ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

Friday, November 8th, 2024
Illegal Boats

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ […]

ಮರಳುಗಾರಿಕೆಗೆ ಅಧಿಕ ದರ ವಸೂಲಿ ಮಾಡಿದರೆ ಕಂಟ್ರೋಲ್ ರೂಂಗೆ ದೂರು ಸಲ್ಲಿಸಬಹುದು

Wednesday, November 7th, 2018
Sand Act

ಮಂಗಳೂರು : ದ.ಕ.ಜಿಲ್ಲೆಯಲ್ಲಿ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮರಳಿನ ದರ ನಿಗದಿಗೆ ಕಂಟ್ರೋಲ್ ರೂಂ ಸ್ಥಾಪಿಸಲಾಗುವುದು. ಅಧಿಕ ದರ ವಸೂಲಿ ಮಾಡಿದರೆ ಈ ಕಂಟ್ರೋಲ್ ರೂಂಗೆ ದೂರು ಸಲ್ಲಿಸಬಹುದಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಸಿಆರ್‌ಝಡ್ ವ್ಯಾಪ್ತಿಯ 76 ಕಡೆ ಮರಳುಗಾರಿಕೆಗೆ ದಕ್ಕೆಗಳನ್ನು ಗುರುತಿಸಲಾಗಿದೆ. ಆದರೆ, ಅಲ್ಲಿನ ಮರಳು ಬಳಕೆಗೆ ಹೆಚ್ಚು ಸೂಕ್ತವಲ್ಲದ ಕಾರಣ ನಾನ್ ಸಿಆರ್‌ಝಡ್ […]

ಮರಳುಗಾರಿಕೆ: ಡಿ.ಸಿ.ನೇತೃತ್ವದ ತಂಡ ದಾಳಿ

Tuesday, January 16th, 2018
mangaluru

ಮಂಗಳೂರು: ಸಿಆರ್‌ಝಡ್‌ ವ್ಯಾಪ್ತಿಯ ಕೆಲವು ಕಡೆ ಅಕ್ರಮದಕ್ಕೆ ನಿರ್ಮಿಸಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ನೇತೃತ್ವದ ತಂಡದವರು ಮೂಡುಶೆಡ್ಡೆ, ಪಡುಶೆಡ್ಡೆ, ಜಪ್ಪಿನ ಮೊಗರು ಸೇರಿದಂತೆ ಹಲವೆಡೆ ಹಠಾತ್‌ ಧಾಳಿ ನಡೆಸಿ 800ಕ್ಕೂ ಅಧಿಕ ಲೋಡ್‌ ಮರಳು, ಡ್ರೆಜ್ಜಿಂಗ್‌ ಮೆಷಿನ್‌, ಲಾರಿಯನ್ನು ವಶಪಡಿಸಿಕೊಂಡು ಮುಟ್ಟುಗೋಲು ಹಾಕಿದ್ದಾರೆ. ಮಂಗಳೂರು ತಾಲೂಕಿನ ಮರವೂರು ವೆಂಟೆಡ್‌ ಡ್ಯಾಂ ಪಕ್ಕದ ಪಡುಶೆಡ್ಡೆ, ಮೂಡುಶೆಡ್ಡೆ, ಮಂಜಲ್ಪಾದೆ ಸುತ್ತಮುತ್ತ ದಾಳಿ ನಡೆಸಿ 5 ಮರಳು ಧಕ್ಕೆ ಮುಟ್ಟುಗೊಲು ಹಾಕಲಾಗಿದ್ದು, 800 ಕ್ಕೂ […]

ನಿಯಮ ಉಲ್ಲಂಘಿಸಿ ಮರಳುಗಾರಿಕೆ ನಡೆಸಿದರೆ ಅಂತಹವರ ಪರವಾನಗಿಯನ್ನು ಅಮಾನತುಗೊಳಿಸಲಾಗುವುದು: ಜಗದೀಶ್

Monday, October 3rd, 2016
jagadeesh

ಮಂಗಳೂರು: ನಿಯಮ ಉಲ್ಲಂಘಿಸಿ ಮರಳುಗಾರಿಕೆ ನಡೆಸಿದರೆ ಅಂತಹವರ ಪರವಾನಗಿಯನ್ನು ಅಮಾನತುಗೊಳಿಸುವುದಾಗಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಮರಳುಗಾರಿಕೆಗೆ ಮತ್ತೆ ಅನುಮತಿ ನೀಡಿದ್ದಾರೆಂಬ ಶಂಕೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರ ನೀಡಿದ ಅವರು, ಪರವಾನಗಿ ನಿಯಮದಂತೆ ಮರಳುಗಾರಿಕೆ ನಡೆಸುವ ಬಗ್ಗೆ ಗುತ್ತಿಗೆದಾರರಿಗೆ ನೋಟಿಸ್ ನೀಡಿದ್ದೆ. ಆಗ ಕೆಲವು ಮಂದಿ ನಿಯಮದಲ್ಲಿ ವಿನಾಯ್ತಿ ನೀಡುವಂತೆ ಆಗ್ರಹಿಸಿದ್ದರು. ಆದರೆ ಅದಕ್ಕೆ ಒಪ್ಪದ ಕಾರಣ, ಎಲ್ಲ ಷರತ್ತುಗಳಿಗೆ ಬದ್ಧವಾಗಿರುತ್ತೇವೆ ಎಂದು ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಷರತ್ತು ಮೀರದಂತೆ ಮರಳುಗಾರಿಕೆ ನಡೆಸುವಂತೆ ಸೂಚಿಸಲಾಗಿದೆ ಎಂದು […]

ಸೆ.27ರಂದು ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ: ಅನಿಲ್ ದಾಸ್

Monday, September 26th, 2016
sand-mafia

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದ ಕಾರಣಕ್ಕೆ ಅಕ್ರಮ ಮರಳುಗಾರಿಕೆ ಮಿತಿ ಮೀರುತ್ತಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಸೆ.27ರಂದು 12ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ತಿಳಿಸಿದ್ದಾರೆ. ಕಟ್ಟಡ ನಿರ್ಮಿಸಲು ಜನರಿಗೆ ಮರಳು ಸಿಗುತ್ತಿಲ್ಲ. ಇದರಿಂದ ಬಡವರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅತ್ತ ಮರಳು ಮಾಫಿಯಾದ ವಿರುದ್ಧ ಜಿಲ್ಲಾಡಳಿತ ಯಾವುದೇ ಕ್ರಮ […]