Blog Archive

ಗೋಲ್ಡ್ ಸ್ಮಗ್ಲರ್ ಸ್ವಪ್ನಾ ಸುರೇಶ್ ‌ ಗೆ ಮುಖ್ಯಮಂತ್ರಿ ಪಿಣರಾಯಿ ಜೊತೆ ನಂಟು, ಮಾಜಿ ಕಾರ್ಯದರ್ಶಿ ಮಾರ್ಗದರ್ಶಕ

Saturday, August 8th, 2020
pinarayi swapna

ಕೊಚ್ಚಿ : ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಜೊತೆ ‘ಸಾಮಾನ್ಯ ಸಂಪರ್ಕ’ ಇದೆ ಎಂದು  ಬಹುಕೋಟಿ ಚಿನ್ನ ಕಳ್ಳಸಾಗಣೆ ಹಗರಣದ ರೂವಾರಿ ಸ್ವಪ್ನಾ ಸುರೇಶ್‌ ಒಪ್ಪಿಕೊಂಡಿದ್ದಾಳೆ. ಹಗರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ ಕೋರ್ಟ್‌ಗೆ ಈ ವಿಷಯವನ್ನು ತಿಳಿಸಿದೆ. ಅದರೊಂದಿಗೆ, ಹಗರಣದಲ್ಲಿ ಕೇರಳದ ಮುಖ್ಯಮಂತ್ರಿ ಕೂಡ ಭಾಗಿಯಾದ್ದು, ಅವರು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಕೂಗಿಗೆ ಮತ್ತಷ್ಟು ಬಲ ಬಂದಂತಾಗಿದೆ. ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್‌ ತನ್ನ ಮಾರ್ಗದರ್ಶಕ ಎಂದೂ ಹೇಳಿದ್ದಾಳೆ. […]

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಸೋಂಕು ದೃಢ

Wednesday, August 5th, 2020
HarishPoonja

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಕೊರೊನಾ […]

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢ, ಪುತ್ರಿಗೂ ಸೋಂಕು ದೃಢ

Monday, August 3rd, 2020
cm-yediyurappa

ಬೆಂಗಳೂರು :  ಕರ್ನಾಟಕ  ಸಿಎಂ ಯಡಿಯೂರಪ್ಪ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. “ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು” ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ, ಇವತ್ತು ಸಂಜೆ ನಿರ್ಧಾರ

Wednesday, July 22nd, 2020
koto Srinivas

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ  ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ […]

ಜಗದೀಶ ಶೆಟ್ಟರ್‌, ಜೋಶಿ ಮುಖ್ಯಮಂತ್ರಿ ಮಾಡಲು ತಂತ್ರ !

Sunday, May 31st, 2020
satish-jakkaraholi

ಹುಬ್ಬಳ್ಳಿ : ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸರಕಾರದಲ್ಲಿ ಸಚಿವರಾಗಿರುವ ಜಗದೀಶ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿರುವ ಜಾರಕಿಹೊಳಿ, ಬಿಜೆಪಿಯ ಕೆಲ ನಾಯಕರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಗ್ಗೆ ಬಿಜೆಪಿಯ […]

ಕೋರೋನ ವೈರಸ್ – ಮುಖ್ಯಮಂತ್ರಿ ಪರಿಹಾರ ನಿಧಿಗೆ 1,25,000 ರೂಪಾಯಿ ದೇಣಿಗೆ

Wednesday, April 22nd, 2020
UdupiCorona

ಉಡುಪಿ : ಕೋರೋನ ವೈರಸ್ ಎಂಬ ಈ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹರಡಿದ್ದು ಮನುಕುಲಕ್ಕೆ ಸಂಕಷ್ಟವನ್ನು ಉಂಟುಮಾಡಿದೆ ಈ ನಿಟ್ಟಿನಲ್ಲಿ ಪರಿಹಾರ ಹಾಗೂ ಮುಂಜಾಗೃತ ಕ್ರಮಗಳು ಸಮರೋಪಾದಿಯಲ್ಲಿ ಸಾಗುತ್ತಿವೆ. ಉಡುಪಿಯ ಉದ್ಯಮಿಗಳಿಬ್ಬರು  ಕೋರೋನ ವೈರಸ್ ನಿಧಿಗೆ ದಾನ ಮಾಡುವ ಮೂಲಕ ಸಹಕಾರ ನೀಡಿದ್ದಾರೆ. ಕೋರೋನ ವೈರಸ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 1,25,000 ರೂಪಾಯಿ ಚೆಕ್ಕನ್ನು ದೇಣಿಗೆ ಯಾಗಿ ಅಮೃತ್ ಪಾಟೇಲ್ ಪುರುಷೋತ್ತಮ್ ಪಾಟೀಲ್ ಹಾಗೂ ಮನ್ಸುಕ್ ಪಾಟೀಲರವರು ಶಾಸಕರಾದ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಜಿ. […]

