ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ : ಕ್ಯಾಪ್ಟನ್ ಬ್ರಿಜೇಶ್ ಚೌಟ

Thursday, February 1st, 2024
Brijesh-chowta

ಮಂಗಳೂರು : ಸನ್ಮಾನ್ಯ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ . ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ […]

ಮಧ್ಯಂತರ ಬಜೆಟ್ ದೇಶದ ಭರವಸೆಯ ಬಜೆಟ್ : ಶಾಸಕ ವೇದವ್ಯಾಸ್ ಕಾಮತ್

Thursday, February 1st, 2024
Vedavyas-kamath

ಮಂಗಳೂರು : ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಇದು ದೇಶದ ಭರವಸೆಯ ಬಜೆಟ್ ಆಗಿದ್ದು ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಆ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರ್ಕಾರವು ದೇಶವನ್ನು ಕೊಂಡೊಯ್ಯುತ್ತಿದೆ. ಪಿಎಂ […]

ಹಾಲಿನ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಮಧ್ಯಂತರ ಬಜೆಟ್ ನಲ್ಲಿ ಆದ್ಯತೆ

Thursday, February 1st, 2024
nirmala-seetharaman

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ದೇಶದಲ್ಲಿ ಹಾಲು ಮತ್ತು ಡೈರಿ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಭಾರತ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೆ ಕಡಿಮೆ ಉತ್ಪಾದಕತೆ ಹೊಂದಿದೆ. ಹೀಗಾಗಿ ಡೈರಿಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ಹೇಳಿದ್ದಾರೆ. 2022-23ರಲ್ಲಿ ಭಾರತದ ಹಾಲಿನ ಉತ್ಪಾದನೆಯು 230.58 ಮಿಲಿಯನ್ ಟನ್‌ಗಳಿಗೆ ಅಂದರೆ ಶೇ. 4 ರಷ್ಟು ಏರಿಕೆಯಾಗಿದೆ. […]