ಮಹಿಳೆಯನ್ನು ಪೀಡಿಸುತ್ತಿದ್ದ ಕನ್ನಡ ಸಂಘಟನೆ ನಾಯಕನ ಬಂಧನ

Monday, July 16th, 2018
immoral-behaviour

ಉಡುಪಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಉಡುಪಿಯ ಶಿರ್ವ ಗ್ರಾಮದಲ್ಲಿ ಸಿಕ್ಕಿ ಬಿದ್ದ ಘಟನೆ ಶನಿವಾರ ನಡೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಎಂದು ಹೇಳಿಕೊಳ್ಳುತ್ತಿರುವ ಸಂತೋಷ್ ಶೆಟ್ಟಿ ಪಂಜಿಮಾರ್ ಮಹಿಳೆಗೆ ಕಿರುಕುಳ ನೀಡಿ, ಬಂಧನಕ್ಕೆ ಒಳಗಾದ ಆರೋಪಿ. ಸಂತೋಷ್ ಶೆಟ್ಟಿ ಪಂಜಿಮಾರ್ ಈ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷನಾಗಿದ್ದು, ಹಲವಾರು ಕೆಟ್ಟ ಕೆಲಸ ಮಾಡಿ ತನ್ನ ಸ್ಥಾನ ಕಳೆದುಕೊಂಡಿದ್ದ. ಆದರೆ ಅದೇ ಸ್ಥಾನದ ಹೆಸರು ಹೇಳಿ ಹಲವರನ್ನು ಈಗಲೂ ಮಂಗ […]

ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ: ಮನೇಕಾ ಗಾಂಧಿ

Tuesday, March 6th, 2018
menaka-gandhi

ಉಡುಪಿ: ಮಹಿಳೆಯರ ನೋವುಗಳಿಗೆ ಸ್ಪಂದಿಸಿ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ವನ್ ಸ್ಟಾಪ್ ಸೆಂಟರ್ ‘ಸಖಿ’ಯನ್ನು ಆರಂಭಿಸುವ ಯೋಜನೆಯನ್ನು ಕೇಂದ್ರ ಸರಕಾರ ಪ್ರಾರಂಭಿಸಿದ್ದು, ಈವರೆಗೆ ದೇಶದಲ್ಲಿ ಒಟ್ಟು 171 ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಕರ್ನಾಟಕದಲ್ಲಿ ಪ್ರಥಮ ಕೇಂದ್ರ ಉಡುಪಿಯಲ್ಲಿ ಉದ್ಘಾಟನೆಗೊಂಡಿದ್ದು, ಇಲ್ಲಿ ಮಹಿಳೆಯ ಸುರಕ್ಷತೆಗೆ ಅಗತ್ಯ ವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ. ನಗರದ ನಿಟ್ಟೂರಿನಲ್ಲಿ 37.50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೊದಲ ‘ಸಖಿ’ […]