ಪರಿಶಿಷ್ಟ ಜಾತಿಯ ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಏರಿಕೆ
Monday, August 9th, 2021ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ […]