‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್?

Monday, September 30th, 2024
uliya

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು […]

ಜಿಲ್ಲಾಡಳಿತದ ನಿರ್ಲಕ್ಷ್ಯ ಮರವೂರು ಸೇತುವೆ ಹಾನಿಗೊಳಗಾಗಲು ಕಾರಣ : ಅಭಯಚಂದ್ರ ಜೈನ್

Tuesday, June 15th, 2021
Abhayachandra Jain

ಮಂಗಳೂರು : ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿರುವುದೇ  ಮರವೂರು ಸೇತುವೆಯ  ಪಿಲ್ಲರ್ ಗಳು ಕುಸಿಯಲು ಕಾರಣ  ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಸಮೀಪದಲ್ಲೇ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಜೈನ್ ಆರೋಪಿಸಿದರು. ಮರಳು ಮಾಫಿಯಾದಿಂದ  ಮರವೂರು ಸೇತುವೆಯ […]

ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ವರ್ಗಾವಣೆ ಭಾಗ್ಯವೇ?.. ದ.ಕ ಜಿಲ್ಲೆಯ ಪ್ರಜ್ಞಾವಂತರ ಆಕ್ರೋಶ!

Monday, January 22nd, 2018
sp-belthangady

ಮಂಗಳೂರು: ಜನವರಿ 12ರಂದು ಗೃಹಸಚಿವ ರಾಮಲಿಂಗಾರೆಡ್ಡಿ ಮಂಗಳೂರಿಗೆ ಭೇಟಿ ನೀಡಿದ್ದಾಗ ಪತ್ರಕರ್ತರು, `ಎಸ್ಪಿ ಸುಧೀರ್ ಕುಮಾರ್ ರೆಡ್ಡಿಯವರ ವರ್ಗಾವಣೆ ಇದೆಯೇ’ ಎಂದು ಕೇಳಿದ್ದರು. ಇಂತಹ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದರು ಸಚಿವರು. ಆದರೆ ಒಂದು ವಾರದಲ್ಲೇ ಎಸ್ಪಿ ವರ್ಗಾವಣೆಗೊಂಡಿದ್ದಾರೆ. ಈ ವರ್ಗಾವಣೆ ಹಿಂದೆ ಮರಳು ಮಾಫಿಯಾ ಕೈವಾಡವಿದೆ ಎಂಬ ಮಾತುಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಭೂಷಣ್ ಗುಲಾಬ್ ರಾವ್ ಬೊರಸೆ ಬಳಿಕ ಜಿಲ್ಲಾ ಎಸ್ಪಿಯಾಗಿ ಬಂದವರು ಸುಧೀರ್ ರೆಡ್ಡಿ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ […]

ಮರಳು ಮಾಫಿಯಾಗೆ ಸಿಲುಕಿ ಜಿಲ್ಲಾಡಳಿತ ಪರವಾನಗಿ ನೀಡುವುದನ್ನೇ ನಿಲ್ಲಿಸಿದೆ : ಸಂಜೀವ ಮಠಂದೂರು

Thursday, September 21st, 2017
Matandoor

ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಸಚಿವ ವಿನಯ ಕುಲಕರ್ಣಿ ಅವರ ಭಾವಚಿತ್ರವನ್ನು ಗಣಿ ಮಾಲೀಕರು ಪ್ರಚಾರ ಮಾಡುತ್ತಿದ್ದಾರೆ. ದ.ಕ. ಜಿಲ್ಲೆಯಲ್ಲಿ 6-7 ತಿಂಗಳಿಂದ ಮರಳುಗಾರಿಕೆಗೆ ಜಿಲ್ಲಾಡಳಿತ ಅನುಮತಿ ನೀಡದ ಪರಿಣಾಮ ಜಿಲ್ಲೆಯಲ್ಲಿ ಮರಳಿನ ಕೃತಕ ಅಭಾವ ಸೃಷ್ಟಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ದೂರಿದ್ದಾರೆ. ಮರಳಿಗೆ ಪರವಾನಿಗೆ ಕೋರಿ  ಕೋರಿ 1,364 ಅರ್ಜಿಗಳು ಸಲ್ಲಿಕೆಯಾಗಿದ್ದು, 406 ಅರ್ಜಿಗಳಿಗೆ ಪರವಾನಗಿ ನೀಡಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಆದರೆ ಈವರೆಗೆ ಮರಳುಗಾರಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯೇ ನಡೆಯುತ್ತಿಲ್ಲ […]

ಸೆ.27ರಂದು ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ: ಅನಿಲ್ ದಾಸ್

Monday, September 26th, 2016
sand-mafia

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದ ಕಾರಣಕ್ಕೆ ಅಕ್ರಮ ಮರಳುಗಾರಿಕೆ ಮಿತಿ ಮೀರುತ್ತಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಸೆ.27ರಂದು 12ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮರಳು ಸಾಗಾಟ ಲಾರಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ದಾಸ್ ತಿಳಿಸಿದ್ದಾರೆ. ಕಟ್ಟಡ ನಿರ್ಮಿಸಲು ಜನರಿಗೆ ಮರಳು ಸಿಗುತ್ತಿಲ್ಲ. ಇದರಿಂದ ಬಡವರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅತ್ತ ಮರಳು ಮಾಫಿಯಾದ ವಿರುದ್ಧ ಜಿಲ್ಲಾಡಳಿತ ಯಾವುದೇ ಕ್ರಮ […]

ಕಾರ್ಯಕರ್ತರಿಗೆ ಅಭಿನಂದನೆ – ಕೋಟ ಶ್ರೀನಿವಾಸ ಪೂಜಾರಿ

Wednesday, December 30th, 2015
kota

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಗನ್ನಾಥರಾವ್ ಜೋಷಿ ಸೌಧದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದನೆ ಸಲ್ಲಿಸಿದರು. ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಪ್ರಭಾರಿ ಲಾಲಾಜಿ ಮೆಂಡನ್, ವಿಧಾನ ಪರಿಷತ್ ಸದಸ್ಯ ಕ್ಯಾ|ಗಣೇಶ್ ಕಾರ್ಣಿಕ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಮಾಜಿ ವಿ.ಪ.ಸದಸ್ಯ ಕೆ.ಮೋನಪ್ಪ […]