ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

Monday, October 12th, 2020
Matsya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಲಿತೋದ್ಯಾನದಲ್ಲಿನ ಮತ್ಸ್ಯ ಪ್ರದರ್ಶನಾಲಯದಲ್ಲಿ ಅಲಂಕಾರಿಕ ಮೀನುಗಳನ್ನು‌ ಕೊಳಕ್ಕೆ ಬಿಡುವುದರ ಮೂಲಕ  ಮತ್ಸ್ಯ ಪ್ರದರ್ಶನಾಲಯವನ್ನು  ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಉದ್ಘಾಟಿಸಿದರು. ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಮೀನುಗಾರಿಕೆಯಲ್ಲಿ ರಾಜ್ಯವು 1ನೇ ಸ್ಥಾನಕ್ಕೆ ಬರುವಂತೆ ಪ್ರಯತ್ನಿಸಲಾಗುವುದು. ಯಾವುದೇ ಸಾಮಾಜಿಕ ಯೋಜನೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಾದರಿಯಾಗಿದೆ. ಮೀನುಗಾರಿಕಾ ಇಲಾಖೆ ಹೊಸ ಹೆಜ್ಜೆ ಇಟ್ಟಿದ್ದು, ಇಂದಿನ ಕಾರ್ಯಕ್ರಮದಿಂದ ಆತ್ಮವಿಶ್ವಾಸ ಇಮ್ಮಡಿಯಾಗಿದೆ ಎಂದು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. […]

ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 10 ಮೀನುಗಾರರ ರಕ್ಷಣೆ

Tuesday, January 23rd, 2018
mangaluru

ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಕೇರಳದ ಕಣ್ಣೂರಿನ 10 ಮಂದಿ ಮೀನುಗಾರರನ್ನು ಕರಾವಳಿ ತಟ ರಕ್ಷಣಾ ಪಡೆ ಭಾನುವಾರ ತಡರಾತ್ರಿ ರಕ್ಷಿಸಿದೆ. ಅರಬ್ಬಿ ಸಮುದ್ರದಲ್ಲಿ ಮಲ್ಪೆಯ ಪಶ್ಚಿಮಕ್ಕೆ 100 ನಾಟಿಕಲ್ ಮೈಲ್ಸ್ ದೂರದಲ್ಲಿ ಈ ಘಟನೆ ನಡೆದಿದೆ. ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಯಾಂತ್ರಿಕ ತೊಂದರೆ ಕಾಣಿಸಿಕೊಂಡು ದೋಣಿಯೊಳಕ್ಕೆ ನೀರು ನುಗ್ಗಲಾರಂಭಿಸಿತ್ತು. ಈ ಹಿನ್ನೆಲೆಯಲ್ಲಿ ದೋಣಿಯಲ್ಲಿದ್ದ 10 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಕುರಿತು ಭಾರತೀಯ ತಟ ರಕ್ಷಣಾ ಪಡೆಯ ಮಂಗಳೂರು ಕೇಂದ್ರಕ್ಕೆ […]