ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಮಹಿಳೆ, ಗಂಡ ಪಾರು
Tuesday, December 20th, 2022
ಮಂಗಳೂರು : ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ. ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಕಾಮಗಾರಿಯ ಹಿನ್ನೆಲೆಯಲ್ಲಿ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ಇದ್ದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಜನನಿಬಿಡ ಪ್ರದೇಶದಲ್ಲಿ ಗುಂಡಿ ತೋಡಲಾಗಿದ್ದು, ಕಾಮಗಾರಿ ಪೂರ್ತಿಗೊಳಿಸದೆ ಬಿಟ್ಟ ಕಾರಣ ಈ ದುರಂತ ಸಂಭವಿಸಿದೆ.