Blog Archive

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ

Thursday, July 7th, 2022
Veerendra Hegde

ಬೆಂಗಳೂರು : ಸನ್ಮಾನ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, […]

ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

Saturday, June 25th, 2022
Trafic

ಬೆಂಗಳೂರು : ಬೆಂಗಳೂರಿನ ಹೆಬ್ಬಾಳ, ಮಹದೇವಪುರ ಹೊರವರ್ತುಲ ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಸೆಂಟ್ ಜಾನ್ಸ್ ಆಸ್ಪತ್ರೆ, ಭಟ್ಟರಹಳ್ಳಿ ಜಂಕ್ಷನ್, ವೈಟ್‍ಫೀಲ್ಡ್ ರಸ್ತೆ ಗಳು ಸೇರಿದಂತೆ 10 ಪ್ರಮುಖ ಪ್ರದೇಶಗಳಲ್ಲಿನ ವಾಹನ ಸಂಚಾರ ದಟ್ಟಣೆ ನಿವಾರಿಸುವುದರ ಜತೆ ಟ್ರಾಫಿಕ್ ಸಿಗ್ನಲ್ ಗಳನ್ನು ಸಿಂಕ್ರೋನೈಜ್ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಈ ಕೆಲಸದ ಮೇಲುಸ್ತುವಾರಿಯನ್ನು ಖುದ್ದು ಡಿಸಿಪಿ ಗಳೇ ವಹಿಸಿಕೊಳ್ಳಬೇಕೆಂದು ಅವರು ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರದ […]

ಡಾ. ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ ; ಸಿಎಂ ಅವರಿಂದ ನಿವೇಶನ ಕ್ರಯಪತ್ರ ಹಸ್ತಾಂತರ

Saturday, June 25th, 2022
Timmakka

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು. ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು. ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಕೆಲವು ದಿನಗಳ […]

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಮೊದಲ ಬಾರಿಯೇನಲ್ಲ : ಮುಖ್ಯಮಂತ್ರಿ

Thursday, June 23rd, 2022
Uttara Kannada

ನವದೆಹಲಿ : ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು ಹಲವಾರು ವರ್ಷಗಳಿಂದ ಅವರು ಹೇಳಿದ್ದಾರೆ. ಅದಕ್ಕೆ ಅವರೇ ಉತ್ತರ ನೀಡಬೇಕು ಎಂದರು. ರಸ್ತೆ ಕಾಮಗಾರಿ: ವಿವರ ನೀಡಿದರೆ ತನಿಖೆಬಿಬಿಎಂಪಿ ರಸ್ತೆ […]

ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ: ಮುಖ್ಯಮಂತ್ರಿ

Wednesday, June 15th, 2022
Charlie

ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ ಸನ್ನಿ’ ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ. ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು. ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ ಎಂದು […]

ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಒತ್ತು ನೀಡಿದೆ: ಮುಖ್ಯಮಂತ್ರಿ

Monday, June 13th, 2022
Bommai

ಬೆಂಗಳೂರು : ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಜರಾಜೇಶ್ವರಿನಗರ ವಿಧಾನಸೌಧದ ವ್ಯಾಪ್ತಿಯಲ್ಲಿನ ಕೊಳಗೇರಿ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ 1588 ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಬ್ಯಾಂಕುಗಳಿಗೆ ಸರ್ಕಾರದ ಗ್ಯಾರಂಟಿಸರ್ಕಾರವು 52 ಸಾವಿರ ಮನೆಗಳನ್ನು ಪೂರ್ತಿ ಮಾಡಿದ್ದು, ಇನ್ನು 50 ಸಾವಿರ ಮನೆಗಳಿಗೆ ನಾವು ಈ ವರ್ಷ ಕಾರ್ಯಾದೇಶ […]

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಂಕಣಬದ್ಧ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Saturday, June 11th, 2022
Bommai

