ಹುಬ್ಬಳ್ಳಿ : ಕೋರೊನಾ ನಿಯಂತ್ರಣಕ್ಕೆ ಸ್ವಯಂ ಸೇವಕರ ನೇಮಕಾತಿ

Monday, July 20th, 2020
corona warriors

ಹುಬ್ಬಳ್ಳಿ : ಕೊರೊನಾ ಮಹಾಮಾರಿ ತಡೆಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ. ನಗರದ ಯುವ ಹಾಗೂ ಉತ್ಸಾಹಿ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಿದೆ. ಸೋಂಕು ತಡೆ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸಲಾಗುತ್ತಿದೆ. ಪಾಲಿಕೆಯ ಎಲ್ಲ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು […]

ದಕ್ಷಿಣ ಕನ್ನಡ : 300 ಕೋ.ರೂಪಾಯಿ ಅಧಿಕ ನಷ್ಟ ಸಂಭವಿಸಿದೆ

Wednesday, August 14th, 2019
DK-rain-and-flood

ಮಂಗಳೂರು : ಹಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ 300 ಕೋ.ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಇದು ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಅಧಿಕ ಎನ್ನಲಾಗಿದೆ. ಬೆಳ್ತಂಗಡಿ-ಬಂಟ್ವಾಳದಲ್ಲಿ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಸದ್ಯ ಜಿಲ್ಲಾಡಳಿತವು ವಿವಿಧ ಇಲಾಖೆಗಳಿಂದ ನಷ್ಟದ ವರದಿ ಸಿದ್ಧಪಡಿಸುತ್ತಿದೆ. ಅದರ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು 275 ಕೋ.ರೂ.ಗಳಷ್ಟು (ಕೃಷಿನಾಶ ಬಿಟ್ಟು) ನಷ್ಟ ಸಂಭವಿಸಿದೆ. ಅಂತಿಮ ನಷ್ಟದ ಅಂದಾಜು ಇನ್ನಷ್ಟೇ ಸಿಗಬೇಕಿದೆ. ಕಳೆದ ವರ್ಷ ಮಳೆಗೆ 238 […]

ಮಹಾನಗರ ಪಾಲಿಕೆಯ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ..!

Saturday, June 30th, 2018
mangaluru

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿವೆ. ಪಾಲಿಕೆ ಚುನಾವಣೆ ಸಮೀಪಿಸುತ್ತಿರುವಂತೆ ನಗರಾಭಿವೃದ್ಧಿ ಇಲಾಖೆಯು ವಾರ್ಡ್ ವಾರ್ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ಈ ಮೂಲಕ ಮುಂದಿನ ಮಾರ್ಚ್ನಲ್ಲಿ ನಡೆಯುವ ಪಾಲಿಕೆ ಚುನಾವಣೆಗೆ ರಾಜಕೀಯ ಲೆಕ್ಕಾಚಾರ ಆರಂಭಗೊಂಡಿದೆ. ಇದರ ನಡುವೆ ಕರಡು ಮೀಸಲಾತಿ ಪಟ್ಟಿ ಹಾಲಿ ಸದಸ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯು ಒಟ್ಟು 60 ವಾರ್ಡ್ಗಳನ್ನು ಹೊಂದಿದ್ದು, ಪ್ರತಿ 5 ವರ್ಷಗಳಿಗೊಮ್ಮೆ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುತ್ತಿದೆ. ಅಂತೆಯೇ […]

ಸಹಜ ಸ್ಥಿತಿಗೆ ಮರಳಿದ ಮಹಾನಗರ: ಕರ್ಫ್ಯೂ ಹಿಂಪಡೆದ ಪೊಲೀಸರು

Wednesday, September 14th, 2016
bangalore-normalcy

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ನಡೆದ ಹಿಂಸಾಚಾರದ ಪರಿಣಾಮ ಕರ್ಫ್ಯೂ ಹೇರಲಾಗಿತ್ತು. ಆದ್ರೆ ಮಹಾನಗರ ಇಂದು ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಕರ್ಫ್ಯೂವನ್ನ ಪೊಲೀಸರು ಹಿಂಪಡೆದಿದ್ದಾರೆ. ಇದರ ಜೊತೆಗೆ ಬೆಳಗ್ಗೆ 9 ಗಂಟೆಯಿಂದ ಕಂಡಲ್ಲಿ ಗುಂಡು ಆದೇಶವನ್ನೂ ಸಹ ವಾಪಸ್ ಪಡೆದಿದ್ದಾರೆ. ನಗರದ ಹದಿನಾರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ವಿಧಿಸಲಾಗಿತ್ತು, ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಕರ್ಫ್ಯೂವನ್ನು ಪೊಲೀಸರು ಹಿಂಪಡೆದಿದ್ದಾರೆ. ಆದರೆ ಇನ್ನೂ ನಗರದಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು […]