ಕಾಂಗ್ರೆಸ್ ಗೂಂಡಾ ವರ್ತನೆ : ಸಚಿವ ಅಶೋಕ್ ಖಂಡನೆ

Monday, January 3rd, 2022
R Ashoka

ಬೆಂಗಳೂರು  : ರಾಮನಗರ ಜಿಲ್ಲೆಯಲ್ಲಿ ಸರ್ಕಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ತೋರಿದ ವರ್ತನೆ ಅವರಿಗೆ ಗೌರವ ತರುವಂತದ್ದಲ್ಲ. ಮಾನ್ಯ ಮುಖ್ಯಮಂತ್ರಿಗಳು ಇರುವ ವೇದಿಕೆಯಲ್ಲಿಯೇ ಅಗೌರವದಿಂದ ನಡೆದುಕೊಂಡಿದ್ದಾರೆ. ದೇವರಾಜ್ ಅರಸು ಕಾಲದಿಂದಲೂ ಕಾಂಗ್ರೆಸ್ ನಲ್ಲಿ ಗೂಂಡಾ ಸಂಸ್ಕೃತಿ ಇದೆ. ಈ ಘಟನೆಯಿಂದ ಕಾಂಗ್ರೆಸ್ ನಿಜವಾದ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಇದೇ ರೀತಿಯಲ್ಲಿ ವ್ಯವಹರಿಸುತ್ತದೆ. ಈ ರೀತಿಯ ತೋಳ್ಬಲಕ್ಕೆ ಮುಂದಾದರೆ ಸಾರ್ವಜನಿಕರೇ ತಕ್ಕಶಾಸ್ತಿ ಮಾಡುತ್ತಾರೆ.  ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಸರಳ, ಸಾಂಪ್ರದಾಯಿಕ ದಸರಾ ಆಚರಣೆ: ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ

Saturday, September 4th, 2021
dasara

ಬೆಂಗಳೂರು :  ಕೋವಿಡ್ 19 ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ, ಹತ್ತು ದಿನಗಳ ದೀಪಾಲಂಕಾರ ಮೊದಲಾದ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು. ಮೈಸೂರು, ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ನಡೆಸಲು ಆರು ಕೋಟಿ ರೂ. ಅನುದಾನ ಬಿಡುಗಡೆ […]

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ : ಸಿಎಂ ಆದೇಶ

Tuesday, August 10th, 2021
bouquet

ಬೆಂಗಳೂರು : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಆದೇಶ ಪ್ರಕಟ ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ […]

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

Thursday, July 1st, 2021
Press Day

ಬೆಂಗಳೂರು :  ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದರು. ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. […]

ಕರಾವಳಿಯ ಜನತೆಯ ಸಂಶಯವನ್ನು ನಿವಾರಣೆ ಮಾಡುವ ಜವಾಬ್ದಾರಿ ಮುಖ್ಯಮಂತ್ರಿಗಳು ವಹಿಸಬೇಕು: ಕ್ಯಾ.ಗಣೇಶ್‌‌ ಕಾರ್ಣಿಕ್

Friday, December 9th, 2016
Ganesh Karnik

ಮಂಗಳೂರು: ಎತ್ತಿನಹೊಳೆ ಯೋಜನೆಯಲ್ಲಿ ಸಾಕಷ್ಟು ತಾಂತ್ರಿಕ ತೊಂದರೆ, ಗೊಂದಲಗಳಿವೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಸಹಿತ ಮಂಗಳೂರಿಗೆ ಆಗಮಿಸಿ ಈ ಭಾಗದ ಜನತೆ ಹಾಗೂ ಜನಪ್ರತಿನಿಗಳ ಸಂಶಯಗಳನ್ನು ದೂರ ಮಾಡುವುದಾಗಿ ಹೇಳಿದ್ದರು. ಆದರೆ ಮುಖ್ಯಮಂತ್ರಿಗಳು ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್‌‌ ಕಾರ್ಣಿಕ್ ಹೇಳಿದ್ದಾರೆ. ಮಾಧ್ಯಮರೊಂದಿಗೆ ಮಾತನಾಡಿದ ಅವರು, 9.5ಕೋಟಿ ರೂ. ವೆಚ್ಚದಲ್ಲಿ 32 ವಷಗಳ ಹಿಂದೆ ಕೈಗೆತ್ತಿಕೊಂಡಿರುವ ವಾರಾಹಿ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಯೋಜನೆಗೆ ರೂ.689 ಕೋಟಿ ವೆಚ್ಚ ಮಾಡಲಾಗಿದೆ. 6,000 […]