Blog Archive

ಪತ್ನಿ ಕೊಂದ ಪತಿ… ಬಂಧನ ಭೀತಿಯಿಂದ ನೇಣಿಗೆ ಶರಣು!

Tuesday, September 18th, 2018
mandya

ಮಂಡ್ಯ: ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಪತಿವೋರ್ವ ಬಂಧನ ಭೀತಿಯಿಂದ ನೇಣಿಗೆ ಶರಣಾಗಿರುವ ಘಟನೆ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸಪ್ಪ ಕಳೆದ ರಾತ್ರಿ ತನ್ನ ಪತ್ನಿ ಬಸಮಣಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಮೊಮ್ಮಗ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಬಸಪ್ಪ ಗ್ರಾಮದ ಹೊರ ವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಬಜೆಟ್​ನಲ್ಲಿ ಹಾಸನ, ಮಂಡ್ಯ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ…ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯ!

Thursday, July 5th, 2018
BJP-MLA

ಬೆಂಗಳೂರು: ಆಯವ್ಯಯ ಭಾಷಣದ ಸಂದರ್ಭ ಲೋಕೋಪಯೋಗಿ ಇಲಾಖೆಯ ಯೋಜನೆಯನ್ನು ಸಿಎಂ ಓದುತ್ತಿದ್ದ ಹಾಗೇ ಬಿಜೆಪಿ ಶಾಸಕರು ಮೇಜು ಕುಟ್ಟಿ ವ್ಯಂಗ್ಯವಾಡಿದರು. ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಕೇವಲ ಹಾಸ್ಯಕ್ಕೆ ಸೀಮಿತಗೊಳಿಸಿರುವ ಬಗ್ಗೆ ಬಿಜೆಪಿ ಶಾಸಕರು ಮೇಜು ಕುಟ್ಟಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯಲ್ಲಿ ಹಾಸನಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣಕ್ಕಾಗಿ 30 ಕೋಟಿ ರೂ. ಮೀಸಲಿರಿಸಲಾಗಿದೆ. ಉಳಿದಂತೆ ಇತರ ಯಾವುದೇ ಜಿಲ್ಲೆಗಳಲ್ಲಿನ ಲೋಕೋಪಯೋಗಿ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿಲ್ಲ. ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಇದೇ […]

ಮಂಡ್ಯ ಜಿಲ್ಲೆಯಲ್ಲಿ ಹೊಸ ಸಂಚಲನ… ರಮ್ಯಾ ತಾಯಿ ರಾಜಕೀಯಕ್ಕೆ

Tuesday, March 20th, 2018
ramya

ಮಂಡ್ಯ: ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆಯೇ? ಇಂತಹದ್ದೊಂದು ಹೊಸ ಬಾಂಬ್ ಈಗಷ್ಟೇ ಸ್ಫೋಟಗೊಂಡಿದೆ. ಇದು ಜಿಲ್ಲಾ ರಾಜಕಾರಣದಲ್ಲಿ ಹೊಸ ಸಂಚಲನಕ್ಕೂ ಕಾರಣವಾಗಿದೆ. ಕಾಂಗ್ರೆಸ್ ಪಕ್ಷ ತಮ್ಮನ್ನು ಸರಿಯಾದ ರೀತಿ ನಡೆಸಿಕೊಳ್ಳುತ್ತಿಲ್ಲ. ಎರಡೂವರೆ ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೂ ಸೂಕ್ತ ಸ್ಥಾನ-ಮಾನ ನೀಡಿಲ್ಲವೆಂಬ ಕಾರಣದಿಂದ ಅಸಮಾಧಾನಗೊಂಡಿರುವ ರಂಜಿತಾ ಅವರು ಅನಿವಾರ್ಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ ಎಂದು ಆಪ್ತ ಮೂಲಗಳು […]

ಪುಟ್ಟಣ್ಣಯ್ಯ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ: ಸಿಎಂ ಸಂತಾಪ

Monday, February 19th, 2018
siddaramaih

ಮಂಡ್ಯ : ಪುಟ್ಟಣ್ಣಯ್ಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ವೋದಯ ಪಕ್ಷದ ಶಾಸಕರಾದ ಹಿರಿಯ ರೈತ ಹೋರಾಟಗಾರ ಕೆ.ಎಸ್. ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ. ರೈತ ಚಳುವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದು:ಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇನ್ನು ಪುಟ್ಟಣ್ಣಯ್ಯರಿಗೆ ಪ್ರಥಮ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ರಾಘವೇಂದ್ರ ಮಾತನಾಡಿ, ರಾತ್ರಿ 10.10ರ ಸುಮಾರಿಗೆ ಪುಟ್ಟಣ್ಣಯ್ಯ […]

ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಜಿಲ್ಲಾ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Tuesday, September 6th, 2016
Mandya-Bund

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ಮಂಗಳವಾರ ಮಂಡ್ಯ ಜಿಲ್ಲಾ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಡ್ಯದಿಂದ ವಿವಿಧೆಡೆ ತೆರಳುವ ಎಲ್ಲಾ ಸರಕಾರಿ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದ್ದು ನೂರಾರು ಪ್ರಯಾಣಿಕರು ಬಸ್‌ಸ್ಟಾಂಡ್‌ನ‌ಲ್ಲಿ ಪರದಾಡುತ್ತಿದ್ದಾರೆ. ಜಿಲ್ಲಾಧ್ಯಂತ ಸಾವಿರಾರು ಹೋರಾಟಗಾರರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದ್ದು, ಹಲವೆಡೆ ಬೈಕ್‌ ರಾಲಿ ನಡೆಸಿ ಘೋಷಣೆಗಳನ್ನು ಕೂಗಲಾಗುತ್ತಿದೆ, ಬಾಗಿಲು ತೆರೆದಿದ್ದ ಕೆಲ ಅಂಗಡಿಗಳ ಬಾಗಿಲುಗಳನ್ನು ಬಲವಂತವಾಗಿ ಮುಚ್ಚಿದ ಬಗ್ಗೆ ವರದಿಯಾಗಿದೆ. […]