ಮಳೆಹಾನಿ ಸಂತ್ರಸ್ತೆಯಿಂದ ಹಣ ಕಸಿದುಕೊಂಡ ಆರೋಪ : ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Wednesday, February 26th, 2020
protest

ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡ ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಂತ್ರಸ್ತ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಪರಿಹಾರದ ಹಣದಲ್ಲಿ ಸುಮಾರು 40 ಸಾವಿರ ರೂ.ಗಳನ್ನು ನಗರಸಭಾ ಸಿಬ್ಬಂದಿಯೊಬ್ಬರು ಬೆದರಿಕೆವೊಡ್ಡಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರಸಭಾ ಕಚೇರಿ ಎದುರು ದಿಢೀರ್ ಧರಣಿ ಕುಳಿತ ವೇದಿಕೆಯ ಪ್ರಮುಖರು ಬಾಕಿ ಉಳಿಸಿಕೊಂಡಿರುವ ಪರಿಹಾರದ ಹಣವನ್ನು ತಕ್ಷಣ ನೀಡಬೇಕು ಮತ್ತು ತಪ್ಪಿತಸ್ತ ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು […]

ರಸ್ತೆ ಕಾಮಗಾರಿ ಕಳಪೆ : ಸೂಕ್ತ ಕ್ರಮಕ್ಕೆ ಮಡಿಕೇರಿ ರಕ್ಷಣಾ ವೇದಿಕೆ ಒತ್ತಾಯ

Friday, January 31st, 2020
road

ಮಡಿಕೇರಿ : ನಗರದ ರಾಣಿಪೇಟೆಯಿಂದ ಮುತ್ತಪ್ಪ ದೇವಾಲಯದ ರಸ್ತೆಯನ್ನು ಇತ್ತೀಚೆಗಷ್ಟೇ ಡಾಮರೀಕರಣಗೊಳಿಸಲಾಗಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿರುವ ಮಡಿಕೇರಿ ರಕ್ಷಣಾ ವೇದಿಕೆ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದಂತೆ ಒತ್ತಾಯಿಸಿದೆ. ಕಾಮಗಾರಿ ನಡೆದ ಒಂದೇ ವಾರದಲ್ಲಿ ರಸ್ತೆ ಕಿತ್ತು ಬರುತ್ತಿದ್ದು, ಸಾರ್ವಜನಿಕರ ಹಣ ಪೋಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ವೇದಿಕೆಯ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಪ್ರಮುಖರು ಗುತ್ತಿಗೆದಾರರ ಬಿಲ್ ಗೆ ಅನುಮೋದನೆ ನೀಡಬಾರದು, ಕಾಮಗಾರಿ ಉಸ್ತವಾರಿ ವಹಿಸಿದ ನಗರಸಭೆಯ ಇಂಜಿನಿಯರ್ […]

ಮಡಿಕೇರಿ ರಕ್ಷಣಾ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Tuesday, January 28th, 2020
rakshana-vedike

ಮಡಿಕೇರಿ : ಮಡಿಕೇರಿ ನಗರದ ಸ್ಟೋನ್‌ಹಿಲ್ ಮೇಲಿರುವ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ಸುರಕ್ಷಿತ ಮತ್ತು ಜನವಸತಿಯಿಂದ ದೂರವಿರುವ ಪ್ರದೇಶಕ್ಕೆ ಸ್ಥಳಾಂತರಿಸಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ರಕ್ಷಣಾ ವೇದಿಕೆಯ ಪ್ರಮುಖರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆಯನ್ನು ಮಡಿಕೇರಿ ಜಿಲ್ಲೆಯೆಂದು ಕೆಲವು ಅಧಿಕಾರಿಗಳು ಉಲ್ಲೇಖಿಸುತ್ತಿದ್ದು, ಎಲ್ಲಾ ದಾಖಲೆ ಮತ್ತು ಸುತ್ತೋಲೆಗಳಲ್ಲಿ ಕೊಡಗು ಜಿಲ್ಲೆ ಎಂದೇ ಸ್ಪಷ್ಟವಾಗಿ ನಮೂದಿಸಲು ಸೂಚನೆ ನೀಡಬೇಕು. ನಗರದ ತ್ಯಾಜ್ಯ […]

ರಾಸಾಯನಿಕ ದ್ರವ ರೂಪದ ವೈನ್ ಮಾರಾಟ : ಸೂಕ್ತ ಕ್ರಮಕ್ಕೆ ಮಡಿಕೇರಿ ರಕ್ಷಣಾ ವೇದಿಕೆ ಆಗ್ರಹ

Thursday, January 16th, 2020
pavan

ಮಡಿಕೇರಿ : ಇತ್ತೀಚೆಗೆ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ನಕಲಿ ಚಾಕಲೇಟ್ ದಂಧೆಯನ್ನು ತಕ್ಷಣ ಮಟ್ಟ ಹಾಕುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ವ್ಯಕ್ತಪಡಿಸಿದ ನಿಲುವನ್ನು ಮಡಿಕೇರಿ ರಕ್ಷಣಾ ವೇದಿಕೆ ಸ್ವಾಗತಿಸುತ್ತದೆ ಮತ್ತು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಶಾಸಕರು ತೆಗೆದುಕೊಂಡ ನಿಲುವನ್ನು ಅಭಿನಂದಿಸುತ್ತದೆ ಎಂದು ವೇದಿಕೆಯ ಅಧ್ಯಕ್ಷ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೊರರಾಜ್ಯದವರು ಕೊಡಗಿನಲ್ಲಿ ತಂದು ಮಾರಾಟ ಮಾಡುತ್ತಿರುವ ನಕಲಿ ಚಾಕಲೇಟ್ ದಂಧೆಯಿಂದಾಗಿ […]

ನಕಲಿ ಚಾಕಲೇಟ್ ಮಾರಾಟದ ವಿರುದ್ಧ ಕ್ರಮಕ್ಕೆ ವಿವಿಧ ಸಂಘಟನೆಗಳ ಆಗ್ರಹ

Monday, December 23rd, 2019
chocolate

ಮಡಿಕೇರಿ : ಕೊಡಗು ಜಿಲ್ಲೆಯ ಕೆಲವು ಪ್ರವಾಸಿ ಕೇಂದ್ರಗಳು ಮತ್ತು ಹೆದ್ದಾರಿ ಬದಿಯಲ್ಲಿ ತಲೆ ಎತ್ತಿರುವ ಸ್ಪೈಸಸ್ ಮಳಿಗೆಗಳಲ್ಲಿ ನಿಯಮಬಾಹಿರವಾಗಿ ಹೋಂಮೇಡ್ ಚಾಕಲೇಟ್ ಹೆಸರಿನಲ್ಲಿ ನಕಲಿ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯನ್ನು ಒತ್ತಾಯಿಸಿವೆ. ನಕಲಿ ಚಾಕಲೇಟ್ ಮತ್ತು ಆಹಾರ ಪದಾರ್ಥಗಳನ್ನು ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದ್ದು, ಆಹಾರ ಮಾರಾಟದ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಮಡಿಕೇರಿ ರಕ್ಷಣಾ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ವೇದಿಕೆ […]