Blog Archive

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ

Monday, July 26th, 2021
BS Yediyurappa

ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ […]

ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ

Sunday, July 25th, 2021
BS Yediyurappa

ಬೆಳಗಾವಿ : ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ (ಜು.25) ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ […]

ನಗರ ಪ್ರದಕ್ಷಿಣೆಯಲ್ಲಿ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ ಸಚಿವ ಅಶೋಕ

Friday, July 23rd, 2021
R Ashoka

ಬೆಂಗಳೂರು : ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕಂದಾಯ ಸಚಿವ ಆರ್ ಅಶೋಕ ಕೂಡಾ ಸಾಥ್ ನೀಡಿದರು. ಈ ವೇಳೆ ನಗರದ ವಿವಿಧ ಪ್ರಮುಖ ಜಂಕ್ಷನ್‍ ಗಳಲ್ಲಿ ಥೀಮ್ ಆಧಾರಿತ ಯೋಜನೆಗಳನ್ನ ಅಭಿವೃದ್ಧಿ ಪಡಿಸುವ ಕುರಿತಂತೆ ಘೋಷಣೆ ಮಾಡಲಾಯಿತು. ಇದರ ಮೊದಲ ಭಾಗವಾಗಿ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಲ್ಲಿ ನಿರ್ಮಿಸಲಾದ ಮೇಕ್ ಇನ್ ಇಂಡಿಯಾ ಸಿಂಹದ ಲಾಂಛನವನ್ನ ಇದೇ ಫೆಬ್ರವರಿ 27ರಂದು […]

ಕ್ಯಾಪ್‍ಜೆಮಿನಿ ವತಿಯಿಂದ ವೈದ್ಯಕೀಯ ಸಲಕರಣೆಗಳ ಪೂರೈಕೆ:ಮುಖ್ಯಮಂತ್ರಿಗಳ ಶ್ಲಾಘನೆ

Tuesday, July 20th, 2021
CM

ಬೆಂಗಳೂರು : ಕ್ಯಾಪ್‍ಜೆಮಿನಿ ಟೆಕ್ನಾಲಜಿ ಸರ್ವಿಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಇಂದು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ವಿಕ್ಟೋರಿಯಾ ಹಾಗೂ ಚರಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ 400 ಎಲ್‍ಎಂಪಿ ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೋವಿಡ್ 19 ಎರಡನೇ ಅಲೆಯ ನಿಯಂತ್ರಣ ಹಾಗೂ ಚಿಕಿತ್ಸೆಗೆ ಖಾಸಗಿ ವಲಯ ಸರ್ಕಾರದೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು. ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಸಾಂಸ್ಥಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂತಹ ಕ್ರಮಗಳನ್ನು ಕೈಗೊಂಡಿರುವುದು ಅನುಕರಣೀಯ. […]

ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Friday, July 16th, 2021
CM Delhi

ನವ ದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರುಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

Thursday, July 8th, 2021
Yedyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ , ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ನಾಗಾಂಬಿಕಾ ದೇವಿ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ […]

ಮುಂದಿನ ಚುನಾವಣೆಯಲ್ಲಿ ಎಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ – ವಿನಯ್ ಗುರೂಜಿ ಭವಿಷ್ಯ

Saturday, July 3rd, 2021
vinaya Guruji

ಬೆಂಗಳೂರು : ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು, ಎಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ, ಅಲ್ಲದೇ, ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದ್ದು, ಅವರು ಶಾಸಕರಾಗುತ್ತಾರೆ ಎಂದಿದ್ದಾರೆ. ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿ ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಭೇಟಿ ನೀಡಿ ಗುರೂಜಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ […]

ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ ವೈದ್ಯಕೀಯ ಉಪಕರಣಗಳ ಹಸ್ತಾಂತರ

Thursday, July 1st, 2021
medical equipment

ಬೆಂಗಳೂರು : ವಿವಿಧ ಕಂಪನಿಗಳ ವತಿಯಿಂದ 40 ಐಸಿಯು ಹಾಸಿಗೆಗಳನ್ನು ಹಾಗೂ ವೈದ್ಯಕೀಯ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಸಿ.ಐ.ಐ, ಎಂಬೆಸ್ಸಿ, 3 ಎಂ, ಸ್ವಿಸ್ ರೇ, ಕ್ಯಾಪಿಟಲ್ ಲ್ಯಾಂಡ್ ಹೋಪ್ ಪೌಂಡೇಷನ್ ಆಕ್ಸಾ, ಐಕೆಮಾ ಸಂಸ್ಥೆಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ 40 ಐಸಿಯು ಹಾಸಿಗೆಗಳು ಹಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಕಂಪನಿಗಳು ಸರ್ಕಾರದೊಂದಿಗೆ […]

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲನೆ

Tuesday, June 29th, 2021
Badre Meldande

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ […]

ಅಧಿಕ ಪೌಷ್ಠಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Monday, June 28th, 2021
Siddu Jack fruit

ಬೆಂಗಳೂರು : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ […]