ಬಾಪೂಜಿಯವರ 142ನೇ ಜನ್ಮದಿನ

Sunday, October 2nd, 2011
Mahatma Gandhi

ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 142ನೇ ಜನ್ಮದಿನವನ್ನು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಅಕ್ಟೋಬರ್ 2 ರಂದು ಆಚರಿಸಲಾಗುತ್ತಿದೆ. ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನವದಹಲಿಯಲ್ಲಿರುವ ಗಾಂಧಿ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋನಿಯಾ ಗಾಂಧಿ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಬಿಜೆಪಿ ಹಿರಿಯ ನಾಯಕ ಎಲ್. ಕೆ. ಆಡ್ವಾಣಿ, ದಹೆಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಹಿತ ಹಲವು ಗಣ್ಯರು ಸಹ ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಪುಷ್ಪಾರ್ಪಣೆ ಸಲ್ಲಿಸಿ ನಮನ ಸಲ್ಲಿಸಿದರು. […]