ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

Friday, September 29th, 2023
ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆ

ಮುಲ್ಕಿ: ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಯುವಕನ ವಯಸ್ಸು ಸುಮಾರು 19 ರಿಂದ 20 ವರ್ಷದ ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ […]

ಸದ್ಯದಲ್ಲೇ ಸೆಟ್ ಏರಲಿರುವ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಜೀವನ ಕಥೆಯ ಸಿನಿಮಾ

Friday, December 4th, 2020
Muttappa Rai

ಪುತ್ತೂರು : ಡೆಡ್ಲಿ ಸೋಮ ಚಿತ್ರದ ನಿರ್ದೇಶಕ ರವಿ ಶ್ರೀವತ್ಸ ಮುತ್ತಪ್ಪ ರೈ ಸಿನಿಮಾ ಆರಂಭಿಸಿದ್ದಾರೆ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಜೀವನದ ಕಥೆಗಳನ್ನು ಒಳಗೊಂಡ ಬಯೋ ಪಿಕ್ ‘ಎಂ ಆರ್” ಸಿನಿಮಾ ಸದ್ಯದಲ್ಲೇ ಸೆಟ್ ಏರಲಿದೆ. ಡೆಡ್ಲಿ  ಸಿನಿಮಾ ಚಿತ್ರಿಕರಣ ಆರಂಭಕ್ಕೆ ಪೂರ್ವಭಾವಿಯಾಗಿ ಸಿನಿಮಾದ ಯಶಸ್ಸಿಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಚಿತ್ರ ನಿರ್ಮಾಣದ ಬಳಿಕ ಶ್ರೀ ದೇವಾಲಯದಲ್ಲಿ ಮಹಾಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ಸಲ್ಲಿಸುವ ಸಂಕಲ್ಪವನ್ನು ಚಿತ್ರ […]

ದೇವರಲ್ಲಿ ದೃಢ ಭಕ್ತಿ ಮಾಡಿದರೆ ಅವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ : ವಿಧುಶೇಖರ ಭಾರತೀ ಸ್ವಾಮೀಜಿ

Friday, June 21st, 2019
Vidhushekara-Swamiji

ವೇಣೂರು  : ದೇವನೊಬ್ಬ ನಾಮ ಹಲವು ಎಂಬಂತೆ ನಾವು ದೇವರನ್ನು ವಿವಿಧ ಹೆಸರಿನಲ್ಲಿ, ಅನೇಕ ರೂಪಗಳಲ್ಲಿ ಆರಾಧನೆ ಮಾಡುತ್ತೇವೆ. ಧರ್ಮದ ಅನುಷ್ಠಾನದೊಂದಿಗೆ ದೇವರಲ್ಲಿ ದೃಢ ಭಕ್ತಿ ಮಾಡಿದರೆ ಅವರ ಅನುಗ್ರಹಕ್ಕೆ ನಾವು ಪಾತ್ರರಾಗುತ್ತೇವೆ. ನಮಗೆ ಯಶಸ್ಸು, ಸುಖ, ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶೃಂಗೇರಿಯ ಶ್ರೀ ಶಾರದಾ ಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಅವರು ಗುರುವಾರ ವೇಣೂರಿನಲ್ಲಿ ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿ ಆಶೀರ್ವದಿಸಿದರು. […]

ಕರಿಂಜೆ ಕ್ಷೇತ್ರದಲ್ಲಿ ನಡೆದ ಹಿಂದೂ ಧರ್ಮಜಗೃತಿ ಸಭೆ

Monday, October 29th, 2018
hindu

ಮೂಡಬಿದ್ರೆ : 28 ಅಕ್ಟೋಬರ್ ಕರಿಂಜೆ ಶ್ರೀ ಲಕ್ಮೀಸತ್ಯನಾರಾಯಣ ವೀರಾಂಜನೇಯ ದೇವಸ್ಥಾನ ಸಭಾಗೃಹ ದಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪೂಜ್ಯ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಿಂದೂ ಧರ್ಮಜಾಗೃತಿ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ವ್ಯಾಸ ಪೀಠದಲ್ಲಿ ನಾಳದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರ ಅಸ್ರಣ್ಣ , ಹಿಂದೂ ಜನಜಾಗೃತಿ ಸಮಿತಿಯ ಶ್ರೀ ವಿಜಯ ಕುಮಾರ , ಸನಾತನ ಸಂಸ್ಥೆಯ ಡಾ. ಸೌ . ಶ್ರೀಕಲಾ ಜೋಷಿ ಉಪಸ್ಥಿತರಿದ್ದರು. ಸಭೆಯನ್ನು […]

