ಉಡುಪಿ ಕೃಷ್ಣ ಮಠದಲ್ಲಿ ಮಡೆಸ್ನಾನದ ಬದಲು ಎಡೆಸ್ನಾನ ಸಂಪ್ರದಾಯ
Tuesday, December 6th, 2016ಉಡುಪಿ: ಮಡೆಸ್ನಾನ ಮತ್ತು ಎಡೆಸ್ನಾನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಉಡುಪಿಯಲ್ಲಿ ಮಡೆಸ್ನಾನದ ಬದಲು ಎಡೆಸ್ನಾನ ಸಂಪ್ರದಾಯ ಆರಂಭವಾಗಿದೆ. ಇಲ್ಲಿನ ಶ್ರೀ ಕೃಷ್ಣ ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಏಳು ಮಂದಿ ಭಕ್ತರು ಎಡೆಸ್ನಾನ ಮಾಡಿ ಹರಕೆ ತೀರಿಸಿದರು. 500 ವರ್ಷಗಳ ಹಿಂದಿನ ಸಂಪ್ರದಾಯವನ್ನು ಮುರಿದ ಪೇಜಾವರ ಶ್ರೀಗಳು ತಮ್ಮ ಪರ್ಯಾಯದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಧಾರ ಕೈಗೊಂಡು ಮಡೆಸ್ನಾನಕ್ಕೆ ತಿಲಾಂಜಲಿ ಇಟ್ಟರು. ಮಡೆಸ್ನಾನ ಮತ್ತು ಎಡೆಸ್ನಾನದ ಬಗ್ಗೆ ಅವಿಭಜಿತ ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆ, ಪ್ರತಿಭಟನೆಗಳು ನಡೆದಿವೆ. […]