ಫಲಾನುಭವಿಗಳಿಗೆ ರೂ 7,48,531/- ಮೊತ್ತದ ಚೆಕ್ ವಿತರಿಸಿದ ಮೇಯರ್

Friday, July 12th, 2024
mayor-check

ಮಂಗಳೂರು : ಮಹಾನಗರಪಾಲಿಕೆಯ ಶೇ 24.10℅, 7.25% ಮತ್ತು 5% ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 19 ಫಲಾನುಭವಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ರೂ 7,48,531/- ಮೊತ್ತದ ಚೆಕ್ಕನ್ನು ವಿತರಿಸಲಾಯಿತು. ಪಾಲಿಕೆಯ ಮೇಯರ್ ರವರ ಕೊಠಡಿಯಲ್ಲಿ ಆಯೋಜಿಸಲಾದ ಈ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಷಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಮನೆ ದುರಸ್ತಿ, ಮನೆ ನಿಮಾ೯ಣ, ತಾಳಿಭಾಗ್ಯ ಮುಂತಾದ ಸವಲತ್ತು ಪಡೆಯಲು ಸಹಾಯಧನ, ಶೇ 7.25 ರ ನಿಧಿಯಡಿ ಹಿಂದುಳಿದ ವಗ೯ದ […]

ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ – ದಿವಾಕರ್ ಪಾಂಡೇಶ್ವರ್ 

Wednesday, October 7th, 2020
Paura-Karmika-Dinacharane

ಮಂಗಳೂರು : ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು. ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ ಪ್ರಾಮಾಣಿಕ ಪ್ರಯತ್ನ […]

ಮಂಗಳೂರಿನ ಮನೆಗಳಲ್ಲಿ ಕೆಂಪು ಬಣ್ಣದ ಮಣ್ಣು ನೀರು, ಆತಂಕ

Monday, June 4th, 2018
mangaluru

ಮಂಗಳೂರು: ನಗರದ ಮನೆಗಳಿಗೆ ಮೂರು ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಮನೆಗಳ ನಲ್ಲಿ ಮೂಲಕ ಬರುವ ಕುಡಿಯುವ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ತುಂಬೆ ವೆಂಟೆಡ್ ಡ್ಯಾಮ್ ನಿಂದ ಮಂಗಳೂರು ನಗರಕ್ಕೆ ನೀರು ಪೂರೈಕೆಯಾಗುತ್ತಿದ್ದು, ಕಲುಷಿತಗೊಂಡ ಕೆಂಪು ಬಣ್ಣದ ನೀರು ಮನೆಗಳ ನಲ್ಲಿಯಲ್ಲಿ ಬರುತ್ತಿದೆ. ನಗರದ ಕೆಲವೆಡೆ ನೀರು ಕುಡಿಯಲು ಸಾದ್ಯವಾಗದೆ, ದುರ್ವಾವಾಸನೆಯಿಂದ ಕೂಡಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಕಳೆದ ಬುಧವಾರದಿಂದ ಈ ರೀತಿಯ ನೀರು ಸರಬರಾಜು […]

ನೇತ್ರಾವತಿ ಸೇತುವೆಯಿಂದ ನದಿತೀರದಲ್ಲಿ ಎನ್.ಎಂ.ಪಿ.ಟಿ ವರೆಗೆ ರಸ್ತೆ : ಶಾಸಕ ಜೆ.ಆರ್.ಲೋಬೊ

Thursday, December 21st, 2017
j-r-lobo

ಮಂಗಳೂರು: ನೇತ್ರಾವತಿ ಸೇತುವೆಯಿಂದ ನದಿ ಬದಿಯಲ್ಲಿ ಮಂಗಳೂರು ಹಳೆ ಬಂದರು, ಸುಲ್ತಾನ್ ಬತ್ತೇರಿ, ತಣ್ಣೀರುಬಾವಿಯಾಗಿ ನವಮಂಗಳೂರು ಬಂದರಿಗೆ ಪರ್ಯಾಯ ಹೆದ್ದಾರಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಾ ಈ ಯೋಜನೆಗೆ ಸುಮಾರು ೧೦೦೦ ಕೋಟಿ ರೂಪಾಯಿ ಹೂಡಿಕೆಯಾಗಲಿದೆ ಎಂದರು. ಸುಲ್ತಾನ್ ಬತ್ತೇರಿಯಲ್ಲಿ ಸೇತುವೆಯನ್ನು ನಿರ್ಮಿಸಿ ತೂಗುಸೇತುವೆ ನಿರ್ಮಾಣವನ್ನು ಕೈಬಿಡಲು ಉದ್ದೇಶಿಸಲಾಗಿದೆ. ಸೇತುವೆ ನಿರ್ಮಾಣವಾದರೆ ತೂಗುಸೇತುವೆಯ ಅಗತ್ಯವಿರುವುದಿಲ್ಲ ಎಂದ ಅವರು ಈ ರಸ್ತೆಯನ್ನು ಬಹುಪಯೋಗಿಯ ರಸ್ತೆಯನ್ನು […]

ಮಹಾನಗರಪಾಲಿಕೆ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

Saturday, March 18th, 2017
Rekha Shetty

ಮಂಗಳೂರು:- ಮಂಗಳೂರು ಮಹಾನಗರಪಾಲಿಕೆಯಲ್ಲಿ ವಲಯ ಆಯುಕ್ತರಾಗಿ ರೇಖಾ ಜೆ. ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇವರು ನಗರಪಾಲಿಕೆಯ ವಲಯ-1 ಸುರತ್ಕಲ್ ವಲಯದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಇವರು ಈ ಹಿಂದೆ ಪುತ್ತೂರು ಹಾಗೂ ಉಳ್ಳಾಲ ನಗರಸಭೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ರಸ್ತೆಯನ್ನೆ ನುಂಗಿದ ಪ್ಲಾಮ ಬಿಲ್ಡರ್ ಕಟ್ಟಡ, ಶಾಸಕ, ಅಧಿಕಾರಿಗಳಿಗೆ ಕ್ಯಾರೇ ಅನ್ನದ ಮಾಲೀಕ

Wednesday, September 3rd, 2014
Plama

ಮಂಗಳೂರು : ನಗರದಲ್ಲಿ ಕಟ್ಟಡ ನಿಯಮಾವಳಿಗಳ ಉಲ್ಲಂಘನೆ ಸರ್ವೇ ಸಮಾನ್ಯವಾಗಿದ್ದರೂ, ಈಗ ಸಾರ್ಜನಿಕರ ರಸ್ತೆಯವನ್ನೇ ಆಕ್ರಮಿಸಿ ಅಪಾರ್ಟ್ ಮೆಂಟ್ ನಿರ್ಮಿಸುತ್ತಿರುವ ಪ್ರಕರಣ ಫಳ್ನೀರ್ ಕಾಪ್ರಿಗುಡ್ಡದಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯ ಶಾಸಕ ಮತ್ತು ಮಹಾನಗರಪಾಲಿಕೆ ನಗರ ಯೋಜನೆ ಅಧಿಕಾರಿಗಳ ಸೂಚನೆಗೂ ಕ್ಯಾರೇ ಅನ್ನದ ಬಿಲ್ಡರ್, ಸರಕಾರಕ್ಕೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಬೆದರಿಕೆಯೊಡ್ಡಿರುವುದು ಮಂಗಳೂರು ನಗರ ಪಾಲಿಕೆಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಯಾವ ಕಾನೂನು ಪಾಲನೆ ಆಗುತ್ತಿಲ್ಲ ಎಂಬುದಕ್ಕೆ ನಿದರ್ಶನವಾಗಿದೆ. ಫಳ್ನೀರಿನ ಕಾಪ್ರಿಗುಡ್ಡೆಯಲ್ಲಿ ನಿರ್ಮಾಣವಾಗುತ್ತಿರುವ ಪ್ಲಾಮ ಗಾರ್ಡೇನಿಯ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ […]