ಪ್ರಥಮ ಬಾರಿಗೆ ತುಳುನಾಡಿನ ದೈವಾರಾಧಕರ ಸಮಾವೇಶ

Monday, November 28th, 2016
Mahalingeshwara temple

ಪುತ್ತೂರು: ಪ್ರಥಮ ಬಾರಿಗೆ ತುಳುನಾಡಿನ ದೈವಾರಾಧಕರ ಸಮಾವೇಶ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ, ದೈವಾರಾಧನೆ ಅಂದ್ರೆ ಸತ್ಯದ ಆರಾಧನೆ. ಹಿಂದೆ ದೈವ ಎಂಬ ಹೆಸರು ಇರಲಿಲ್ಲ, ಸತ್ಯ ಎಂದೇ ಕರೆಯುತ್ತಿದ್ದರು. ಈ ಆರಾಧನೆಯಲ್ಲಿ ಎಲ್ಲಾ ಜಾತಿಯವರಿಗೆ ಜವಾಬ್ದಾರಿ ಹಂಚಿಕೆಯಾಗಿದೆ. ಯಾವ ಜಾತಿಯವವರು ಇಲ್ಲದಿದ್ದರೂ ನೇಮ ಆಗುವುದಿಲ್ಲ. ಇದು ಇಲ್ಲಿ ಯಾರೂ ದೊಡ್ಡವರಲ್ಲ, ಎಲ್ಲರೂ ಸಮಾನರು ಎಂಬುದನ್ನು ಸೂಚಿಸುತ್ತದೆ ಎಂದರು. […]

ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Friday, February 5th, 2016
Chigurupade Temple

ಮಂಜೇಶ್ವರ : ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆಬ್ರವರಿ 11ನೇ ಗುರುವಾರ ವಿವಿಧ ವೈದಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಬೆಳಿಗ್ಗೆ ಗಂಟೆ 7ರಿಂದ ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶರುದ್ರಾಭಿಷೇಕ, ಮಧ್ಯಾಹ್ನ12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ಗಂಟೆ ೮ಕ್ಕೆ ರಂಗಪೂಜೆ ,9ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ. […]

ಕುಂಜತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ

Wednesday, January 13th, 2016
yeddyurappa Kunjathuru

ಮಂಜೇಶ್ವರ : ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭೇಟಿ ನೀಡಿದರು. ಈ ಪ್ರಯುಕ್ತ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಯುವ ಜನಾಂಗ ಕಠಿಣ ಪರಿಶ್ರಮಿಗಳಾಗಿ ಸುದೃಢ ದೇಶವನ್ನು ಕಟ್ಟುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಅಭೀವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ,ದಾಖಲೆಯ ಅವಧಿಯಲ್ಲಿ ಶ್ರೀ ಕ್ಷೇತ್ರದ ಪುನರ್‌ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದುದರ ಬಗ್ಗೆ ಸಂತಸ ಸೂಚಿಸಿದರು. ಉಡುಪಿ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ […]

ಸಮಗ್ರ ಅಧ್ಯಯನ ನಡೆಸದೆ ‘ಎತ್ತಿನಹೊಳೆ’ ಅನುಷ್ಠಾನ ಸರಿಯಲ್ಲ: ಯಡಿಯೂರಪ್ಪ

Wednesday, March 5th, 2014
Yeddyurappa

ಪುತ್ತೂರು: ಎತ್ತಿನಹೊಳೆ ಯೋಜನೆ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸದೆ ಯೋಜನೆ ಅನುಷ್ಠಾನಗೊಳಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎತ್ತಿನಹೊಳೆ ಯೋಜನೆಯನ್ನು ಸಮಗ್ರ ರಾಜ್ಯವನ್ನು ಕಣ್ಮುಂದೆ ಇಟ್ಟುಕೊಂಡು ರೂಪಿಸಬೇಕಾಗಿದೆ. ಅನುಷ್ಠಾನದ ಬಗ್ಗೆ ಕರಾವಳಿ ಹಾಗೂ ಬಯಲುಸೀಮೆ ಜಿಲ್ಲೆಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಚಿಂತನೆ ನಡೆಸುವುದು ಅಗತ್ಯವಾಗಿದೆ ಎಂದ ಅವರು ಬೆಂಗಳೂರು, ಚಿಕ್ಕಬಳ್ಳಾಪುರ, […]