ಮಧ್ಯಪ್ರದೇಶದ 22 ಕಾಂಗ್ರೆಸ್‌ ಶಾಸಕರಿಗೆ ಸ್ಪೀಕರ್‌ ನೋಟಿಸ್‌ ಜಾರಿ

Friday, March 13th, 2020
Congress

ಭೋಪಾಲ್ ‌: ಮಧ್ಯಪ್ರದೇಶ ವಿಧಾನ ಸಭೆಯ ಸದಸ್ಯತ್ವ ತೊರೆದಿರುವ ಕಾಂಗ್ರೆಸ್‌ನ 22 ಶಾಸಕರಿಗೆ ವಿಧಾನಸಭಾ ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಎ.ಪಿ. ಸಿಂಗ್‌ ಈ ವಿಷಯ ತಿಳಿಸಿದ್ದಾರೆ. ‘ಶುಕ್ರವಾರ ಸ್ಪೀಕರ್‌ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವಿಚಾರಣೆಯಲ್ಲಿ, ತಮ್ಮ ರಾಜೀನಾಮೆ ನಿರ್ಧಾರ ಸ್ವಯಂಪ್ರೇರಿತವೋ ಅಥವಾ ಒತ್ತಡದಿಂದ ಕೈಗೊಂಡ ನಿರ್ಧಾರವೋ ಎಂಬುದರ ಬಗ್ಗೆ ಸ್ಪಷ್ಟವಾಗಿ ವಿವರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ವಿಶ್ವಾಸಮತಕ್ಕೆ ಮನವಿ: 22 ಶಾಸಕರ ರಾಜೀನಾಮೆ ಯಿಂದ […]

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು : ನಾಳೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆ

Wednesday, March 11th, 2020
jyothiradhithya

ಬೆಂಗಳೂರು : ಕಾಂಗ್ರೆಸ್ ತೊರೆದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಸದ್ಯದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆ ಅಂದರೆ ಗುರುವಾರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲೇ ಸಿಂಧಿಯಾ ಕಮಲದ ಕೈ ಹಿಡಿಯಲಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಬೆಳಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ […]

ಮಧ್ಯಪ್ರದೇಶ ಸರ್ಕಾರ ಉರುಳಿಸಲು ಬಿಜೆಪಿಗೆ ಆಸಕ್ತಿಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್

Tuesday, March 10th, 2020
shivaraj-singh-chawhan

ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜ್ಯದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಸಿನ ಆಂತರಿಕ ವಿಚಾರ, ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಸರ್ಕಾರ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದರು. ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಹಠಾತ್‌ ಬೆಳವಣಿಗೆಯಲ್ಲಿ […]

ಮಧ್ಯಪ್ರದೇಶ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದ ಭೀತಿಯಲ್ಲಿ

Monday, March 9th, 2020
Kamalanath

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಹಿರಿಯ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ 6 ಸಚಿವರು ಸೇರಿದಂತೆ 17 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ. 6 ಸಚಿವರು, 11 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ […]

ಪಟಾಕಿ ತಯಾರಿಸುತ್ತಿದ್ದ ಮನೆಗೆ ಬೆಂಕಿ : ಇಬ್ಬರು ಮೃತ್ಯು

Saturday, October 19th, 2019
pataki

ಗುನಾ : ಪಟಾಕಿ ತಯಾರಿಸುತ್ತಿದ್ದ ಮನೆಗೆ ಬೆಂಕಿ ತಗುಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀರ್ (18) ಮತ್ತು ರುಷ್ಕರ್ (26) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.  

ಮಧ್ಯಪ್ರದೇಶದ 18ನೇ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

Monday, December 17th, 2018
kamalnath

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಧ್ವಜ ನೆಟ್ಟು, ಗೆಲುವಿನ ನಗೆ ಬೀರಿದ ಕಮಲನಾಥ್ ಅವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜು ಖರ್ಗೆ, ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ , ಜೆಡಿಯು ನಿರ್ಮಿತ ನಾಯಕ ಶರದ್ ಯಾದವ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಡಿಸಿಎಂ ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, […]

ಇಂದಿರಾಗಾಂಧಿ ಆಪ್ತನಿಗೆ ಮಧ್ಯಪ್ರದೇಶದ ಗದ್ದುಗೆ: ಸಿಎಂ ಗಾದಿಗೇರಲಿರುವ ಕಮಲನಾಥ್

Friday, December 14th, 2018
rahul-gandhi

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಲು ಕಾರಣರಾದ ಕಮಲನಾಥ್ ಸಿಎಂ ಆಗಿ ಡಿಸೆಂಬರ್ 17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ವ್ಯಾಪಕ ಚರ್ಚೆಯ ನಂತರ ಕಮಲನಾಥ್ರನ್ನೇ ಸಿಎಂ ಎಂದು ಕಾಂಗ್ರೆಸ್ ಹೈಕಮಾಂಡ್ ನಿನ್ನೆ ಅಧೀಕೃತವಾಗಿ ಘೋಷಿಸಿತ್ತು. ಡಿ. 17ರಂದು ಲಾಲ್ ಪರೇಡ್ ಗ್ರೌಂಡ್ನಲ್ಲಿ ನಡೆಯುವ ಸಮಾರಂಭದಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಳ್ಳಲಿದ್ದಾರೆ . ಒಂಭತ್ತು ಬಾರಿ ಸಂಸದರಾಗಿ ಆಯ್ಕೆಯಾಗಿರುವ 72 ವರ್ಷದ ಕಮಲನಾಥ್, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಸ್ಥಿತ್ವ ತೋರಿಸಲು ಸಾಕಷ್ಟು ಶ್ರಮಿಸಿದ್ದಾರೆ. ಕಮಲನಾಥ್ ಗಾಂಧಿ […]

ಶ್ರೀ ಸರಸ್ವತಿ ಮಂದಿರದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ನಿರಾಕರಿಸುತ್ತಿರುವ ಮಧ್ಯಪ್ರದೇಶ ಸರಕಾರದ ವಿರುದ್ಧ ಪ್ರತಿಭಟನೆ

Saturday, February 16th, 2013
Vasanth Panchami Pooja at Dhara

ಮಂಗಳೂರು : ಶ್ರೀ ಕಾಶಿ ಸುಮೇರೂ ಪೀಠದ ಶಂಕರಾಚಾರ್ಯ ನರೇಂದ್ರಾನಂದ ಸರಸ್ವತಿ ಅಪಹರಣ ಮತ್ತು ಹಿಂದೂ ಧರ್ಮಗುರುಗಳ ಘೋರ ಅಪಮಾನವನ್ನು ಖಂಡಿಸಲು ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಧ್ಯಪ್ರದೇಶದಲ್ಲಿನ ದಾರದ ಪ್ರಾಚೀನ ಶ್ರೀ ಸರಸ್ವತಿ ಮಂದಿರದಲ್ಲಿ (ಭೋಜಶಾಲೆ) ವಸಂತಪಂಚಮಿಯ ದಿನ ಹಿಂದೂಗಳಿಗೆ ಪೂಜೆ ಮಾಡುವ ಅಧಿಕಾರವಿದೆ. ಈ ಬಾರಿ ವಸಂತಪಂಚಮಿ ಶುಕ್ರವಾರ ಬಂದಿರುವುದರಿಂದ ಅಲ್ಲಿ ಶುಕ್ರವಾರದ ಪೂಜೆಯನ್ನು ನಿಲ್ಲಿಸಿ ಮಧ್ಯಾಹ್ನ ಮುಸಲ್ಮಾನರಿಗೆ ನಮಾಜು ಪಠಿಸಲು ಸರಕಾರವು ಅನುಮತಿ ನೀಡಿತ್ತು. […]

ಅಂತರ್ ರಾಜ್ಯ ಕಳ್ಳರ ಜಾಲ ಪತ್ತೆ, 13 ಲಕ್ಷ ಮೌಲ್ಯದ ಬೆಳ್ಳಿ ಆಭರಣ ವಶ

Saturday, December 15th, 2012
Inter state thieves

ಮಂಗಳೂರು :ಜುವೆಲ್ಲರಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ಚೋರರ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಭೇದಿಸಿ ಒಟ್ಟು 8 ಮಂದಿಯನ್ನು ಬಂಧಿಸಿ ಕಾರು ಸಹಿತ 13 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯಪ್ರದೇಶ ಧಾರ್ ಜಿಲ್ಲೆಯ ಕುಕ್ಷಿ ತಾಲೂಕಿನ ಭಾಗ್ ತಾಂಡಾ ವಾಸಿಗಳಾದ ಅಮರ್ ಸಿಂಗ್ ಯಾನೆ ಅಮ್ಜತ್(28), ಸರ್ದಾರ್(20), ಮದನ್(32), ಬಹುಲಿಯ(50), ಮಡಿಯಾ ಭುರಿಯಾ(40), ಉಷನ್ ಬಿಲಾಲ(38), ಮೋಹನ್ ಸಿಂಗ್ ಯಾನೆ ಮುನ್ಸ(30), ವಿಜಯಾ ಕುಮಾರ್ ಸೋನಿ ಯಾನೆ ಮುನ್ನಾ ಜೋಭಟ್(50) ಬಂಧಿತ […]