ಒನಕೆ ಓಬವ್ವರ ಸಾಹಸ, ಧೈರ್ಯ ಮಾದರಿ :- ಮಮತಾ ಗಟ್ಟಿ

Monday, November 11th, 2024
Mamatha-gatty-obuva

ಮಂಗಳೂರು : ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ ವೀರರಾಣಿ ಒನಕೆ ಓಬವ್ವ […]

ರಾಷ್ಟ್ರೀಯ ಆಯುರ್ವೇದ ದಿನಾಚರಣೆ – “ಅಸಮರ್ಪಕ ಜೀವನ ಶೈಲಿಯಿಂದ ಆರೋಗ್ಯಕ್ಕೆ ಆಪತ್ತು”

Tuesday, October 29th, 2024
Ayurveda-Day

ಮಂಗಳೂರು : ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಯಿಗೆ ಚಪಲಕ್ಕೆ […]

ಶಿಕ್ಷಕರು ತಮ್ಮ ಜ್ಞಾನ ಧಾರೆ ಎರೆಯಬೇಕು :- ಮಮತಾ ಗಟ್ಟಿ

Tuesday, September 10th, 2024
Mamatha-gatty

ಮಂಗಳೂರು : ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆ ಎರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳು ಸಹಭಾಗಿತ್ವದಲ್ಲಿ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ ಅಧಿಕಾರ ಸ್ವೀಕಾರ

Friday, March 1st, 2024
sadashiva-ullal

ಮಂಗಳೂರು: ನಾಲ್ಕೂವರೆ ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಸದಾಶಿವ ಉಳ್ಳಾಲ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಸದಾಶಿವ ಉಳ್ಳಾಲ್ ಮಾತನಾಡಿ ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವೆ. ಪಕ್ಷಕ್ಕೆ ಯಾವ ಬಗೆಯಲ್ಲೂ ಮುಜುಗರ ಆಗದಂತೆ ಬಡವರಿಗೆ ಸೂರು ನಿರ್ಮಿಸಿಕೊಳ್ಳಲು ಜಾಗ ಸಿಗುವಂತೆ ಮಾಡಲು ಪ್ರಯತ್ನಿಸುವೆ’ ಎಂದು ಹೇಳಿದ್ದಾರೆ. ವಕೀಲರಾಗಿರುವ ಸದಾಶಿವ ಉಳ್ಳಾಲ್ ಅವರು ಉಳ್ಳಾಲ ತಾಲ್ಲೂಕಿನ ಕೊಲ್ಯ ನಿವಾಸಿ. ಗ್ರಾಮ ಪಂಚಾಯಿತಿ ಮತ್ತು ಬೂತ್ ಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ […]

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಅವರಿಗೆ ಮಾತೃ ವಿಯೋಗ

Thursday, March 11th, 2021
Sharadha Gatty

ಮಂಗಳೂರು : ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಕಾಂಗ್ರೆಸ್ ನಾಯಕಿ ಶ್ರೀಮತಿ ಮಮತಾ ಗಟ್ಟಿಯವರ ಮಾತೃಶ್ರೀ ಶಾರದಾ ಎಸ್. ಗಟ್ಟಿ (75) ಯವರು ಗುರುವಾರ ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಮಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಧರ್ಮಕ್ಕಿ ಸಂಜೀವ ಗಟ್ಟಿಯವರ ಧರ್ಮ ಪತ್ನಿ ಯಾದ ಅವರು ಎರಡು ಹೆಣ್ಣು ಬಬಿತಾ, ಮಮತಗಟ್ಟಿ ಹಾಗೂ  ಸತೀಶ್, ರಾಜೇಶ್ ಎರಡು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಂಧನ ತೈಲ ಬೆಲೆಯೇರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್‌ನಿಂದ ಸೈಕಲ್, ಎತ್ತಿನಗಾಡಿ ಜಾಥಾ

Saturday, February 3rd, 2018
congress

ಮಂಗಳೂರು: ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಿ, ಕೇಂದ್ರ ಸರಕಾರದ ಜನವಿರೋಧಿಯನ್ನು ವಿರೋಧಿಸಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದಲ್ಲಿ ಎತ್ತಿನ ಗಾಡಿಯೊಂದಿಗೆ ಸೈಕಲ್ ಜಾಥಾ ನಡೆಯಿತು. ನಗರದ ಅಂಬೇಡ್ಕರ್ ವೃತ್ತ(ಜ್ಯೋತಿ)ದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾವನ್ನು ಚಲನಚಿತ್ರ ನಟಿ ಭಾವನಾ ಹಾಗೂ ಶಾಸಕ ಜೆ.ಆರ್.ಲೋಬೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಪೆಟ್ರೋಲ್, ಡೀಸೆಲ್ ಬೆಲೆ ದಿನೇದಿನೆ ಗಗನಕ್ಕೇರುತ್ತಿದೆ. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಇಂಧನ ತೈಲ ಬೆಲೆಯೇರಿಕೆಯ ವಿರುದ್ಧ […]

ಬಿಜೆಪಿ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ : ಮಮತಾ ಗಟ್ಟಿ

Tuesday, March 5th, 2013
Mahila Congress Chief

ಮಂಗಳೂರು : ಬಿಜೆಪಿ ಯು ಅಧಿಕಾರಕ್ಕೆ ಬಂದ ನಂತರ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಈ ಚುನಾವಣೆಯಲ್ಲಿ ಜನರು ಬಿಜೆಪಿ ಯನ್ನು ಸೋಲಿಸುವುದು ಖಂತಡಿತ ಎಂದು ಜಿಲ್ಲಾ ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರ ನಗರದಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅನಾಚಾರ, ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಹಾಲಿನ ದರ, ವಿದ್ಯುತ್ ದರದಲ್ಲಿ ಗಣನೀಯವಾಗಿ ಹೆಚ್ಚಳವನ್ನು ಮಾಡಿ ಮಹಿಳೆಯರನ್ನು […]