ಯುವತಿಯರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳು

Sunday, September 20th, 2020
kishor Shetty

ಮಂಗಳೂರು : ನಗರ ಅಪರಾಧ ಪತ್ತೆ ದಳ ಮತ್ತು ನಾರ್ಕೊಟಿಕ್ಸ್ ಪೊಲೀಸರು ಡ್ರಗ್ಸ್ ಸೇವನೆ ಹಾಗೂ ಸಾಗಾಟ ಆರೋಪದಲ್ಲಿ ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಬಂಧಿತರಾಗಿದ್ದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಕೀಲ್ ನೌಶೀಲ್ (28) ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ (30) ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ಕೋವಿಡ್ ತಪಾಸಣೆಗೊಳಪಡಿಸಿದ ಬಳಿಕ […]

ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣ ಕಿತ್ತು ಹಾಕಬೇಕು : ಎಬಿವಿಪಿ

Thursday, September 3rd, 2020
Abvp protest

ಮಂಗಳೂರು :  ಸ್ಯಾಂಡಲವುಡ್ ನೊಂದಿಗೆ ನಂಟಿರುವ ಬೃಹತ್ ಡ್ರಗ್ಸ್ ಜಾಲವನ್ನು ಎನ್‌ಸಿಬಿ ಅಧಿಕಾರಿಗಳು ಭೇದಿಸಿರುವ ಬಗ್ಗೆ ಮತ್ತು ಡ್ರಗ್ಸ್ ಜಾಲದ ಹಿಂದೆ ಸಮಾಜದಲ್ಲಿ ಇರುವಂಥ ಪ್ರತಿಷ್ಠಿತ ಪ್ರಭಾವಿ ಶ್ರೀಮಂತ ಕುಟುಂಬಗಳ ವ್ಯಕ್ತಿಗಳು, ಸಿನಿಮಾ ನಟ, ನಟಿಯರು, ರಾಜಕಾರಣಿಗಳ ಮಕ್ಕಳು ಇರುವ ಮಾಹಿತಿಗಳು  ಈಗ ಜಗಜ್ಜಾಹೀರಾಗಿದೆ.  ಸಮಾಜಕ್ಕೆ ಮಾದರಿ ಆಗಬೇಕಾದವರೆಲ್ಲ ಇಂತಹ ಚಟಗಳಿಗೆ ಅಂಟಿಕೊಂಡಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಡ್ರಗ್ಸ್ ಜಾಲದ ಪಿಡುಗಿನಿಂದ ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತು ಹಾಕಲು ಕೇಂದ್ರ […]

ಬೆಂಗಳೂರು : ಮಾದಕ ವಸ್ತುಗಳ ಮಾರಾಟ ದಂಧೆ ಮೇಲೆ ಮುಗಿಬಿದ್ದ ಪೊಲೀಸರು

Thursday, March 19th, 2020
drugs

ಬೆಂಗಳೂರು : ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ಹಾವಳಿ ತೀವ್ರಗೊಂಡಿದೆ. ಇದರ ವಿರುದ್ಧ ಸಮರ ಸಾರಿರುವ ಪೊಲೀಸರು, ನಗರದಾದ್ಯಂತ 21 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ನೀಡಿದ್ದ ಕಟ್ಟುನಿಟ್ಟಿನ ಆದೇಶ ಮೇರೆಗೆ ನಗರದಾದ್ಯಂತ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾರ್ಚ್‌ 09 ರಿಂದ ಮಾರ್ಚ್‌ 17ರವರೆಗೆ ಸತತವಾಗಿ ಕಾರ್ಯಾಚರಣೆ ಕೈಗೊಂಡು, ಮಾದಕವಸ್ತು ಸೇವನೆ […]

ಬೆಂಗಳೂರು ಟೆಕ್ಕಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Friday, March 6th, 2020
tekki

ಬೆಂಗಳೂರು : ಟೆಕ್ಕಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್‌ ಮಾಡಿಕೊಂಡು ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲಕ ನಾಲ್ವರು ಆರೋಪಿಗಳು ಬೆಂಗಳೂರಿನ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಆಂಧ್ರ ಪ್ರದೇಶದಿಂದ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು. ಈ ಕುರಿತಾದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ […]

ಮಾದಕ ವಸ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ

Saturday, February 1st, 2020
bengre

ಮಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ಚೈಲ್ಡ್‌ಲೈನ್-1098ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವರೇ ತೋಟ ಬೆಂಗರೆ ಸ್ಯಾಂಡ್ಸ್‌ಪಿಟ್ ಅಂಗನವಾಡಿ ಕೇಂದ್ರದಲ್ಲಿ ತೆರೆದ ಮನೆ ಎಂಬ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಮತ್ತು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಯಾಗಿದ್ದು, ಸ್ಥಳೀಯ ಪ್ರದೇಶದಲ್ಲಿ ಗಾಂಜಾ, ಡ್ರಗ್ಸ್, ಮಾದಕ ವಸ್ತು ಸೇವನೆ, ಮಾರಾಟ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಯನ್ನು ಭಯಮುಕ್ತವಾಗಿ ಸಂಪರ್ಕಿಸುವಂತೆ ಪಣಂಬೂರು ಪೊಲೀಸ್ ಠಾಣೆಯ ಎ.ಎಸ್.ಐ ಅಶೋಕ್ ಕುಮಾರ್ ತಿಳಿಸಿದರು. ಚೈಲ್ಡ್‌ಲೈನ್-1098 ದಿನದ24 ಗಂಟೆಯೂ […]

ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Wednesday, November 27th, 2019
Drugs

ಮಂಗಳೂರು : ಮಂಗಳೂರು ನಗರದ ಲೇಡಿಹಿಲ್ ಸಮೀಪದ ಉರ್ವ ಚಿಲಿಂಬಿ ಶಿರ್ಡಿ ಸಾಯಿ ಮಂದಿರ ಬಳಿ ಕಾರಿನಲ್ಲಿ ಕುಳಿತು ಮಾದಕ ವಸ್ತುವಾದ ‘ಎಂಡಿಎಂಎ’ ಪೌಡರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮುಹಮ್ಮದ್ ನಿಯಾಝ್ (25) ಹಾಗೂ ಪಾಂಡೇಶ್ವರದ ಅಮೃತನಗರ ನಿವಾಸಿ ಮುಹಮ್ಮದ್ ಅಜೀಂ (30) ಎಂದು ಹೆಸರಿಸಲಾಗಿದೆ. ಮಂಗಳೂರು ನಗರದ ಇಕನಾಮಿಕ್ ಆಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ದೊರೆತ ಖಚಿತ […]

ಸಿಸಿಬಿ ಕಾರ್ಯಾಚರಣೆ : ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Friday, November 1st, 2019
Ganja

ಮಂಗಳೂರು  : ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಯುವಕರ ತಂಡವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಕೋಕೆನ್, ಎಂಡಿಎಂಎ, ಎಲ್ಎಸ್ ಡಿ, ಪಿಲ್ಸ್, ಚರಸ್ ಗಳನ್ನು ಹೊರರಾಜ್ಯಗಳಿಂದ ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು […]

ಬೀಚ್ ಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

Saturday, July 20th, 2019
MDMA

ಮಂಗಳೂರು : ಬೀಚ್ ಗಳಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪಣಂಬೂರು ಪೊಲೀಸರು ಕಾರ್ಯಾಚರಣೆ ನಡೆಸಿ ಶುಕ್ರವಾರ ಮೂವರನ್ನು ಬಂಧಿಸಿದ್ದು ಲಕ್ಷಾಂತರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಒಳಪೇಟೆಯ ಅಬೂಬಕ್ಕರ್‌ ಮಿಸ್ಭಾ (24), ಸೋಮೇಶ್ವರದ ಪೆರ್ಮನ್ನೂರು ಗ್ರಾಮ ಶಬ್ಬೀರ್‌ ಅಹಮ್ಮದ್‌(27) , ಉಳ್ಳಾಲದ ಶಿಹಾಬ್‌ ಅಬ್ದುಲ್‌ ರಝಾಕ್ (27)  ಬಂಧಿತ ಆರೋಪಿಗಳು. ಬಂಧಿತರಿಂದ 80 ಮೌಲ್ಯದ 16.45 ಗ್ರಾಂ ತೂಕದ ಎಂಡಿಎಂಎ, 25000 ರೂ ಮೌಲ್ಯದ ಸ್ಕೂಟರ್, 2 ಸಾವಿರ ಮೌಲ್ಯದ 4 […]

ಮಾದಕ ವಸ್ತುಗಳ ಮಾರಾಟಗಾರರು ಹಾಗೂ ಡೀಲರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Wednesday, June 26th, 2019
drug abuse

ಮಂಗಳೂರು : ಮಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ  ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಹಾಗೂ ಕಳ್ಳಸಾಗಾಟ ವಿರೋಧಿ ದಿನಾಚರಣೆ ಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಉದ್ಘಾಟಿಸಿದರು . ಮಾದಕ ವಸ್ತುಗಳ ಮಾರಾಟಗಾರರು ಹಾಗೂ ಡೀಲರ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು. ಯಾವುದೇ ರೀತಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಸೇವಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಪಾಟೀಲ್ ಎಚ್ಚರಿಸಿದ್ದಾರೆ. ದೇರಳಕಟ್ಟೆ ಕೆ.ಎಸ್. […]

ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ ಇಬ್ಬರು ಯುವಕರ ಬಂಧನ

Tuesday, April 2nd, 2019
mdm-drug

ಮಂಗಳೂರು : ನಗರದ ಸಿಸಿಬಿ ತಂಡ ಹಾಗೂ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯವರು ಶನಿವಾರ ಮಂಗಳೂರು ನಗರದ ಪಿ.ವಿ.ಎಸ್ ವ್ರತ್ತದ ಬಳಿ ಡಿ.ಎಂ.ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಆರೋಪಿಗಳಾದ 1)ಜಾವದ್ (28) ತಂದೆ: ಹುಸೈನ್ ವಾಸ: ನೆತ್ತೆರಕೆರೆ ಬಂಟ್ವಾಳ ಹಾಗೂ 2)ಬೆಂಗ್ರೆ ಶಾನ್ ನವಾಜ್ (33) ತಂದೆ:ಇಲಿಯಾಸ್ ತೊಕೊಟ್ಟು,ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆರೋಪಿ ಜಾವದ್ ನ ವಶದಿಂದ 24 ಗ್ರಾಂ ತೂಕದ ಎಂ.ಡಿ.ಎಂ.ಎ ಪೌಡರ್, ಕೆ.ಟಿ.ಎಂ.ಡ್ಯೂಕ್ […]