ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಎಚ್ಚರಿಕೆ
Saturday, February 10th, 2018ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ. ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ತಮ್ಮ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್‌ಗಳನ್ನು ಹಾಕಲು ಸೂಚನೆ ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಅಂತಹ […]