ಜನಪರ ಮರಳು ನೀತಿಗಾಗಿ ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

Tuesday, October 24th, 2017
CITU

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಶಾಶ್ವತ ಹಾಗೂ ಜನಪರ ಮರಳು ನೀತಿಯನ್ನು ಜಾರಿಗೊಳಿಸಲು, ಅಕ್ರಮ ಮರಳು ಸಾಗಾಟವನ್ನು ತಡೆಗಟ್ಟಲು ಹಾಗೂ ಉಸ್ತುವಾರಿ ಸಚಿವರ ಸಮಕ್ಷಮದಲ್ಲಿ ಜಿಲ್ಲಾಡಳಿತ ಸಭೆ ಕರೆಯಬೇಕೆಂದು ಒತ್ತಾಯಿಸಿ ಸಿಐಟಿಯುಗೆ ಸಂಯೋಜಿತಗೊಂಡಿರುವ ಕಟ್ಟಡ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿಂದು  ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಿದರು. 300ಕ್ಕೂ ಮಿಕ್ಕಿದ ಕಟ್ಟಡ ಕಾರ್ಮಿಕರು, ಮರಳಿನ ಕೃತಕ ಅಭಾವ ಸೃಷ್ಟಿಸಿದ ಜಿಲ್ಲಾಡಳಿತಕ್ಕೆ ಧಿಕ್ಕಾರ, ಮರಳು ಮಾಫಿಯಾವನ್ನು ಮಟ್ಟ ಹಾಕಿರಿ, ಜನಪರ ಮರಳು ನೀತಿ ಜಾರಿಯಾಗಲಿ ಎಂಬಿತ್ಯಾದಿ ಘೋಷಣೆಗಳನ್ನು […]

ರಸ್ತೆಯಲ್ಲಿ ಮರಳು ಸಾಗಾಟ ನಡೆಸಲು ಬಿಡುವುದಿಲ್ಲ:ಅರುಣ್ ಕುಮಾರ್ ಪುತ್ತಿಲ

Monday, October 9th, 2017
arun kumar puttila

ಮಂಗಳೂರು : ಏಕರೂಪದ ಮರಳು ನೀತಿಯನ್ನು ಕೈಬಿಟ್ಟು ಕರಾವಳಿ ಭಾಗದ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿ, ನಾಳೆಯಿಂದಲೇ ಮರಳು ಸಾಗಾಟದ ಲಾರಿಗಳನ್ನು ರಸ್ತೆಯಲ್ಲಿ ಸಂಚರಿಸಲು ಬಿಡುವುದಿಲ್ಲ ಎಂದು ಪುತ್ತೂರಿನ ಸಾರ್ವಜನಿಕ ಹಿತರಕ್ಷಣಾ ಸಮಿತಿ ಮುಖಂಡ ಅರುಣ್ ಕುಮಾರ್ ಪುತ್ತಿಲ ರಾಜ್ಯಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮರಳು ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಜನವಿರೋಧಿ ನೀತಿ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ಇಲ್ಲಿನ ಉಪವಿಭಾಗಾಧಿಕಾರಿ […]