ಗೋವಾ ಪ್ರವಾಸ ಹೋರಾಟ ಮಿನಿ ಬಸ್ ಅಪಘಾತ, 11 ಮಹಿಳೆಯರ ದುರ್ಮರಣ, ಸಾವಿನ ಸಂಖ್ಯೆ ಏರಿಕೆ

Friday, January 15th, 2021
Goa Tour

ಧಾರವಾಡ :  ದಾವಣಗೆರೆಯಿಂದ ಮುಂಜಾನೆ ಮೂರು ಗಂಟೆಗೆ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಐದು ಮಂದಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್ ಮಾಡಲು ಗೋವಾದ ಪಣಜಿಗೆ ಖಾಸಗಿ ಮಿನಿ ಬಸ್ವೊಂದನ್ನು ಬುಕ್ ಮಾಡಿ ಪ್ರವಾಸ  ಕೈಗೊಂಡಿದ್ದರು. ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ […]

ಸುರತ್ಕಲ್ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ಸಿಗೆ ಲಾರಿ ಢಿಕ್ಕಿ; ಇಬ್ಬರು ಮಕ್ಕಳಿಗೆ ಗಾಯ

Wednesday, August 21st, 2019
Mini-bus

ಸುರತ್ಕಲ್ : ಇಲ್ಲಿನ ಹೊಸಬೆಟ್ಟು ತಿರುವಿನಲ್ಲಿ ಇಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ ಒಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ ಮಿನಿ ಬಸ್ ಹೊಸಬೆಟ್ಟು ಬಳಿ ಮುಖ್ಯ ರಸ್ತೆಯಿಂದ ಒಳರಸ್ತೆಗೆ ತಿರುಗುವ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಬರುತ್ತಿದ್ದ ಲಾರಿ ನೇರವಾಗಿ ಮಿನಿ ಬಸ್ಸಿನ ಎಡಬದಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಸಂದರ್ಭದಲ್ಲಿ ಬಸ್ಸಿನಲ್ಲಿ ಕೇವಲ ಇಬ್ಬರೇ ಮಕ್ಕಳಿದ್ದ ಕಾರಣ ಅದೃಷ್ಟವಶಾತ್ ಸಂಭಾವ್ಯ […]

ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹೋದರರಿಬ್ಬರ ಸಾವು

Tuesday, October 4th, 2016
accident

ಕಾರ್ಕಳ: ಆಟೋ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹೋದರರಿಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹೆಬ್ರಿಯಲ್ಲಿ ನಡೆದಿದೆ. ಶಿವಪುರ ಕಾಚಿಲ ನಿವಾಸಿ, ರಿಕ್ಷಾ ಚಾಲಕ ಗುರುಪ್ರಸಾದ್ ಹಾಗೂ ವಸಂತ್ ದುರ್ಘಟನೆಯಲ್ಲಿ ಮೃತಪಟ್ಟ ಸಹೋದರರು. ಶಿವಪುರದಿಂದ ಹೆಬ್ರಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಮಿನಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗುರುಪ್ರಸಾದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಗುರುಪ್ರಸಾದ್ ಅಣ್ಣ ವಸಂತ್‌ಗೂ ಗಂಭೀರ […]