ಮತದಾರರ ಜಾಗೃತಿಗಾಗಿ ಮಾನವ ಸರಪಳಿ: ವಿದ್ಯಾರ್ಥಿಗಳ ಜತೆ ಮನಪಾ ಸಿಬ್ಬಂದಿ ಸಾಥ್
Friday, April 6th, 2018ಮಂಗಳೂರು: ದ.ಕ. ಜಿಲ್ಲಾ ಸ್ವೀಪ್ ವತಿಯಿಂದ ಮತದಾರರ ಜಾಗೃತಿ ಅಂಗವಾಗಿ ಆಯೋಜಿಸಲಾದ ಮಾನವ ಸರಪಳಿಯಲ್ಲಿ ನಗರದ ಕಾಲೇಜು ವಿದ್ಯಾರ್ಥಿಗಳ ಜತೆ ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡಿದರು. ಮನಪಾ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ವಿದ್ಯಾರ್ಥಿಗಳು, ಸಿಬ್ಬಂದಿ, ಎನ್‌ಜಿಒ ಸಂಸ್ಥೆ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆರಂಭದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ದ.ಕ. ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್ […]