ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ 52.64 ಮತದಾನ

Sunday, December 27th, 2020
vote

ಮಂಗಳೂರು : ದ.ಕ. ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಬೆಳ್ತಂಗಡಿ.  53.35 , ಪುತ್ತೂರು. 52.85, ಸುಳ್ಯ.51.37 ,ಕಡಬ  52.07  ಮತದಾನವಾಗಿದ್ದು  ಜಿಲ್ಲೆಯಲ್ಲಿ  ಒಟ್ಟು.52.64 ಮತದಾನವಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಮತಗಟ್ಟೆಗಳಿಗೆ ಮತದಾರರು ಅಧಿಕ ಸಂಖ್ಯೆಯಲ್ಲಿ ಬರಲಾರಂಭಿಸಿದರು ಮತದಾನ ಬಿರುಸಿನಿಂದ ಸಾಗಿದೆ. ಎರಡನೇ ಹಂತದಲ್ಲಿ ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 11,541 ಸ್ಥಾನಗಳಿಗೆ ಚುನಾವಣೆ […]

ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದ ಮತದಾನ ಬಿರುಸಿನಿಂದ ಆರಂಭ

Tuesday, December 22nd, 2020
GP vote

ಮಂಗಳೂರು :  ಗ್ರಾಮ ಪಂಚಾಯತ್ ಗಳಿಗೆ ನಡೆಯುತ್ತಿರುವ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. 10 ಗಂಟೆ ವೇಳೆಗೆ ಮಂಗಳೂರು ತಾಲೂಕಿನಲ್ಲಿ 14.6 ಶೆ., ಮೂಡುಬಿದರೆ15.64 ಶೇ. ಹಾಗೂ ಬಂಟ್ಟಾಳ ತಾಲೂಕಿನಲ್ಲಿ 13.75 ಶೇ. ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 14.48 ಶೇ. ಮತದಾನವಾಗಿರುವುದು ವರದಿಯಾಗಿದೆ. ಸ್ಯಾನಿಟೈಸರ್, ಮಾಸ್ಕ್ ಧರಿಸಿ ಸುರಕ್ಷಿತ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ಮತದಾರರು ಮತದಾನ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತರು ಥರ್ಮಾಮೀಟರ್ ನಲ್ಲಿ ದೇಹದ […]

ಗ್ರಾಮ ಪಂಚಾಯತ್ ಚುನಾವಣೆಗೆ ಸಿಬ್ಬಂದಿಗಳ ಸಿದ್ಧತೆ

Monday, December 21st, 2020
GP vote

ಬಂಟ್ವಾಳ : ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ  ಡಿ.22ರಂದು ನಡೆಯಲಿದ್ದು, ಚುನಾವಣಾ ಸಾಮಗ್ರಿಗಳನ್ನುಆಯಾಯ ಮತಗಟ್ಟೆಗಳಿಗೆ  ಇಂದು ಕೊಂಡೊಯ್ಯಲಾಗಿದೆ. ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ 57 ಗ್ರಾಮ ಪಂಚಾಯತ್ಗಳ 822 ಸ್ಥಾನಗಳಿಗೆ ನಾಳೆ ಮೊದಲ ಹಂತದ ಮತದಾನ ನಡೆಯಲಿದ್ದು, ಒಟ್ಟು 2,75,097 ಮಂದಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ ನ ಮೊಡಂಕಾಪುವಿನಿಂದ 155 ವಾಹನಗಳಲ್ಲಿ ಪ್ರತಿಯೊಂದು ಬೂತ್ ಗೆ ತಲಾ 6ರಂತೆ ಒಟ್ಟು 2,376 ಮಂದಿ ನಿಗದಿಪಡಿಸಲಾಗಿರುವ ಬೂತ್ ಗಳಿಗೆ ಇಂದು ತೆರಳಿದ್ದಾರೆ. ಮಂಗಳೂರು ತಾಲೂಕಿನ 57 ಗ್ರಾಪಂಗಳ 837 […]

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಡಿ.22ರಂದು

Sunday, December 20th, 2020
Grama panchayath

ಮಂಗಳೂರು : ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ  ಡಿ.22ರಂದು ನಡೆಯಲಿದ್ದು, ದ.ಕ.ಜಿಲ್ಲೆಯ 106 ಗ್ರಾಪಂಗಳ 1,631 ಸ್ಥಾನಗಳಿಗೆ 3,854 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅನುಸೂಚಿತ ಜಾತಿಯ 238, ಅನುಸೂಚಿತ ಪಂಗಡದ 215 ಹಾಗೂ ಹಿಂದುಳಿದ ‘ಅ’ ವರ್ಗದ 958, ಹಿಂದುಳಿದ ‘ಬಿ’ ವರ್ಗದ 226, ಸಾಮಾನ್ಯ 2,217 ಸಹಿತ ಒಟ್ಟು 3,854 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಮಂಗಳೂರಿನ 322, ಮೂಡುಬಿದಿರೆಯ 99, ಬಂಟ್ವಾಳದ 396 ಸಹಿತ 817 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಅಲ್ಲದೆ 1350 ಮತಪೆಟ್ಟಿಗೆಗಳನ್ನು […]

ಡಿಸೆಂಬರ್ 22, 27 ರಂದು ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ

Monday, November 30th, 2020
Basavaaraj

ಬೆಂಗಳೂರು : ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ ಯ ದಿನಾಂಕಗಳು ಪ್ರಕಟಗೊಂಡಿದ್ದು ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗವು ಸೋಮವಾರ  ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ.  ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. […]

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಏರ್ಪಡಿಸಲು ಆದೇಶ

Monday, April 11th, 2016
Eelection Commission

ಕಾಸರಗೋಡು : ವಿಧಾನಸಭಾ ಚುನಾವಣೆಯ ಅಂಗವಾಗಿ ಕಾಸರಗೋಡು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲೂ ಅಗತ್ಯದ ಮೂಲಭೂತ ಸೌಲಭ್ಯಗಳನ್ನು ಎ.30 ರೊಳಗೆ ಖಚಿತಪಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಇ.ದೇವದಾಸನ್ ತಿಳಿಸಿದ್ದಾರೆ. ಕಾಸರಗೋಡು ಕಲೆಕ್ಟರೇಟ್‌ನ ಮಿನಿ ಕಾನರೆನ್ಸ್ ಹಾಲ್‌ನಲ್ಲಿ ಜರಗಿದ ಚುನಾವಣಾ ಸೆಕ್ಟರಲ್ ಆಫೀಸರ್‌ಗಳ ಅವಲೋಕನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶಿಸಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ಶೌಚಾಲಯ, ರ‍್ಯಾಂಪ್, ಕುಡಿಯುವ ನೀರು, ಪೀಠೋಪಕರಣಗಳು, ಗಾಲಿ ಕುರ್ಚಿ, ಪ್ರಥಮ ಚಿಕಿತ್ಸೆ , ವಿದ್ಯುತ್, ದೂರವಾಣಿ ಮೊದಲಾದ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಬೇಕಾಗಿದೆ. ಶೌಚಾಲಯದ ವ್ಯವಸ್ಥೆ […]

ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ

Wednesday, August 12th, 2015
KDP

ಮಂಗಳೂರು :-ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲಿಸಿದರು. ಜನಪ್ರತಿನಿಧಿಗಳು ಇಂದು ಒಬ್ಬರು ನಾಳೆ ಮತ್ತೊಬ್ಬರು ಬರುತ್ತಾರೆ. ಆದರೆ ಅಧಿಕಾರಿಗಳು ಎಲ್ಲಾ […]