ಬೆಳಗಾವಿ : ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಾನು ಕಂಕಣಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಕೆ.ಎಲ್.ಇ ಸೊಸೈಟಿಯಲ್ಲಿ ವಾಯುವ್ಯ ಶಿಕ್ಷಕ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು. ಸೂಕ್ತ ಅಭ್ಯರ್ಥಿಗಳನ್ನು ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸಿದರೆ ಅವರ ಸಲಹೆ ಸೂಚನೆಗಳನ್ನು ಪಡೆದು ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಆದ್ದರಿಂದ ಮೊದಲನೇ ಪ್ರಾಶಸ್ತ್ಯ ಮತವನ್ನು ಅರುಣ್ ಶಹಪುರ ಹಾಗೂ ಹನುಮಂತರ ನಿರಾಣಿಯವರಿಗೆ ನೀಡಬೇಕು. ಸರಿಯಾದ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ನಿಮ್ಮನ್ನು […]

ಎಲ್ಲಾ ಧರ್ಮಗಳು ಮಾನವೀಯತೆಯನ್ನು ಸಾರುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, June 9th, 2022
Haj Yatre

ಬೆಂಗಳೂರು : ಎಲ್ಲಾ ಧರ್ಮಗಳು ಮಾನವೀಯತೆಯನ್ನು ಸಾರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಹಜ್ ಭವನದಲ್ಲಿ ಹಜ್‍ಯಾತ್ರೆ -2022 ರ ಮೊದಲ ಮೊದಲ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಹಜ್ ಗೆ ಹೋಗಿ ಬಂದ ನಂತರ ಹಾಜಿಯಾಗಿ ಕಟ್ಟುನಿಟ್ಟಿನ ಬದುಕು ನಡೆಸಬೇಕು. ಅತ್ಯಂತ ಶುದ್ಧ ಬದುಕನ್ನು ನಡೆಸಬೇಕು. ಆಗ ಅಲ್ಲಿಗೆ ಹೋಗಿ ಬಂದದ್ದು ಸಾರ್ಥಕವಾಗುತ್ತದೆ. ನಿಮ್ಮ ದುವಾ ಪೂರ್ಣವಾಗಬೇಕಾದರೆ ಒಳ್ಳೆತನದಿಂದ ನಡೆದುಕೊಳ್ಳುವುದು ಅಗತ್ಯ. ಕೆಲವರು ಮಾತ್ರ ಮನುಷ್ಯತ್ವದಿಂದ ನಡೆದುಕೊಂಡು ದೇವಮಾನವರಾಗುತ್ತಾರೆ. ಬದುಕಿನಲ್ಲಿ […]

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, March 14th, 2022
narega festival

ಬೆಂಗಳೂರು : ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರ ವಿಕೇಂದ್ರೀಕರಣ ಜೇನುತುಪ್ಪದಂತಿರಬೇಕು: ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ […]

ಸವ೯ಸ್ಪಶಿ೯ ಸವ೯ವ್ಯಾಪಿ ಅಭಿವೃದ್ಧಿಪರ ಬಜೆಟ್ – ಕೆ ಪ್ರತಾಪಸಿಂಹ ನಾಯಕ್

Friday, March 4th, 2022
prathapa-simha

ಮಂಗಳೂರು : ಕನಾ೯ಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಯವರು ಸಮಗ್ರ ಕನಾ೯ಟಕ ಮತ್ತು ಸಮಾಜದ ಎಲ್ಲಾ ವಗ೯ಗಳನ್ನು ಗಮನದಲ್ಲಿ ಇಟ್ಟುಕೊಂಡು ಒಳ್ಳೆಯ ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ. ತಮ್ಮ ಚೊಚ್ಚಲ ಬಜೆಟ್ನಲ್ಲಿ ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಒತ್ತು ನೀಡಿದ್ದಾರೆ. ಕೋರೊನಾ ಸಂಕಷ್ಟದಿಂದ ಹೊರಬರಲು ಪ್ರಯತ್ನಿಸುತ್ತಿರುವ ಆಥಿ೯ಕತೆಯ ಇತಿಮಿತಿಯಲ್ಲಿ ಇದು ಅತ್ಯುತ್ತಮ ಬಜೆಟ್. ಕರಾವಳಿಯ ಅಭಿವೃದ್ಧಿಯ ದೃಷ್ಟಿಯಿಂದ ದೀರ್ಘಕಾಲಿಕ ಮತ್ತು ಜನೋಪಯೋಗಿ ಯೋಜನೆ ಒಳಗೊಂಡಿದೆ ಎಂದು ವಿಧಾನ […]