Blog Archive

ಜಾತ್ರೆ ಗೆ ಬಂದಿದ್ದ ಇಬ್ಬರು ಮಹಿಳೆಯರು ನಾಪತ್ತೆ

Tuesday, February 16th, 2021
mandarthi

ಬ್ರಹ್ಮಾವರ : ಇಬ್ಬರು ಮಹಿಳೆಯರು ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಾಪತ್ತೆಯಾಗಿರುವ ಘಟನೆ ಫೆ.14ರಂದು ನಡೆದಿದೆ. ನಾಪತ್ತೆಯಾದವರನ್ನು ಬೆಳಗಾಂ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಡು ಅಪ್ಪಾಸಾಬ ದಾನವಾಡೆ ಎಂಬವರ ಪತ್ನಿ ಬ್ರಹ್ಮಾವರ ಬೈಕಾಡಿ ಮೂಲದ ಜ್ಯೋತಿ(30) ಹಾಗೂ ಅವರ ತಮ್ಮನ ಪತ್ನಿ ಪ್ರಿಯಾಂಕ(24) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಮೊಬೈಲ್ ವೀಡಿಯೋ ಮಾಡಿದ ಆರೋಪಿ ಬಂಧನ

Saturday, February 13th, 2021
muneer

ಮಂಗಳೂರು  : ಮಹಿಳೆ ಸ್ನಾನ ಮಾಡುತ್ತಿದ್ದ  ದೃಶ್ಯ  ಮೊಬೈಲ್ ಮೂಲಕ ವೀಡಿಯೋ ನಡೆಸಿದ್ದ ಆರೋಪಿಯನ್ನು ಉಳ್ಳಾಲದ ಪೊಲೀಸರ ತಂಡ ಶುಕ್ರವಾರ ಬಂಧಿಸಿದೆ. ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜೊತೆಗಿದ್ದ ಮಹಿಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದ. ಇದನ್ನು ಗಮನಿಸಿದ ಮಹಿಳೆ ಕೂಡಲೇ ಹೊರಬಂದಾಗ, ಆರೋಪಿ ಮುನೀರ್ ತಲೆಮರೆಸಿಕೊಂಡಿದ್ದನು. ಈ ಕುರಿತು ಮಹಿಳೆ ಜ.20 ರಂದು […]

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ, ಐವರು ವಶಕ್ಕೆ

Friday, October 9th, 2020
Kusuma

ಮಂಗಳೂರು : ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮಂಗಳೂರು ದಕ್ಷಿಣ ಎಸಿಪಿ ನೇತೃತ್ವದ ಪೊಲೀಸ್ ತಂಡ ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಕಣಂತೂರು ಬೆಳ್ಳೇರಿ ಸಮೀಪ  ಸೆ. 25ರಂದು 50 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗ್ಯಾಸ್ ಸ್ಟೌವ್ ತೆರೆದ ಸ್ಥಿತಿಯಲ್ಲಿ ಮತ್ತು ಮನೆಯ ಕರ್ಟೈನ್ಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು, ಪ್ರಕರಣ ತಿರುಚುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ಪೊಲೀಸರ ತನಿಖೆಗೆ […]

ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ, ಓರ್ವ ಮಹಿಳೆ ಸಹಿತ ನಾಲ್ವರು ಆರೋಪಿಗಳ ಬಂಧನ

Thursday, September 24th, 2020
Vitla Accuced

ಬಂಟ್ವಾಳ: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ. ಮಹಮ್ಮದ್ ಯಾನೆ ಐಟಿ ಮಮ್ಮು (41) ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ (44)  ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವು ಮಾಡಿದ ಚಿನ್ನ, ಆಕ್ಟೀವ್ […]

ಸರಕಾರಿ ಹೊದಿಕೆಗಳನ್ನು ಕದ್ದೊಯ್ದು ಮಹಿಳೆಯೊಂದಿಗೆ ಅಕ್ರಮ ಸಂಬಂಧ, ಪತ್ನಿಯಿಂದ ದೂರು

Tuesday, September 15th, 2020
Koragappa poojary

ಮಂಗಳೂರು: ಸರಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಪತಿಯ ಮೇಲೆ ಆತನ ಪತ್ನಿಯೇ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಮೂಲ್ಕಿ ಪೋಲಿಸ್ ಠಾಣೆಯಲ್ಲಿ ನಡೆದಿದೆ . ಪಡು ಪಣಂಬೂರು ಗ್ರಾಮದ ನಿವಾಸಿ ಸರಕಾರಿ ಹಾಸ್ಟೆಲ್ನಲ್ಲಿ ಅಡುಗೆ ಕೆಲಸದಲ್ಲಿರುವ ಕೊರಗಪ್ಪ ಪೂಜಾರಿಯ ಅಕ್ರಮ ಸಂಬಂಧದ ಬಗ್ಗೆ ಪತ್ನಿ ತೇಜಾಕ್ಷಿ ಎಂಬುವರು ದೂರು ದಾಖಲಿಸಿದ್ದಾರೆ. ಮುಲ್ಕಿಯಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ನೌಕರನಾಗಿರುವ ಈತ, ಸರ್ಕಾರ ಹಾಸ್ಟೆಲ್ ಮಕ್ಕಳಿಗೆ ನೀಡಿರುವ ಹೊದಿಕೆಗಳನ್ನು ಕದ್ದೊಯ್ದು ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ನೀಡಿದ್ದಾನೆ. ಕೆಲವನ್ನು ಮಾರಾಟ ಮಾಡಿದ್ದು, ಮನೆಗೂ ತಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ ಆತನ‌ ವಿರುದ್ಧ […]

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಮಧ್ಯವರ್ತಿಯಾಗಿದ್ದ ಮಹಿಳೆಯ ಬಂಧನ

Wednesday, August 26th, 2020
Sunitha

ಕಾಸರಗೋಡು : ಮಹಿಳೆ ಯೊಬ್ಬಳು  ಮಧ್ಯವರ್ತಿ ಯಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಯುವಕರಿಬ್ಬರಿಗೆ ಸಹಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಕುಂಬ್ಳೆ ಪೊಲೀಸರು ಬಂಧಿಸಿದ್ದಾರೆ. ಕಟ್ಟದಂಗಡಿ ಪೆರಿಯಡ್ಕದ ಕಾಲನಿಯ ಸುನಿತಾ (30) ಬಂಧಿತಳು. ಘಟನೆ ಕುಂಬಳೆಯಿಂದ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಂಬಳೆಯಲ್ಲಿ ಉತ್ಸವ ನೋಡಲೆಂದು 2018 ರ ಡಿಸಂಬರ್ 18 ರಂದು ರಾತ್ರಿ ಬಾಲಕಿಯನ್ನು ಕರೆದೊಯ್ದು ನಿರ್ಜನ ಸ್ಥಳದಲ್ಲಿ ಕೃತ್ಯ ನಡೆಸಿದ್ದು, ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾತ್ರಿ ಓರ್ವ […]

25 ವರ್ಷದ ಮಹಿಳೆಯ ಮೇಲೆ 139 ಮಂದಿ ಅತ್ಯಾಚಾರ

Sunday, August 23rd, 2020
rape

ಹೈದರಾಬಾದ್: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಸದಸ್ಯರು, ಸಿನಿಮಾ ಕ್ಷೇತ್ರದವರು, ಪತ್ರಕರ್ತರು, ವೈದ್ಯರು ಸೇರಿದಂತೆ 139 ಮಂದಿ ನನ್ನ ಮೇಲೆ 5000ಕ್ಕೂ ಹೆಚ್ಚು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು 25 ವರ್ಷದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇವರ ಪೈಕಿ ಹಲವರು ಅಮೆರಿಕಾ ಮತ್ತು ಬೆಂಗಳೂರಿನಲ್ಲಿ ಇರುವುದಾಗಿ ಹೈದರಾಬಾದ್ ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಗಂಡನ ಮನೆಯವರಿಂದ 2009ರಲ್ಲಿ ಲೈಂಗಿಕ ದೌರ್ಜನ್ಯ, ಹಿಂಸೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆ 2010ರಲ್ಲಿ ಗಂಡನಿಗೆ ವಿಚ್ಛೇದನ […]

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

Friday, August 7th, 2020
wonman-deadbody

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಜತ್ತೂರು ಗ್ರಾಮದ ನೀರಕಟ್ಟೆ ಡ್ಯಾಮ್ ಬಳಿಯ ನೇತ್ರಾವತಿ ನದಿಯಲ್ಲಿ ಆ. 6ರಂದು ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದೇಹವೂ ನದಿ ನೀರಿನಲ್ಲಿ ತೇಲಿಕೊಂಡು ಬಂದು ನೀರಕಟ್ಟೆ ವಿದ್ಯುತ್ ಸ್ಥಾವರದ ಆಣೆಕಟ್ಟಿನ ಕಸದ ರಾಶಿ ಜೊತೆ ಸೇರಿತ್ತು.ಈ ಬಗ್ಗೆ ವಿದ್ಯುತ್ ಸ್ಥಾವರದ ಕೆಲಸಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಸುಮಾರು 40 ರಿಂದ 50 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು, ಮೃತ […]

ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನು ಮದುವೆ ಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ಬೆಳೆಸಿ, ಲಕ್ಷ ಹೊಡೆಯುತ್ತಿದ್ದ

Tuesday, July 21st, 2020
jaganath

ಬೆಂಗಳೂರು :   ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ವೈವಾಹಿಕ ಜಾಲತಾಣವಾದ ಮ್ಯಾಟ್ರಿಮೋನಿ ಮೂಲಕ  ಮದುವೆ ಮಾಡಿಕೊಳ್ಳುವುದಾಗಿ  ನಂಬಿಸಿ  ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಬನಶಂಕರಿ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಮಹೇಶ್ ಆಲಿಯಾಸ್ ಜಗನ್ನಾಥ್ ಬಂಧಿತ ಆರೋಪಿ. ಮೂಲತಃ ಬಿಜಾಪುರದವನಾಗಿದ್ದು ಹಾಸನದಲ್ಲಿ ಮನೆ ಮಾಡಿಕೊಂಡಿದ್ದ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. 29 ವರ್ಷದ ಜಗನ್ನಾಥ್, ಆನ್‌ ಲೈನ್ ಮೂಲಕ ಮಹಿಳೆಯರನ್ನು ಸಂಪರ್ಕಿಸಿ  ಮದುವೆಯಾಗುವುದಾಗಿ ಹೇಳಿ ಮಹಿಳೆಯರಿಂದ ಲಕ್ಷ ಲಕ್ಷ ವಂಚಿಸಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಸಿಮ್ […]

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ರೂ.3 ಲಕ್ಷ ಸಾಲ

Wednesday, October 24th, 2018
woman loan

ಮಂಗಳೂರು :  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿಂದ ಗರಿಷ್ಷ ರೂ.3 ಲಕ್ಷ ಸಾಲ ಪಡೆದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿತಿಯ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2018-19ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಮಹಿಳೆಯರಿಗೆ 30% ಸಹಾಯಧನ, ಪರಿಶಿಷ್ಷ ಜಾತಿ ಮತ್ತು ಪರಿಶಿಷ್ಷ ಪಂಗಡದ ಮಹಿಳೆಯರಿಗೆ 50% , ಸಹಾಯಧನ ನೀಡಲಾಗುವುದು. ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿ ಇರುವ […]