ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Monday, July 26th, 2021
BS Yediyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಶೌರ್ಯ ಚಕ್ರ ಪುರಸ್ಕೃತ ಲೆ.ಕರ್ನಲ್ ಅಜಿತ್ ವಿ.ಭಂಡಾರ್ಕರ್ ಅವರ ಆತ್ಮಚರಿತ್ರೆ ‘Saga of a Braveheart ‘ ಪುಸ್ತಕ ವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

ಕೊಡಗನ್ನು ಮೊದಲ ಸ್ಥಿತಿಗೆ ತರಲು ಎಷ್ಟು ಬೇಕಾದರೂ ಹಣ ನೀಡಲು ಸಿದ್ಧ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

Tuesday, January 28th, 2020
BSY

ಮಡಿಕೇರಿ : ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯನ್ನು ಮೊದಲ ಸ್ಥಿತಿಗೆ ತರಲು ಎಷ್ಟು ಬೇಕಾದರು ಹಣವನ್ನು ನೀಡಲು ಸಿದ್ಧ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೂ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿಯಿಂದ […]

ಲೇಡಿಗೋಶನ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ

Saturday, April 16th, 2011
ಲೇಡಿಗೋಶನ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ

ಮಂಗಳೂರು : ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ಆವರಣದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ಆಂಧ್ರ ಪ್ರದೇಶದ ಉದ್ಯಮಿ ರಾಘವ ನಾಯ್ಡು ನಿರ್ಮಿಸಿ ಕೊಡಲಿರುವ ಎಂಟು ಅಂತಸ್ತುಗಳ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೆ.ಆರ್. ಕೀರ್ತಿ ಫೌಂಡೇಶನ್ ಟ್ರಸ್ಟ್ ನ ಆಡಳಿತ ಟ್ರಸ್ಟಿ ರಾಘವ ನಾಯ್ಡು ರವರು ತನ್ನ ಕೀರ್ತಿ ಶೇಷ ಪುತ್ರಿ ಕೆ.ಆರ್.ಕೀರ್ತಿ ಯ ಹೆಸರಿ ನಲ್ಲಿ ಮಂಗಳೂರಿನ ಜನತೆಗೆ […]