ ರಚನಾ ಸಮಿತಿ ಈ ವರ್ಷದ ದ್ವಿತೀಯ ಬಿ.ಕಾಂ ವಿದ್ಯಾರ್ಥಿಗಳಿಗೆ ಸಿದ್ಧಗೊಳಿಸಿರುವ ಕನ್ನಡ ಪಠ್ಯಪುಸ್ತಕ ನುಡಿ ನೂಪುರದಲ್ಲಿ ತೂರಿಸಿರುವ ಮಟ್ಟಾರು ವಿಠಲ ಹೆಗ್ಡೆ ಎಂಬ ಕಥೆಗಾರರೊಬ್ಬರು 1939ರಲ್ಲಿ ಬರೆದಿರುವ ಮಗುವಿನ ತಂದೆ ಎಂಬ ಲೈಂಗಿಕ ಕಥೆ ಯನ್ನು ಹೇಳಿಕೊಡಲು ಮುಂದಾಗಿದೆ ಎಂದು ವಿದ್ಯಾರ್ಥಿ ಪರಿಷತ್ ಆರೋಪಿಸಿದೆ. ಒಂದು ಕಾಲದಲ್ಲಿ ಉತ್ತಮ ಶಿಕ್ಷಣಕ್ಕೆ ರಾಷ್ಟ್ರ – ಅಂತರರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು ಮಂಗಳೂರು ವಿಶ್ವವಿದ್ಯಾನಿಲಯ ಇತ್ತೀಚಿನ ವರ್ಷಗಳಲ್ಲಿ ತನ್ನ ಆಡಳಿತ ವರ್ಗದವರ ವೈಫಲ್ಯ ಹಾಗು ಎಡವಟ್ಟಿನಿಂದ ಕುಖ್ಯಾತಿ ಪಡೆಯುವಂತಾಗಿದೆ. […]