ನಗರದ ಕದ್ರಿ ಪಾರ್ಕ್ ನಲ್ಲಿ ಎರಡು ದಿನಗಳ ಕುಡ್ಲ ಕಲಾ ಮೇಳಕ್ಕೆ ಚಾಲನೆ

Saturday, December 14th, 2013
Kudla kala Mela

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ಕರಾವಳಿ ಚಿತ್ರಕಲಾ ಪರಿಷತ್ ಆಶ್ರಯದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಎರಡು ದಿನಗಳ ಕುಡ್ಲ ಕಲಾ ಮೇಳಕ್ಕೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಡಿ14. ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಆಯುಕ್ತ ರು ಕಲಾವಿದ ಮಾತಿನಲ್ಲಿ ವ್ಯಕ್ತ ಪಡಿಸಲು ಸಾಧ್ಯವಾಗದೇ ಇರುವುದನ್ನು ತನ್ನ ಕಲೆಯ ಮೂಲಕ ವ್ಯಕ್ತ ಪಡಿಸುತ್ತಾನೆ. ಮನುಷ್ಯ ನೆಮ್ಮದಿಯನ್ನು ಕಾಣಲು ಕಲಾ ಪ್ರಕಾರಗಳನ್ನು ತಿಳಿಯಬೇಕು. ಇಂದಿನ […]

ಕದ್ರಿ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ.

Tuesday, October 1st, 2013
park-lobo

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಡಾ.ಕೆ.ಆರ್.ಶೆಟ್ಟಿ ಹಾಗೂ ಇತರರಿಂದ ನಗರದ ಕದ್ರಿ ಪಾರ್ಕ್ ನ ಅಭಿವೃದ್ದಿ ಕಾರ್ಯಕ್ರಮಗಳು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸುವಂತೆ ನೀಡಿರುವ ಮನವಿಗೆ ಸ್ಪಂದಿಸಿದ ಶಾಸಕ ಜೆ.ಆರ್.ಲೋಬೊ ಪಾರ್ಕ್ ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜತೆ ಪಾರ್ಕ್ ಗೆ ತೆರಳಿ ಅಲ್ಲಿನ ವ್ಯವಸ್ಥೆಗಳ ಬಗೆಗೆ ಹಾಗೂ ಅಭಿವೃದ್ದಿ ಕಾರ್ಯಗಳ ಬಗೆಗೆ ಮಂಗಳವಾರ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಡಾ.ಕೆ.ಆರ್.ಶೆಟ್ಟಿ ಇತರ ಸ್ನೇಹಿತರೊಂದಿಗೆ ಸೇರಿಕೊಂಡು ಕದ್ರಿ ಪಾರ್ಕ್ ನ ಅಭಿವೃದ್ದಿ ಕಾರ್ಯಗಳ ಬಗೆಗೆ […]

ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್ -ರಮಾನಾಥ ರೈ

Tuesday, August 27th, 2013
ramanathan

ಮಂಗಳೂರು : ಸಾಮಾಜಿಕ ಭದ್ರತಾ ಯೊಜನೆಗಳಲ್ಲಿ ಮಾಸಾಶನ ಪಡೆಯುತ್ತಿರುವ ನಿರ್ಗತಿಕರು, ಬಡವರಿಗೆ ಕ್ರಮಬದ್ಧವಾಗಿ ಪ್ರತೀ ತಿಂಗಳು ಮಾಸಾಶನ-ಪಿಂಚಣಿ ದೊರಕಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರ ಎಲ್ಲಾ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಗಳನ್ನು ನಡೆಸಲು ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರರದ ಸಾಧನೆಗಳನ್ನು ಬಿಂಬಿಸುವ  “ನೂರು […]

ಮಹಾನಗರಪಾಲಿಕೆ ಕಾಮಗಾರಿ-ಗುತ್ತಿಗೆದಾರರಿಗೆ ಕಾಲಮಿತಿಯಲ್ಲಿ ಬಿಲ್ ಪಾವತಿಸಿ-ಶ್ರೀ ಜೆ.ಕೃಷ್ಣ ಪಾಲೇಮಾರ್

Saturday, April 23rd, 2011
ಜೆ.ಕೃಷ್ಣ ಪಾಲೇಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಮೂಲಭೂತ ಸೌಲಭ್ಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾನ್ಯ ಮುಖ್ಯ ಮಂತ್ರಿಗಳು ನೀಡಿರುವ ವಿಶೇಷ ಅನುದಾನದಡಿಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಂಡ   20 ದಿನಗಳೊಳಗೆ ಬಿಲ್ಲಿನ ಹಣ ಪಾವತಿ ಮಾಡುವಂತೆ ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ,ಮೀನುಗಾರಿಕೆ,ಪರಿಸರ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ರವರು ಸೂಚಿಸಿದ್ದಾರೆ. ಅವರು  ನಿನ್ನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದರು. […]