ಮಂಗಳೂರು : ಐವರು ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ 

Monday, March 9th, 2020
police medal

ಮಂಗಳೂರು : ಕರ್ತವ್ಯದಲ್ಲಿ ಅತ್ಯುತ್ತಮ ಸಾಧನೆಗೈದ ಜಿಲ್ಲೆಯ ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ದೊರಕಿದೆ. ವರುಣ್ ಆಳ್ವ ಹೆಡ್ ಕಾನ್ಸ್‍ಟೇಬಲ್ ಸಿಎಆರ್, ಹರೀಶ್ ಪದವಿನಂಗಡಿ ಎಎಸ್‍ಐ ಸಿಸಿಬಿ, ದಿನೇಶ್ ಎನ್ ಸಿ.ಎಚ್.ಸಿ, ಮಂಗಳೂರು ಉತ್ತರ ಠಾಣೆ, ಕೆ. ಗೋಪಾಲಕೃಷ್ಣ ಸಿ.ಎಚ್.ಸಿ, ಕಾವೂರು ಠಾಣೆ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರೆತಿದೆ. ಅದೇ ರೀತಿ ಈ ಹಿಂದೆ ಪಣಂಬೂರು ಪೊಲೀಸ್ ಇನ್ಸ್‍ಪೆಕ್ಟರ್ ಆಗಿದ್ದ ರಫೀಕ್ ಕೆ.ಎಂ ಅವರಿಗೆ 2018 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ದೊರಕಿದೆ.  

ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Tuesday, February 25th, 2020
BJP

ಮಂಗಳೂರು : ನೂತನ ಜಿಲ್ಲಾಧ್ಯಕ್ಷರ ಪದಗ್ರಹಣವೆಂದರೆ ಅಧಿಕಾರ ಸ್ವೀಕಾರ ಮಾತ್ರವಲ್ಲ; ಮುಂದಿನ ಗ್ರಾ. ಪಂ. ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಜಯ ದಾಖ ಲಿಸುವುದಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 8 ಶಾಸಕ ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆಯನ್ನು ಸ್ವೀಕರಿಸುವ ಕಾರ್ಯಕ್ರಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಸೋಮವಾರ ಜರಗಿದ ಬಿಜೆಪಿ ದಕ್ಷಿಣ ಕನ್ನಡ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಅವರ ಪದಗ್ರಹಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ತುಳು ಭಾಷೆಗೆ ಮಾನ್ಯತೆ ನೀಡಲು ಆಗ್ರಹ : ಮುಖ್ಯಮಂತ್ರಿಯವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

Wednesday, February 19th, 2020
vedhavyas

ಮಂಗಳೂರು : ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಆಗ್ರಹಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಹಾಗೂ ಅದನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಕರಾವಳಿಗರಿಂದ ತೀವ್ರವಾದ ಆಗ್ರಹಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಕಚೇರಿಯಲ್ಲಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ […]

ಮುಖ್ಯಮಂತ್ರಿಗಳನ್ನು ಭೇಟಿಯಾದ ಹೋರಾಟ ಸಮಿತಿ : ಫೆ.18 ರಂದು ದೊರೆಸ್ವಾಮಿ ಬಾಳುಗೋಡು ಗ್ರಾಮಕ್ಕೆ ಭೇಟಿ

Monday, February 17th, 2020
horata

ಮಡಿಕೇರಿ : ಸರ್ಕಾರಿ ಜಾಗದಲ್ಲಿ ನೆಲೆನಿಂತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಒಕ್ಕಲೆಬ್ಬಿಸುವುದಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿರುವುದಾಗಿ ಬಹುಜನ ಕಾರ್ಮಿಕ ಸಂಘದ ಅಧ್ಯಕ್ಷ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಕೆ.ಮೊಣ್ಣಪ್ಪ ತಿಳಿಸಿದ್ದಾರೆ. ಬಹುಜನ ಕಾರ್ಮಿಕರ ಸಂಘ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ವತಿಯಿಂದ ಕೇಂದ್ರ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ […]