ನಾಲ್ಕು ಜನ ದರೋಡೆ ಕೋರರ ತಂಡದಿಂದ ರಾತ್ರಿ ವೇಳೆ ಹೈವೇ ದರೋಡೆ
Friday, July 2nd, 2021ಗದಗ : ನಾಲ್ಕು ಜನ ದರೋಡೆ ಕೋರರ ತಂಡವೊಂದು ಹೈವೇ ಪೆಟ್ರೋಲ್ ಬಂಕ್ ಬಳಿ ರಾತ್ರಿ ನಿಲ್ಲಿಸಿದ ವಾಹನಗಳ ಮೇಲೆ ದಾಳಿಮಾಡುತ್ತಿರುವ ಘಟನೆ ಜಿಲ್ಲೆಯ ಮುಂಡರಗಿ ಹೊರವಲಯದಲ್ಲಿ ನಡೆದಿದೆ. ತಡರಾತ್ರಿ ನಿದ್ರೆ ಬರುತ್ತಿದ್ದಂತೆ ಬಂಕ್ ಹಾಗೂ ಡಾಬಾ ಬಳಿ ವಾಹನಗಳನ್ನು ನಿಲ್ಲಿಸಿ ರೆಸ್ಟ್ ಮಡುವ ವೇಳೆ ದಾಳಿ ಮಾಡುತ್ತಿರುವ ದೃಶ್ಯ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯ ಮುಂಡರಗಿ ಹೊರವಲಯದ ವಿರೇಶ್ ಎಂಟರ್ ಪ್ರೈಸಸ್ ಪೆಟ್ರೋಲ್ ಬಂಕ್ ಬಳಿ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜರ್ಕಿನ್ ಹಾಕಿಕೊಂಡು ಮುಖಕ್ಕೆ ಮಂಕಿ ಕ್ಯಾಪ್, ಅಥವಾ ಕರವಸ್ತ್ರ ಕಟ್ಟಿಕೊಂಡು […]