ಮೀನು ಸಾಗಾಟ ಲಾರಿಗಳ ತ್ಯಾಜ್ಯ ನೀರು ಹೊರ ಬಿಡಲು ಸ್ಥಳಾವಕಾಶ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Thursday, December 12th, 2019
minu

ಮಂಗಳೂರು : ವಿವಿಧ ನೆಪವೊಡ್ಡಿ ಸಾರ್ವಜನಿಕರು ಮತ್ತು ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಗುರುವಾರ ಮೀನು ಸಾಗಾಟ ಸ್ಥಗಿತಗೊಳಿಸಿದ ಲಾರಿ ಚಾಲಕರು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು. ಮಂಗಳೂರು ದಕ್ಕೆ ಮೀನು ಲಾರಿ ಚಾಲಕರ ಸಂಘ (ಸಿಐಟಿಯು) ಮತ್ತು ಕರಾವಳಿ ಕರ್ನಾಟಕ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಮುಖಂಡ ವಸಂತ ಆಚಾರಿ ಮಾತನಾಡಿದರು. ಮೀನು ಸಾಗಾಟ ಲಾರಿಗಳ ಮೀನು ತ್ಯಾಜ್ಯ ನೀರು ಸಂಗ್ರಹವಾಗುವ ಟ್ಯಾಂಕ್‌ಗಳಿಂದ ನೀರು ಹೊರಚೆಲ್ಲಲು […]

ಡಿ.12ರಂದು ಮಂಗಳೂರು ಮೀನು ಸಾಗಾಟ ಲಾರಿಗಳ ಮುಷ್ಕರ

Wednesday, December 4th, 2019
meenu

ಮಂಗಳೂರು : ಮೀನು ಸಾಗಾಟದ ಸಂದರ್ಭ ಲಾರಿಗಳ ತ್ಯಾಜ್ಯ ನೀರನ್ನು ನಿರ್ದಿಷ್ಟ ಪ್ರದೇಶಗಳಲ್ಲಿ ಚೆಲ್ಲಲು ಅವಕಾಶವಿಲ್ಲದೆ ವಿನಾಕಾರಣ ಲಾರಿ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಸ್ಥಳಾವಕಾಶಕ್ಕೆ ಒತ್ತಾಯಿಸಿ ಡಿ.12ರಂದು 24 ಗಂಟೆಯ ಲಾರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಇಂಜಿನಿಯರಿಂಗ್ ವರ್ಕರ್ಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಲಾರಿ ಚಾಲಕರು ದುಡಿಯುವ ವರ್ಗದವರಾಗಿದ್ದಾರೆ. ಹಿಂದೆ ಮೀನು ಸಾಗಾಟ ಮಾಡುವ ಲಾರಿಗಳಲ್ಲಿ […]