ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ

Sunday, July 25th, 2021
BS Yediyurappa

ಬೆಳಗಾವಿ : ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ (ಜು.25) ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ […]

ಮಳೆಹಾನಿ ಸಂತ್ರಸ್ತೆಯಿಂದ ಹಣ ಕಸಿದುಕೊಂಡ ಆರೋಪ : ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

Wednesday, February 26th, 2020
protest

ಮಡಿಕೇರಿ : ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡ ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಂತ್ರಸ್ತ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಪರಿಹಾರದ ಹಣದಲ್ಲಿ ಸುಮಾರು 40 ಸಾವಿರ ರೂ.ಗಳನ್ನು ನಗರಸಭಾ ಸಿಬ್ಬಂದಿಯೊಬ್ಬರು ಬೆದರಿಕೆವೊಡ್ಡಿ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರಸಭಾ ಕಚೇರಿ ಎದುರು ದಿಢೀರ್ ಧರಣಿ ಕುಳಿತ ವೇದಿಕೆಯ ಪ್ರಮುಖರು ಬಾಕಿ ಉಳಿಸಿಕೊಂಡಿರುವ ಪರಿಹಾರದ ಹಣವನ್ನು ತಕ್ಷಣ ನೀಡಬೇಕು ಮತ್ತು ತಪ್ಪಿತಸ್ತ ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು […]

ಮಳೆಹಾನಿ ಪರಿಹಾರದ ಹಣ ಖಾಸಗಿ ಬ್ಯಾಂಕ್ ಖಾತೆಗೆ : ತಪ್ಪೆಸಗಿದ ಇಇ ಶ್ರೀಕಂಠಯ್ಯ ಅಮಾನತು

Thursday, November 7th, 2019
sri-kanta

ಮಡಿಕೇರಿ : ಪ್ರಕೃತಿ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾದ 21 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರು ಖಾಸಗಿ ಬ್ಯಾಂಕ್ ಖಾತೆಯಲ್ಲಿಟ್ಟಿರುವ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪ ಸಾಬೀತಾಗಿದೆ. ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರುಗಳು ಇಂಜಿನಿಯರ್‌ನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶ್ರೀಕಂಠಯ್ಯ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ […]

ಮಳೆಹಾನಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ : ಕಾವಲು ಪಡೆಯಂತಿರುವ ಪಶ್ಚಿಮ ಘಟ್ಟ ನಾಶವಾದರೆ ವಿನಾಶ; ನ್ಯಾಯಾಧೀಶೆ ನೂರುನ್ನಿಸಾ ಆತಂಕ

Tuesday, November 5th, 2019
madikeri

ಮಡಿಕೇರಿ : ಮಾನವನ ರಕ್ಷಣೆಗೆ ಕಾವಲು ಪಡೆಯಂತಿರುವ ಪಶ್ಚಿಮಘಟ್ಟ ಪ್ರದೇಶಗಳು ನಾಶವಾದ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ ಎಂದು ಅಭಿಪ್ರಾಯಪಟ್ಟಿರುವ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸಾ, ಬೆಟ್ಟಗುಡ್ಡಗಳ ಮೇಲೆ ಕಟ್ಟಡ ನಿರ್ಮಿಸುವ ಸ್ವಯಂಕೃತ ಅಪರಾಧ ನಿಲ್ಲಬೇಕೆಂದು ಹೇಳಿದ್ದಾರೆ. ನಗರದ ತ್ಯಾಗರಾಜ ಕಾಲೋನಿಯ ಕಾರುಣ್ಯ ಮೊಹಲ್ಲಾದಲ್ಲಿ ಜಮಾಅತೇ ಇಸ್ಲಾಮಿ ಹಿಂದ್‌ನ ಸಮಾಜ ಸೇವಾ ವಿಭಾಗವಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಎಂಟು ಮಳೆಹಾನಿ ಸಂತ್ರಸ್ತ ಕುಟುಂಬಗಳಿಗೆ ಮನೆಗಳನ್ನು ಹಸ್ತಾಂತರಿಸುವ […]